Free Sewing Machine ಉಚಿತ ಹೋಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕೇಂದ್ರ ಸರಕಾರದ ಪಿ.ಎಂ ವಿಶ್ವಕರ್ಮ(PM- Vishwakarma) ಯೋಜನೆಯಡಿ ಅರ್ಹ ಫಲಾನುಭವಿಗಳು ಉಚಿತ ಹೋಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.



ಪಿ.ಎಂ ವಿಶ್ವಕರ್ಮ(PM-Vishwakarma) ಯೋಜನೆಯಡಿ ಗ್ರಾಮೀಣ ಮತ್ತು ನಗರ ಭಾಗದ 18 ವರ್ಗದ ಕುಶಲಕರ್ಮಿಗಳಿಗೆ ಈ ಯೋಜನೆಯ ಮೂಲಕ ರಾಜ್ಯದ ವಿವಿಧ ಭಾಗಗಳಲ್ಲಿರುವ ಕೌಶಲ್ಯ ತರಬೇತಿ ಕೇಂದ್ರಗಳ ಮೂಲಕ ತರಬೇತಿ ನೀಡುವುದರ ಜೊತೆಗೆ ರೂ 15,000 ಬೆಲೆಯ ಟೂಲ್ ಕಿಟ್/ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತದೆ.

ಈ ಯೋಜನೆಗೆ ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅಗತ್ಯ ದಾಖಲಾತಿಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ವಿಧಾನ ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Free Sewing Machine application- 2024: ಟೂಲ್ ಕಿಟ್/ಹೊಲಿಗೆ ಯಂತ್ರ ವಿತರಣೆ ವಿಧಾನ ಹೇಗಿರುತ್ತದೆ:

  • ಮೊದಲಿಗೆ ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಆನ್ಸೆನ್ ಮೂಲಕ ಅರ್ಜಿ ಸಲ್ಲಿಸಬೇಕು ಬಳಿಕ ನಿಮ್ಮ ಅರ್ಜಿ
  • ಪರಿಶೀಲನೆಕೊಂಡು ಅಂತಿಮವಾಗಿ ಅನುಮೋದನೆ ಅದ ಬಳಿಕ,
  • ಅರ್ಹ ಫಲಾನುಭವಿಗಳಿಗೆ ಟೂಲ್ ಕಿಟ್/ಹೊಲಿಗೆ ಯಂತ್ರ ಖರೀದಿ ಮಾಡಲು ಈ ಯೋಜನೆಯಡಿ ರೂ 15,000 ಮೌಲ್ಯದ ಇ-ವೋಚರ್ಸ್ ಅಥವಾ ಇ-ರುಪಿ ನೀಡಲಾಗುತ್ತದೆ. ಬ್ಯಾಂಕ್ ಮೂಲಕ ಈ ರೀತಿಯ ಪ್ರೋತ್ಸಾಗಧನದ ವೋಚರ್ಸ್ ಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಗುತ್ತದೆ.

PM-Vishwakarma yojana training-ತರಬೇತಿ:

  • ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ರೂ 15,000 ಮೌಲ್ಯದ ಟೂಲ್ ಕಿಟ್ ನೀಡುವುದು
  • ಜೊತೆಗೆ ಸಂಬಂಧಪಟ್ಟ ಇಲಾಖೆಯಿಂದ 5 ರಿಂದ 15 ದಿನದವರೆಗೆ ಉಚಿತ ಕೌಶಲ್ಯ ತರಬೇತಿಯನ್ನು ಸಹ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು:

  • ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ತುಂಬಿರಬೇಕು
  • ಅರ್ಜಿದಾರರ ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
  • ಅರ್ಜಿ ಸಲ್ಲಿಸುವ ಸಮಯದಲ್ಲಿ ಅರ್ಜಿದಾರ ಕಳೆದ 5 ವರ್ಷಗಳಲ್ಲಿ ಕೇಂದ್ರ ಸರಕಾರದ ಮತ್ತು ರಾಜ್ಯ ಸರಕಾರದ ಯಾಉದೇ ಸ್ವಯಂ ಉದ್ಯೋಗ ಯೋಜನೆಯಡಿ ಸಾಲ ಪಡೆದಿರಬಾರದು.
  • ಸರಕಾರಿ ಇಲಾಖೆಯಲ್ಲಿ ಉದ್ಯೋಗ ಮಾಡುವವರು ಅವರ ಕುಟುಂಬದವರು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

Required Documents for PM- Vishwakarma yojana- ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

  • ಅರ್ಜಿದಾರರ ಆಧಾರ್ ಕಾರ್ಡ ಪ್ರತಿ. 
  • ರೇಷನ್ ಕಾರ್ಡ ಪ್ರತಿ.
  • ಬ್ಯಾಂಕ್ ಪಾಸ್ ಬುಕ್ ಪ್ರತಿ.
  • ಸ್ವ-ಉದ್ಯೋಗ ಪ್ರಮಾಣ ಪತ್ರ(ನಿಮ್ಮ ಗ್ರಾಮ ಪಂಚಾಯತಿಯಿಂದ ಪಡೆಯಬೇಕು).
  • ಅರ್ಜಿದಾರರ ಮೊಬೈಲ್ ಸಂಖ್ಯೆ.

PM-Vishwakarma yojana application link-ಎಲ್ಲಿ ಅರ್ಜಿ ಸಲ್ಲಿಸಬೇಕು?

ವಿಧಾನ-1: ಗ್ರಾಮ ಒನ್ ಅಥವಾ ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ/ಗ್ರಾಮ ಪಂಚಾಯತಿನಲ್ಲಿ ಅರ್ಜಿ ಸಲ್ಲಿಸಬಹುದು.

ವಿಧಾನ-2: ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಎಲ್ಲಾ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು. ಇಲ್ಲಿ ವಿಭಾಗವಾರು ಈ ಯೋಜನೆಯ ವಿವರ ತೋರಿಸುತ್ತದೆ ನಿಮಗೆ ಅಗತ್ಯ ವಿರುವುದನ್ನು ಕ್ಲಿಕ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ.

PM-Vishwakarma yojana helpline:

ಸರ್ಕಾರಿ ಯೋಜನೆಗಳ ಕುರಿತು ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ PM-Vishwakarma ಯೋಜನೆಯ ಅಧಿಕೃತ ವೆಬ್ಬೆಟ್ ಲಿಂಕ್: Click here

ಅರ್ಜಿ ಸಲ್ಲಿಸಲು ಲಿಂಕ್: Apply Now ಸಹಾಯವಾಣಿಗಳು: 8904754707


Previous Post Next Post