ಸಿಸಿಟಿವಿ ಅಳವಡಿಕೆ ಕುರಿತು ಸಂಸ್ಥೆಯೊಂದು ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ. ಹಾವೇರಿ: ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ. ಸಂಸ್ಥೆಯೊಂದು ಉಚಿತವಾಗಿ ಸಿಸಿಟಿವಿ ಅಳವಡಿಕೆ (CCTV Installation) ಕುರಿತ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡಲಿದೆ. ಈ ಅವಕಾಶವನ್ನು ಜಿಲ್ಲೆಯ ಯುವಕರು ಪಡೆಯಬಹುದಾಗಿದೆ. ವಿಶೇಷವಾಗಿ ಉದ್ಯೋಗ ಅರಸುತ್ತಿರುವವರಿಗೆ ಈ ತರಬೇತಿಯು ಹೆಚ್ಚಿನ ಅನುಕೂಲ ಒದಗಿಸಲಿದೆ.
ಯಾವಾಗಿನಿಂದ ಆರಂಭ?
ದೇವಗಿರಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿಯಲ್ಲಿ ಜಿಲ್ಲೆಯ ನಿರೂದ್ಯೋಗಿ ಯುವಕರಿಗೆ ಏ. 10ರಿಂದ 13 ದಿನಗಳ ಸಿಸಿ ಕ್ಯಾಮೆರಾ ಇನ್‌ಸ್ಟಾಲೇಷನ್ ತರಬೇತಿ ಆಯೋಜಿಸಲಾಗಿದೆ. ಸಿಸಿ ಕ್ಯಾಮೆರಾ ಅಳವಡಿಕೆ, ಸರ್ವಿಸಿಂಗ್ ಭದ್ರತಾ ಅಲಾರಾಂ ಹಾಗೂ ಸ್ಟೋಕ್ ಡಿಟೆಕ್ಟರ್ ತರಬೇತಿಯನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುವುದು.
ಅರ್ಜಿ ಸಲ್ಲಿಕೆ ಕೊನೆ ದಿನ?
ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ರೇಷನ್ ಕಾರ್ಡ್, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಪ್ರತಿಗಳನ್ನು ಲಗತ್ತಿಸಿ ಮಾರ್ಚ್ 31ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಷರತ್ತುಗಳು ಏನು?
ಅಭ್ಯರ್ಥಿಗಳು ಹಾವೇರಿ ಜಿಲ್ಲೆಯ ರೇಷನ್ ಕಾರ್ಡ್ ಹೊಂದಿದ್ದರಷ್ಟೇ ಈ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವಯಸ್ಸು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು.