8GB + 256GB ಸ್ಟೋರೇಜ್‌ನ ಈ ಜನಪ್ರಿಯ ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ

ಪ್ರಮುಖ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಹಾನರ್‌ ಸಂಸ್ಥೆಯು ಕೂಡಾ ಒಂದಾಗಿದ್ದು, ಸಂಸ್ಥೆಯು ಇತ್ತೀಚಿಗಷ್ಟೆ ದೇಶಿಯ ಮಾರುಕಟ್ಟೆಗೆ ರೀ ಎಂಟ್ರಿ ಮಾಡಿದೆ. ಆ ಪೈಕಿ ಹಾನರ್ ಸಂಸ್ಥೆಯ ಹಾನರ್‌ 90 5G ಫೋನ್‌ ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್‌ ಬೆಲೆ ಇಳಿಕೆ ಪಡೆದಿದ್ದು, ಖರೀದಿದಾರರು ಅಚ್ಚರಿಯಿಂದ ನೋಡುವಂತಾಗಿದೆ.



ಹೌದು, ಇ ಕಾಮರ್ಸ್‌ ದೈತ್ಯ ಅಮೆಜಾನ್‌ ತಾಣದಲ್ಲಿ ಹಾನರ್‌ 90 5G ಮೊಬೈಲ್‌ ಶೇ. 27% ರಷ್ಟು ನೇರ ಡಿಸ್ಕೌಂಟ್‌ ಅನ್ನು ಪಡೆದುಕೊಂಡಿದೆ. ಗ್ರಾಹಕರು ಈ ಫೋನಿನ 8GB + 256GB ವೇರಿಯಂಟ್‌ನ ಮಾದರಿಯನ್ನು 34,999ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಖರೀದಿ ಮಾಡಬಹುದಾಗಿದೆ. ಇದಲ್ಲದೇ ಹೆಚ್ಚುವರಿಯಾಗಿ ಲಭ್ಯ ಇರುವ ಎಕ್ಸ್‌ಚೆಂಜ್‌ ಆಫರ್‌, ಬ್ಯಾಂಕ್‌ ಕೊಡುಗೆ ಹಾಗೂ ಇತರೆ ಆಫರ್‌ ಪಡೆದುಕೊಂಡರೆ ಇನ್ನಷ್ಟು ರಿಯಾಯಿತಿ ಸಿಗಲಿದೆ.

ಅಂದಹಾಗೆ ಈ ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 1 ಪ್ರೊಸೆಸರ್‌ ಪವರ್‌ನೊಂದಿಗೆ ಕೆಲಸ ಮಾಡಲಿದ್ದು, ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಕೂಡಾ ಪಡೆದುಕೊಂಡಿದೆ. ಈ ಫೋನಿನ ಮೊದಲ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯದಲ್ಲಿ ಇದ್ದು, ಸೆಲ್ಫಿ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿ ಇದೆ. ಇನ್ನುಳಿದಂತೆ ಹಾನರ್‌ 90 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಹಾನರ್‌ 90 5G ಮೊಬೈಲ್‌ ಫೀಚರ್ಸ್‌ ಹೀಗಿವೆ

ಹಾನರ್‌ ಸಂಸ್ಥೆಯ ಈ ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರೊಂದಿಗೆ ಈ ಮೊಬೈಲ್‌ 1,200 x 2,664 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ 120Hz ನ ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, 1,600 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಹೊಂದಿದೆ.

ಹಾನರ್‌ 90 5G ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 1 ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಈ ಫೋನ್‌ ಆಂಡ್ರಾಯ್ಡ್‌ 13 ಓಎಸ್ ಆಧಾರಿತ ಮ್ಯಾಜಿಕ್‌ ಒಎಸ್‌ 7.1 ಸಪೋರ್ಟ್ ಒಳಗೊಂಡಿದೆ. ಹಾಗೆಯೇ ಇದು 8 + 256 GB ಹಾಗೂ 12GB + 512GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಹಾನರ್‌ 90 5G ಈ ಮೊಬೈಲ್‌ ಹಿಂಬದಿಯಲ್ಲಿ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನಿಗೆ ಮುಂಭಾಗದಲ್ಲಿ 50 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ಹಾನರ್‌ 90 5G ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಸಪೋರ್ಟ್‌ ಆಗಿ 66W ಫಾಸ್ಟ್‌ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ. ಇದರ ಜೊತೆಗೆ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಮೊಬೈಲ್‌ 5G, 4G, Wi-Fi 6, ಬ್ಲೂಟೂತ್ 5.2, ಜಿಪಿಎಸ್‌, NFC, ಮತ್ತು ಯುಎಸ್‌ಬಿ ಟೈಪ್-C ಪೋರ್ಟ್ ಅನ್ನು ಬೆಂಬಲ ಸಹ ಪಡೆದಿದೆ.

ಹಾಗೆಯೇ ಹಾನರ್‌ 90 5G ಮೊಬೈಲ್‌ 8 + 256 GB ಹಾಗೂ 12GB + 512GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಲಭ್ಯ ಇದೆ. ಈ ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಇದು ಆಕರ್ಷಕ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.

Previous Post Next Post