ನಮಸ್ಕಾರ ಸ್ನೇಹಿತರೆ 2023 24ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯ ಧನವನ್ನು ನೀಡಲು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ಮುಂದಾಗಿದೆ. ನೀವು ಕೂಡ ಕಾರ್ಮಿಕರ ಮಕ್ಕಳು ಆಗಿದ್ದರೆ ಕರ್ನಾಟಕ ಕಾರ್ಮಿಕ ಶೈಕ್ಷಣಿಕ ನೆರವು ಸಿಗಲಿದ್ದು ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಕಾರ್ಮಿಕರ ಕಲ್ಯಾಣ ಮಂಡಳಿಯು ಪ್ರತಿ ವರ್ಷವೂ 20 ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ.
ಶೈಕ್ಷಣಿಕ ಪ್ರೋತ್ಸಾಹ ಧನ :
ಕಾರ್ಮಿಕ ಕಲ್ಯಾಣ ಮಂಡಳಿಯ ಈ ಒಂದು ಯೋಜನೆ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. 6000 ದಿಂದ 20,000ಗಳವರೆಗೆ ಶೈಕ್ಷಣಿಕ ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳು ಪಡೆಯಬಹುದಾಗಿದೆ.
ವಿದ್ಯಾರ್ಥಿ ವೇತನಕ್ಕೆ ಇರುವ ಅರ್ಹತೆಗಳು :
ಪ್ರೌಢಶಾಲಾ ಮಕ್ಕಳು ಪಿಯುಸಿ ಡಿಪ್ಲೋಮಾ ಡಿಗ್ರಿ ಪದವೀಧರರು ಐಟಿಐ ಸ್ನಾತಕೋತ್ತರ ಪದವೀಧರರು ಇಂಜಿನಿಯರಿಂಗ್ ಓದುತ್ತಿರುವವರು ಹಾಗೂ ವೈದ್ಯಕೀಯ ಶಿಕ್ಷಣವನ್ನು ಪಡೆಯುತ್ತಿರುವವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಕನಿಷ್ಠ 50 % ಅಂಕಗಳನ್ನು ಶೈಕ್ಷಣಿಕ ಅಂಕಪಟ್ಟಿಯಲ್ಲಿ ಸಾಮಾನ್ಯ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಪಡೆದಿರಬೇಕು. 40% ಅಂಕಗಳನ್ನು ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳು ಗಳಿಸಿರಬೇಕು. ಈ ವಿದ್ಯಾರ್ಥಿಗಳು ಕಾರ್ಮಿಕರ ಮಕ್ಕಳಾಗಿರಬೇಕು ಹಾಗೂ ಖಾಯಂ ಆಗಿ ಕರ್ನಾಟಕದಲ್ಲಿ ವಾಸವಾಗಿರಬೇಕು.
ಈ ಕೆಳಗಿನ ದಾಖಲಾತಿಗಳನ್ನು ಹೊಂದಿರಬೇಕಾಗುತ್ತದೆ :
ಕಾರ್ಮಿಕ ಕಲ್ಯಾಣ ಮಂಡಳಿಯು ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಕಾರ್ಮಿಕರ ಮಕ್ಕಳು ಎಂಬ ಗುರುತಿನ ಚೀಟಿ ಪಾಸ್ಪೋರ್ಟ್ ಆಧಾರ್ ಕಾರ್ಡ್ ಆದಾಯ ಪ್ರಮಾಣ ಪತ್ರ ಜಾತಿ ಪ್ರಮಾಣ ಪತ್ರ ಕಾರ್ಮಿಕರ ಕಾರ್ಡ್ ಬ್ಯಾಂಕ್ ಖಾತೆ ವಸತಿ ಪ್ರಮಾಣ ಪತ್ರ ಶಂಕರಶೀದಿ ಹಿಂದಿನ ವರ್ಷದ ಶೈಕ್ಷಣಿಕ ಅಂಕಪಟ್ಟಿ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಕಾರ್ಮಿಕ ಮಂಡಳಿಯು ನೀರುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. https://klwbapps.karnataka.gov.in/ಈ ವೆಬ್ ಸೈಟ್ ಗೆ ಭೇಟಿ ನೀಡಿ ವಿದ್ಯಾರ್ಥಿ ವೇತನಕ್ಕೆ ಜನವರಿ 31 2024ರ ಒಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿರುತ್ತದೆ.
ಹೀಗೆ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯುವ ಉದ್ದೇಶದಿಂದ ಹಾಗೂ ಅವರ ವಿದ್ಯಾಭ್ಯಾಸದಲ್ಲಿ ಯಾವುದೇ ಕೊರತೆ ಆಗಬಾರದು ಎನ್ನುವ ಉದ್ದೇಶದಿಂದ ಜೊತೆಗೆ ಕಾರ್ಮಿಕರ ಮಕ್ಕಳು ಸಹ ಉನ್ನತ ಶಿಕ್ಷಣವನ್ನು ಪಡೆಯಬೇಕೆಂದುವ ಉದ್ದೇಶದಿಂದ ಕಾರ್ಮಿಕರ ಮಕ್ಕಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು, ಸುಮಾರು 50 ಸಾವಿರ ರೂಪಾಯಿಗಳವರೆಗೆ ಈ ವಿದ್ಯಾರ್ಥಿ ವೇತನವನ್ನು ತಮ್ಮ ಬ್ಯಾಂಕ್ ಖಾತೆಗೆ ನೆರವಾಗಿ ವರ್ಗಾವಣೆ ಮಾಡಲಾಗುತ್ತದೆ. ಹಾಗಾಗಿ ಕಾರ್ಮಿಕರ ಮಕ್ಕಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.