Scholarship: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಮಾಹಿತಿ ಹೀಗಿದೆ

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಆಕ್ಸಿಜೆನ್ ಇದ್ದಂತೆ ಸರ್ಕಾರದಿಂದ ಸಿಗುವ ಈ ಸೌಲಭ್ಯ ಪಡೆದು ಕೋಟ್ಯಂತರ ವಿದ್ಯಾರ್ಥಿಗಳು ಜೀವನ ರೂಪಿಸಿಕೊಂಡಿದ್ದಾರೆ. ಇದೀಗ ಹೀಗೆ, ವಿದ್ಯಾರ್ಥಿ ವೇತನಕ್ಕೆ ಕಾದು ಕುಳಿತ ಕರ್ನಾಟಕದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೂಡ ಸಿಕ್ಕಿದೆ. ಹಾಗಾದರೆ ಏನದು ಸಿಹಿಸುದ್ದಿ? ಬನ್ನಿ ತಿಳಿಯೋಣ.



ಹೌದು, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ, ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿಯ ಆಹ್ವಾನಿಸಲಾಗಿದೆ. ಹೀಗಾಗಿ ಅರ್ಹ ವಿದ್ಯಾರ್ಥಿಗಳು ಇದೀಗ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ!

https://ssp.postmatric.karnataka.gov.in ಮೂಲಕ ಇದೀಗ ವಿದ್ಯಾರ್ಥಿಗಳು, ಅರ್ಜಿಗಳನ್ನ ಸಲ್ಲಿಸಬಹುದು. ಹಾಗೇ ಇದರ ಜೊತೆಗೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲೂಕು, ಎಸ್ ಕರಿಯಪ್ಪ ಮುಖ್ಯ ರಸ್ತೆ , ಬನಶಂಕರಿ, ಬೆಂಗಳೂರು - 560070 ಇಲ್ಲಿಗೆ ಸಂಪರ್ಕ ಮಾಡಿ ಅಥವಾ ದೂರವಾಣಿ ಸಂಖ್ಯೆ ಆದ 080-26711096 ಮೂಲಕ ಸಂಪರ್ಕ ಮಾಡಬಹುದು ಅಂತಾ ಮಾಹಿತಿ ನೀಡಲಾಗಿದೆ. ಈ ಕುರಿತು ಬೆಂಗಳೂರು ದಕ್ಷಿಣ ತಾಲೂಕು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಕರಾಮುವಿವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇನ್ನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ 01 ಬಾಪೂಜಿನಗರ ಬೆಂಗಳೂರು, ಇಲ್ಲಿ 2023-24 ನೇ ಶೈಕ್ಷಣಿಕ ಸಾಲಿನ (ಜುಲೈ ಆವೃತ್ತಿ) ದ್ವಿತೀಯ ಹಾಗೂ ತೃತೀಯ ವರ್ಷದ ಪ್ರವೇಶಾತಿ ನವೀಕರಣ ದಿನಾಂಕ ಜನವರಿ 20 ರ ತನಕವು ವಿಸ್ತರಣೆ ಮಾಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಈ ಕುರಿತು ಹೆಚ್ಚಿನ ಮಾಹಿತಿಗೆ ಕಚೇರಿಯನ್ನ ಸಂಪರ್ಕಿಸಲು ತಿಳಿಸಲಾಗಿದೆ.

ಮೊಬೈಲ್ ನಂಬರ್ ಇಲ್ಲಿದೆ

ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ. ಬೆಂಗಳೂರು ಪ್ರಾದೇಶಿಕ ಕೇಂದ್ರ 01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-560026 ಇಲ್ಲಿಗೆ ಸಂಪರ್ಕಿಸಬಹುದು. ಅಥವಾ ದೂರವಾಣಿ ಸಂಖ್ಯೆ ಆಗಿರುವ 080-2600 3664 ಹಾಗೂ 98449 65515 ಗೂ ಸಂಪರ್ಕ ಮಾಡಬಹುದು ಎಂದು ಕರಾಮುವಿ ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ, ಬೆಂಗಳೂರಿನ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.

Previous Post Next Post