Indian Railways Jobs 2024: ಬರೋಬ್ಬರಿ 4660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ, ವಿವರ

Indian Railways Jobs 2024: ಬರೋಬ್ಬರಿ 4660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ, ವಿವರ

ಭಾರತೀಯ ರೈಲ್ವೆಯು (Indian Railway Jobs) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮತ್ತೊಂದು ಅಧಿಸೂಚನೆ ಹೊರಡಿಸಿದೆ. ಈ ಮೂಲಕ ವರ್ಷದಲ್ಲಿ ಮೂರನೇ ಅಧಿಸೂಚನೆ ಹೊರಡಿಸಿರುವ ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.



ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ರೈಲ್ವೆಯ ರಕ್ಷಣಾ ಸಿಬ್ಬಂದಿ ಪಡೆಯ ರೈಲ್ವೆ ಸಬ್‌ಇನ್ಸ್‌ಪೆಕ್ಟರ್, ರೈಲ್ವೆ ಕಾನ್ಸ್‌ಟೇಬಲ್‌ ಸೇರಿ ಒಟ್ಟು 4660 ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆರ್‌ಆರ್‌ಬಿ ಆರ್‌ಪಿಎಫ್‌ನ ಎಸ್‌ಐ, ಕಾನ್ಸ್‌ಟೇಬಲ್‌ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿ ತಿಳಿಯಬಹುದು.

ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳು ಈ ಅವಕಾಶ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಪೂರ್ಣ ವಿವರ ಇಲ್ಲಿ ತಿಳಿಯಿರಿ.

ನೇಮಕಾತಿ ವಿವರ

  • ಸಂಸ್ಥೆ ಹೆಸರು: ಭಾರತೀಯ ರೈಲ್ವೆ (RRB)
  • ಹುದ್ದೆ ಹೆಸರು: ಆರ್‌ಪಿಎಫ್‌ ಸಬ್‌ ಇನ್ಸ್‌ಪೆಕ್ಟರ್, ಆರ್‌ಪಿಎಸ್‌ ಕಾನ್ಸ್‌ಟೇಬಲ್‌
  • ರೈಲ್ವೆ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳ ಸಂಖ್ಯೆ: 452
  • ರೈಲ್ವೆ ಕಾನ್ಸ್‌ಟೇಬಲ್‌ ಹುದ್ದೆಗಳ ಸಂಖ್ಯೆ: 4208
  • ಖಾಲಿ ಹುದ್ದೆ ಒಟ್ಟು ಸಂಖ್ಯೆ: 4660
  • ಮಾಸಿಕ ವೇತನ: 21700 ರಿಂದ 35,400 ರೂಪಾಯಿ
  • ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಏಪ್ರಿಲ್ 14
  • ಪೋಸ್ಟಿಂಗ್- ದೇಶದ ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಎಲ್ಲಿಯಾದರೂ

ವಿದ್ಯಾರ್ಹತೆ

ಸಬ್‌ಇನ್ಸ್‌ಪೆಕ್ಟರ್ ಹುದ್ದೆಗೆ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು. ಕಾನ್ಸ್‌ಟೇಬಲ್‌ ಹುದ್ದೆಗೆ ಅಭ್ಯರ್ಥಿಗಳು ಅಂಗೀಕೃತ ಶಿಕ್ಷಣ ಸಂಸ್ಥೆಗಳಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣಗೊಳಿಸಿರಬೇಕು ಎಂದು ಅಧಿಸೂಚನೆ ನೀಡಲಾಗಿದೆ.

ವಯೋಮಿತಿ

ಸಬ್‌ಇನ್ಸ್‌ಪೆಕ್ಟರ್ ಹುದ್ದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮುಂದಿನ ಜುಲೈ 01ಕ್ಕೆ 20-28 ವರ್ಷವಾಗಿರಬೇಕು. ಉಳಿದಂತೆ ಕಾನ್ಸ್‌ಟೇಬಲ್‌ ಹುದ್ದೆಯ ಅಭ್ಯರ್ಥಿಗಳಿಗೆ ಅದೇ ದಿನಾಂಕಕ್ಕೆ 18-28 ವರ್ಷ ವಯಸ್ಸಾಗಿರಬೇಕು.

ಅರ್ಜಿ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳು, ಒಬಿಸಿ ಅಭ್ಯರ್ಥಿಗಳಿಗೆ ಶುಲ್ಕ: 500 ರೂ.
  • ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ: 250 ರೂ.
  • ಈ ಮೇಲಿನ ಹುದ್ದೆಗಳಿಗೆ ಅರ್ಜಿ ಲಿಂಕ್‌ ಅನ್ನು 2024ರ ಏಪ್ರಿಲ್ 15 ರಂದು ಆಯಾ ರೈಲ್ವೆ ವಲಯಗಳ ಪ್ರಾದೇಶಿಕ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಲಿಂಕ್ ಗೆ ಭೇಟಿ www.rrbbnc.gov.in ಗೆ ನೀಡಿ ಪಡೆದುಕೊಳ್ಳಬೇಕು.

ಅರ್ಹ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ವರೆಗೆ ಕಾಯದೇ ಈಗಲೇ ಆನ್‌ಲೈನ್ ಮೂಲಕ ಸೂಕ್ತ ದಾಖಲೆಗಳ ಸಮೇತ ಅರ್ಜಿ ಹಾಕಬೇಕು ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಪ್ರಮುಖ ದಿನಾಂಕಗಳು

  • ಆನ್‌ಲೈನ್‌ ಅಪ್ಲಿಕೇಶನ್‌ ಸ್ವೀಕಾರ ಆರಂಭಿಕ ದಿನಾಂಕ : 15-04-2024
  • ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ : 14-05-2024


Post a Comment

Previous Post Next Post
CLOSE ADS
CLOSE ADS
×