GTTC Karnataka Careers 2024: ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗವರ್ನಮೆಂಟ್ ಟೂಲ್ ಅಂಡ್ ಟ್ರೈನಿಂಗ್ ಸೆಂಟರ್‌ಗಳಲ್ಲಿ ಅಗತ್ಯ ಉಪನ್ಯಾಸಕರ ಭರ್ತಿಗೆ ಅರ್ಜಿ ಕರೆಯಲಾಗಿದೆ. ಅರ್ಹರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
- ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವಿವಿಧ ಕೇಂದ್ರಗಳಲ್ಲಿನ ಉಪನ್ಯಾಸಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಈ ಹುದ್ದೆಗಳಿಗೆ ಬಿಇ ಇನ್ ಮೆಕ್ಯಾನಿಕಲ್ / ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ / ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಪದವಿ, ಎಂ.ಟೆಕ್ ಇನ್ ಮೆಕ್ಯಾನಿಕಲ್ / ಟೂಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ ಕಮ್ಯೂನಿಕೇಷನ್‌ನಲ್ಲಿ ಸ್ನಾತಕೋತ್ತರ ಪದವಿ ಹಾಗೂ ಎಂಎಸ್ಸಿ - ಮ್ಯಾಥ್ಸ್ ಅಂಡ್ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಆಕಾಂಕ್ಷಿತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಅಧಿಕೃತ ವೆಬ್‌ಸೈಟ್ ವಿಳಾಸ :
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16-01-2024 ರ ಸಂಜೆ 05-00 ಗಂಟೆವರೆಗೆ.
- ನೇಮಕಾತಿ ಪ್ರಾಧಿಕಾರ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ
- ಹುದ್ದೆ ಹೆಸರು : ಉಪನ್ಯಾಸಕರು (ಗುತ್ತಿಗೆ ಆಧಾರಿತ)
- ಹುದ್ದೆಗಳ ಸಂಖ್ಯೆ: 61
ವಿದ್ಯಾರ್ಹತೆ
ಬಿಇ ಇನ್ ಮೆಕ್ಯಾನಿಕಲ್ / ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ / ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಪದವಿ, ಎಂ.ಟೆಕ್ ಇನ್ ಮೆಕ್ಯಾನಿಕಲ್ / ಟೂಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ ಕಮ್ಯೂನಿಕೇಷನ್‌ನಲ್ಲಿ ಸ್ನಾತಕೋತ್ತರ ಪದವಿ ಹಾಗೂ ಎಂಎಸ್ಸಿ - ಮ್ಯಾಥ್ಸ್ ಅಂಡ್ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪಾಸ್ ಮಾಡಿರಬೇಕು.
ವಯಸ್ಸಿನ ಅರ್ಹತೆಗಳು
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಮೀರಿರಬಾರದು.
- ಎಸ್‌ಸಿ / ಎಸ್‌ಟಿ ವರ್ಗಗಳ ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.
- ನೇಮಕಾತಿ ವಿಧಾನ : ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಎರಡು ಪತ್ರಿಕೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಮತ್ತು 25 ಅಂಕಗಳಿಗೆ ಸಂದರ್ಶನ ನಡೆಸಲಾಗುತ್ತದೆ.
ಹುದ್ದೆಗಳನ್ನು ನೇಮಕಾತಿ ಮಾಡುವ ಜಿಟಿಟಿಸಿ ಕೇಂದ್ರಗಳು
ಬೆಂಗಳೂರು, ಬೆಳಗಾವಿ, ದಾಂಡೇಲಿ, ಕನಕಪುರ, ಕೂಡಲಸಂಗಮ, ಕೋಲಾರ, ಲಿಂಗಸಗೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಹಾಸನ, ಮೈಸೂರು, ಹೊಸಪೇಟೆ, ಧಾರವಾಡ, ಗೌರಿಬಿದನೂರು, ಹುಮನಾಬಾದ್, ತುಮಕೂರು, ಗುಂಡ್ಲುಪೇಟೆ ಗಳಲ್ಲಿ ಇರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ ನೇಮಕ ಮಾಡಲಾಗುತ್ತದೆ.
GTTC Job Notifications 2024