SSC Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್(Staff Selection Commission) ಖಾಲಿ ಇರುವ 75,768 ಕಾನ್ಸ್ಟೇಬಲ್ (GD) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್ ಸೆಲೆಕ್ಷನ್ ಕಮಿಷನ್(SSC)ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಮಾಡ ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತರು ಡಿಸೆಂಬರ್ 28, 2023 ಅಂದರೆ ಇವತ್ತೇ ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ssc.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ಬಿಎಸ್ಎಫ್(BSF)- 27,875
ಸಿಐಎಸ್ಎಫ್(CISF)- 8598
ಸಿಆರ್ಪಿಎಫ್ (CRPF)- 25,427
ಎಸ್ಎಸ್ಬಿ(SSB)- 5278
ಐಟಿಬಿಪಿ(ITBP)- 3006
ಅಸ್ಸಾಂ ರೈಫಲ್ಸ್- 4776
ಎಸ್ಎಸ್ಎಫ್(SSF)- 583
ಎನ್ಐಎ(NIA)- 225
ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:
ಮಹಿಳೆಯರು/SC/ST/ESM ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಆನ್‌ಲೈನ್/ಚಲನ್
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದೈಹಿಕ ದಕ್ಷತೆಯ ಪರೀಕ್ಷೆ
ದೈಹಿಕ ಪ್ರಮಾಣಿತ ಪರೀಕ್ಷೆ
ವಿವರವಾದ ವೈದ್ಯಕೀಯ ಪರೀಕ್ಷೆ
ವೈದ್ಯಕೀಯ ಪರೀಕ್ಷೆಯನ್ನು ಪರಿಶೀಲಿಸಿ
ಸಂದರ್ಶನ
ವೇತನ:
ಮಾಸಿಕ ₹ 18,000-69,100
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/11/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 28, 2023