ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ, ಕಾರಣ ತಿಳಿಯಿರಿ

ವಿಕಲಚೇತನ & ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಯಂತ್ರ ಚಾಲಿತ ದ್ವಿಚಕ್ರ ವಾಹನ & ಶ್ರವಣ ದೋಷವುಳ್ಳ ವಿಕಲಚೇತನರಿಗೆ ಹೊಲಿಗೆಯ ಯಂತ್ರ, ಸಾಧನೆ ಸಲಕರಣೆ, ಅಂಧ ವಿದ್ಯಾರ್ಥಿಗಳಿಗೆ ಭ್ರೈಲ್ ಕಿಟ್ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.



ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅರ್ಹ ಆಸಕ್ತರು ಗ್ರಾಮ ಒನ್ ಸೇರಿದಂತೆ, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ & ಸೇವಾ ಸಿಂಧು ಪೋರ್ಟಲ್ ಆಗಿರುವ, https://sevasindhu.karnataka.gov.in/sevasindhu/departmentservices ಮೂಲಕ ಆನ್ ಲೈನ್ ಮೂಲಕ ಅಗತ್ಯ ದಾಖಲೆಗಳ ಜೊತೆಗೆ, ಜನವರಿ 31 ರ ಒಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಯಾರನ್ನು ಸಂಪರ್ಕಿಸಬೇಕು?

ಹಾಗೇ ಆಸಕ್ತರು ಈ ಕುರಿತು ಹೆಚ್ಚಿನ ಮಾಹಿತಿಗೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಮತ್ತು ನಗರ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋಶದ್ದೇಶ ಪುನರ್ವಸತಿ ಕಾರ್ಯಕರ್ತರ ಸಂಪರ್ಕಿಸಬಹುದು.

ದೂರವಾಣಿ ಸಂಖ್ಯೆ ಇಲ್ಲಿದೆ

ಇದಕ್ಕೆ ದಕ್ಷಿಣ ನಂ 8861328076, ಉತ್ತರ ನಂ 7411520269 ಹಾಗೂ ಪೂರ್ವದ ನಂ 7892905708, ಯಲಹಂಕ ನಂ 9590676975, ಆನೇಕಲ್ ನಂ 8748903812 ಅಥವಾ ವಿಕಲಚೇತನರ & ಹಿರಿಯರ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಲ್ಯಾಣಾಧಿಕಾರಿ ಕಚೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು ಅಥವಾ ವಿಕಲಚೇತನರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ ಆಗಿರುವ 080-29752324 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Previous Post Next Post