ಕರ್ನಾಟಕದ 6 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ಅಂಗನವಾಡಿ ಹುದ್ದೆಗಳ ನೇಮಕ: ಅರ್ಜಿ ಸ್ವೀಕಾರ ಆರಂಭ

ರಾಜ್ಯದ 6 ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳನ್ನು ಭರ್ತಿ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪಾಸಾದ ವಿದ್ಯಾರ್ಥಿನಿಯರು ಈ ಹುದ್ದೆಗಳಿಗೆ ಅರ್ಹರಾಗಿದ್ದು, ಸರ್ಕಾರಿ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಿ.



ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ, ದ್ವಿತೀಯ ಪಿಯುಸಿ ಹಾಗೂ ತತ್ಸಮಾನ ವಿದ್ಯಾರ್ಹತೆ ಜತೆಗೆ ಟೀಚಿಂಗ್ ಕೋರ್ಸ್‌ಗಳನ್ನು ಪಾಸ್‌ ಮಾಡಿದ ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಜಾಬ್‌ ಆಫರ್‌ ನೀಡಿದೆ. ಪ್ರಸ್ತುತ ವಿವಿಧ 6 ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಯಾವ್ಯಾವ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ, ಅರ್ಹತೆಗಳೇನು, ಅರ್ಜಿ ವಿಧಾನ ಹೇಗೆ ಎಂದು ಈ ಕೆಳಗಿನಂತೆ ತಿಳಿಸಲಾಗಿದೆ

ಯಾವ್ಯಾವ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿ ಎಂದು ಕೆಳಗಿನಂತೆ ಲಿಸ್ಟ್‌ ನೀಡಲಾಗಿದೆ.

  • ಬೆಂಗಳೂರು ಗ್ರಾಮೀಣ ಜಿಲ್ಲೆ
  • ಬೆಂಗಳೂರು ನಗರ ಜಿಲ್ಲೆ
  • ಬೆಳಗಾವಿ
  • ಬೀದರ್
  • ಹಾವೇರಿ
  • ತುಮಕೂರು
  • ಈ ಮೇಲಿನ ಎಲ್ಲಾ ಜಿಲ್ಲೆಗಳಲ್ಲಿ ಸೇರಿದಂತೆ ಸಾವಿರಕ್ಕೂ ಅಧಿಕ ಹುದ್ದೆಗಳು ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಪದನಾಮ

ಅಂಗನವಾಡಿ ಕಾರ್ಯಕರ್ತೆ

ಅಂಗನವಾಡಿ ಸಹಾಯಕಿ

ಶೈಕ್ಷಣಿಕ ಅರ್ಹತೆ

ಅಂಗನವಾಡಿ ಕಾರ್ಯಕರ್ತೆ ಹುದ್ದೆ: 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಯಾವುದಾದರೊಂದು ತೇರ್ಗಡೆ ಹೊಂದಿರಬೇಕು.

ಅಂಗನವಾಡಿ ಸಹಾಯಕಿ ಹುದ್ದೆ: 10ನೇ ತರಗತಿ ತೇರ್ಗಡೆ.

ವಯೋಮಿತಿ : ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.

ಆನ್‌ಲೈನ್‌ ಅಪ್ಲಿಕೇಶನ್ ಸಲ್ಲಿಸುವ ವಿಧಾನ

- ಅಪ್ಲಿಕೇಶನ್‌ ಸಲ್ಲಿಸಲು ವೆಬ್‌ ವಿಳಾಸ https://karnemakaone.kar.nic.in ಕ್ಕೆ ಭೇಟಿ ನೀಡಿ.

- ಉದ್ಯೋಗ ಬಯಸುವ ಜಿಲ್ಲೆ >> ಶಿಶು ಅಭಿವೃದ್ಧಿ ಯೋಜನೆ >> ನೇಮಕಾತಿ ಬಯಸುವ ಹುದ್ದೆಯನ್ನು ಕ್ರಮವಾಗಿ ಆಯ್ಕೆ ಮಾಡಿ.

- ನಂತರ ನೀವು ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಬೇಕು.

- ಆನ್‌ಲೈನ್‌ ಅರ್ಜಿ ಫಾರ್ಮ್‌ ಓಪನ್‌ ಆಗುತ್ತದೆ.

- ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.

- ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಅಪ್‌ಲೋಡ್ ಮಾಡಬೇಕು.

Apply Online

ಅರ್ಜಿ ಹಾಕಲು ಬೇಕಾದ ಅಗತ್ಯ ದಾಖಲೆಗಳು

1. ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿ.

2. ವಾಸಸ್ಥಳ ದೃಢೀಕರಣ ಪತ್ರ.

3. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.

4. ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ, ಈ ಅಭ್ಯರ್ಥಿಗಳಾಗಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸುವುದು.

5. ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.

6. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.

7. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.

8. ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.

9. ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.


Previous Post Next Post