ರಾಜ್ಯ ಸರ್ಕಾರದ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ 2024 ಹಮ್ಮಿಕೊಳ್ಳಲಾಗಿದೆ. ವಿದ್ಯಾವಂತ ನಿರುದ್ಯೋಗಿಗಳಿಗೆ ಸರ್ಕಾರ ಸುವರ್ಣಾವಕಾಶ ಕಲ್ಪಿಸಿದೆ.
ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ಕಡಿಮೆ ಮಾಡಬೇಕು ಎನ್ನುವ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದು ಹೊರಬರುತ್ತಿದ್ದು, ಉದ್ಯೋಗಕ್ಕಾಗಿ ಅಲೆಯುತ್ತಿದ್ದಾರೆ. ಇಂತಹ ವಿದ್ಯಾವಂತ ನಿರುದ್ಯೋಗಿಗಳಾಗಿ ಸರ್ಕಾರ ಸುವರ್ಣಾವಕಾಶ ಕಲ್ಪಿಸಿದೆ.
ಕರ್ನಾಟಕ ರಾಜ್ಯ ಕೌಶಲ್ಯಾಭವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ 'ಬೃಹತ್ ಉದ್ಯೋಗ ಮೇಳ 2024' ಹಮ್ಮಿಕೊಳ್ಳಲಾಗಿದೆ. ಈ ವರ್ಷದ ಅತಿ ದೊಡ್ಡ ಉದ್ಯೋಗ ಮೇಳ ಇದಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.
ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಫೆಬ್ರವರಿ 26 ಹಾಗೂ 27 ರಂದು 'ಯುವ ಸಮೃದ್ಧಿ ಸಮ್ಮೇಳನ' ರಾಜ್ಯ ಮಟ್ಟದ 'ಬೃಹತ್ ಉದ್ಯೋಗ ಮೇಳ 2024'ವನ್ನು ಹಮ್ಮಿಕೊಳ್ಳಲಾಗಿದೆ.
ಈ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಜಿಲ್ಲೆಗಳ ಮೂಲೆ ಮೂಲೆಗಳಿಂದ 50 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮತ್ತು ರಾಜ್ಯ ವಲಯದಿಂದ 500ಕ್ಕೂ ಹೆಚ್ಚಿನ ಪ್ರತಿಷ್ಟಿತ ಉದ್ಯೋಗದಾತ ಕಂಪನಿಗಳು ಪಾಲ್ಗೊಳ್ಳಲಿದ್ದು, ಉದ್ಯೋಗ ಅರಸುತ್ತಿರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ.
ಈಗಾಗಲೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರು, ಈ ವರ್ಷ ಪದವಿಯಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರು, ಕೌಶಲ್ಯ ತರಬೇತಿ ಪಡೆಯಲು ಇಚ್ಛಿಸಿದವರು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೊಂದಾಯಿಸಿಕೊಂಡು. ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ.
ಈ ಬೃಹತ್ ರಾಜ್ಯಮಟ್ಟದ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮುಗಿಸಿದವರಿಗೂ ಕೂಡ ಅವಕಾಶವಿದ್ದು, ತಮ್ಮ ನಿಖರ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ನೊಂದಾಯಿಸಿಕೊಳ್ಳಬಹುದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಫೆಬ್ರವರಿ 26 ಹಾಗೂ 27 ರಂದು ಬೆಂಗಳೂರು ಅರಮನೆಯಲ್ಲಿ ನಡೆಯುವ ರಾಜ್ಯಮಟ್ಟದ ಉದ್ಯೋಗ ಮೇಳದಲ್ಲಿ ಭಾಗಿಯಾಗುವಂತೆ ಗ್ರಾಮ ಹಾಗೂ ತಾಲೂಕ ಮಟ್ಟದಲ್ಲಿ ಪ್ರಚಾರ ನಡೆಸಲಾಗುತ್ತಿದ್ದು, ಆಸಕ್ತರು http://silkllconnect.kaushalkar.com ಮೂಲಕ ತಮ್ಮ ಹೆಸರು ಹಾಗೂ ವಿವರಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
Tags:
Recruitment