ಕಾರ್ ಮತ್ತು ಬಸ್ಸ ಚಾಲನೆ ಮಾಡುವುದನ್ನು ಕಲಿಯಲು ಆಸಕ್ತಿ ಇರುವ ಯುವಕರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ 30 ದಿನಗಳ ನಗು ಮತ್ತು ಬಾರಿ ವಾಹನ ಚಾಲನಾ ತರಬೇತಿಗೆ,ಊಟ ವಸತಿ ರಹಿತ ಉಚಿತವಾಗಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬಹುದು? ಮತ್ತು ಅದಕ್ಕೆ ಬೇಕಾಗುವ ದಾಖಲಾತಿಗಳು ಏನು ಎಂಬುದನ್ನು ಈ ಒಂದು ಲೇಖನದಲ್ಲಿ ನೋಡೋಣ
2023-24 ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ನೀಡಿ ಪ್ರಾದೇಶಿಕ ಸಾರಿಗೆ ಕಛೇರಿಯಿಂದ ಚಾಲನಾ ಅನುಜ್ಞಾ ಪತ್ರ | ಬ್ಯಾಡ್ಜ್ ನೀಡುವ ಕಾರ್ಯಕ್ರಮವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿರುತ್ತದೆ.
ಚಾಲನಾ ತರಬೇತಿಯು ಎರಡು ವಿಧದಲ್ಲಿದ್ದು ಒಂದನೇಯದು ಲಘು ವಾಹನ ಚಾಲನಾ ತರಬೇತಿ(ಕಾರ್/ಜೀಪ್) ಎರಡನೇಯದು. ಭಾರಿ. ವಾಹನ ಚಾಲನಾ ತರಬೇತಿಗಾಗಿ (ಬಸ್) ಅರ್ಜಿ ಸಲ್ಲಿಸಬವುದುದಾಗಿದೆ.
style="display:block"
data-ad-client="ca-pub-6066889006742370"
data-ad-format="auto"
data-full-width-responsive="true">
Free Driving Training-ಯಾರೆಲ್ಲ ಅರ್ಜಿ ಸಲ್ಲಿಸಬವುದು? ಅಗತ್ಯ ದಾಖಲಾತಿಗಳೇನು?
(1) Car Driving training-ಲಘು ವಾಹನ ಚಾಲನಾ ತರಬೇತಿ (ಕಾರ್/ಜೀಪ್)
ಈ ತರಬೇತಿ ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಲಘು ವಾಹನ ಚಾಲನಾ ತರಬೇತಿಗಾಗಿ (ಕಾರ್/ ಜೀಪ್) ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ತುಂಬಿರಬೇಕು. ಗರಿಷ್ಠ 45 ವರ್ಷ (ವಯೋಮಿತಿಯನ್ನು ಅರ್ಜಿ ಸಲ್ಲಿಸಲು ನಿಗಧಿ ಪಡಿಸಿರುವ ಕೊನೆಯ ದಿನಾಂಕಕ್ಕೆ ಪರಿಗಣಿಸಲಾಗುವುದು), ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣಪತ್ರ ಅಥವಾ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಶಾಲಾ ವರ್ಗಾವಣಾ ಪ್ರಮಾಣ ಪತ್ರ ಅಥವಾ ನೋಟರಿಯಿಂದ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ 5 ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು.
(2) Bus Driving training-2508 DON ಚಾಲನಾ ತರಬೇತಿಗಾಗಿ (ಬಸ್)
ಭಾರಿ ವಾಹನ ಚಾಲನಾ ತರಬೇತಿಗಾಗಿ(ಬಸ್) ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷಗಳ ವಯೋಮಿತಿ ಪೂರ್ಣಗೊಂಡಿರಬೇಕು. ಗರಿಷ್ಠ 45 ವರ್ಷ (ವಯೋಮಿತಿಯನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕಕ್ಕೆ ಪರಿಗಣಿಸಲಾಗುವುದು), ಲಘು ವಾಹನ ಚಾಲನಾ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರ್ಣಗೊಂಡಿರಬೇಕು. ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣಪತ್ರ ಅಥವಾ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಶಾಲಾ ವರ್ಗಾವಣಾ ಪ್ರಮಾಣ ಪತ್ರ ಅಥವಾ ನೋಟರಿಯಿಂದ ಪ್ರಮಾಣ ಪತ್ರ. ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ 5 ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
Driving training application- ವಸತಿ-ಊಟ ಸಹಿತ 30 ದಿನಗಳ ತರಬೇತಿ:
ಮೊದಲು ಬಂದವರಿಗೆ ಮೊದಲ ಆದ್ಯತೆಯ ಮೇರೆಗೆ ಅರ್ಹ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಲಘು/ಭಾರಿ ವಾಹನ ಚಾಲನಾ ತರಬೇತಿಯನ್ನು 30 ದಿನಗಳವರೆಗೆ ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ಉಚಿತವಾಗಿ ನೀಡಲಾಗುವುದು.
Last date-ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನ:
ಆಸಕ್ತಿ ಇರುವ ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆ ಮತ್ತು 02 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ, 3ನೆ ಮಹಡಿ, ಶಾಂತಿನಗರ ಬಸ್ ನಿಲ್ದಾಣ, ಬೆಂಗಳೂರು-560027 ಇಲ್ಲಿ ಸಲ್ಲಿಸಿ, 31 ಜನವರಿ
2024 ರೊಳಗೆ ಹೆಸರು
ನೋಂದಾಯಿಸಿಕೊಳ್ಳಬಹುದಾಗಿದೆ.
Tags:
News special

