ಜನವರಿ 25, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.
RDWSD Karnataka Recruitment 2024: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ (Rural Drinking Water and Sanitation Department Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಭೂವಿಜ್ಞಾನಿ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 25, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಕರ್ನಾಟಕ ಸರ್ಕಾರದ ಉದ್ಯೋಗ (Karnataka Government Job) ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಶಿವಮೊಗ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ(ಜಿಯಾಲಜಿ) ಪೂರ್ಣಗೊಳಿಸಿರಬೇಕು.
ವಯೋಮಿತಿ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 30,000- 35,000
ಉದ್ಯೋಗದ ಸ್ಥಳ:
ಶಿವಮೊಗ್ಗ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
- ಕ್ವಾಲಿಫಿಕೇಶನ್
- ಅನುಭವ
- ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
.jpeg)