ಜಿಯೋ ಗ್ರಾಹಕರಿಗೆ ಸಿಹಿಸುದ್ದಿ!..ಈ ಅಗ್ಗದ ಪ್ಲ್ಯಾನಿನಲ್ಲಿ 6GB ಡೇಟಾ ಉಚಿತ

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ ಟೆಲಿಕಾಂ ಮುಂಚೂಣಿಯ ಸ್ಥಾನದಲ್ಲಿ ಕಾಣಿಸಿಕೊಮಡಿದ್ದು, ಹಲವು ಭಿನ್ನ ಪ್ರಯೋಜನಗಳ ಯೋಜನೆಗಳನ್ನು ಪರಿಚಯಿಸಿದೆ. ಆ ಪೈಕಿ ಅಧಿಕ ಡೇಟಾ ಸೌಲಭ್ಯದ ಪ್ಲ್ಯಾನ್‌ಗಳು ಸೇರಿವೆ. ಅದಾಗ್ಯೂ, ಜಿಯೋ ಟೆಲಿಕಾಂನ 398ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ 6GB ಡೇಟಾ ಪ್ರಯೋಜನದೊಂದಿಗೆ ಗ್ರಾಹಕರ ಗಮನ ಸೆಳೆದಿದೆ.



ಹೌದು, ಜಿಯೊ ಟೆಲಿಕಾಂ 398ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಅಲ್ಪಾವಧಿ ಯೋಜನೆ ಆಗಿದ್ದು, ಅದಾಗ್ಯೂ, ಈ ಪ್ಲ್ಯಾನ್‌ ಕೆಲವು ಅತ್ಯುತ್ತಮ ಪ್ರಯೋಜನಗಳ ಮೂಲಕ ಗ್ರಾಹಕರ ದಿಲ್ ಗೆದ್ದಿದೆ. ಜಿಯೋ ಸಂಸ್ಥೆಯ ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಉಚಿತ ಡೇಟಾ ಅಲ್ಲದೇ ಓಟಿಟಿ ಚಂದಾದಾರಿಕೆಯ ಸೌಲಭ್ಯಗಳನ್ನು ಒಳಗೊಂಡಿದೆ. ಹಾಗಾದರೇ ಜಿಯೋದ ಈ ಪ್ಲ್ಯಾನ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 398ರೂ. ಪ್ಲ್ಯಾನ್ ಪ್ರಯೋಜನ

ರಿಲಾಯನ್ಸ್ ಜಿಯೋ 398ರೂ. ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯ ಇದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 56GB ಡೇಟಾ ಸಿಗಲಿದೆ. ಹಾಗೆಯೇ ಈ ಯೋಜನೆಯಲ್ಲಿ 6GB ಉಚಿತ ಡೇಟಾ ಸಹ ಸಿಗಲಿದೆ.

ಇದರೊಂದಿಗೆ ಈ ಯೋಜನೆಯಲ್ಲಿ ಗ್ರಾಹಕರಿಗೆ ಅನಿಯಮಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನಗಳು ಕೂಡಾ ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಜನಪ್ರಿಯ 12 ಓಟಿಟಿ ಗಳಿಗೆ ಚಂದಾದಾರಿಕೆ ಪ್ರಯೋಜನ ಸಹ ಇದ್ದು, ಇದರ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ಜಿಯೋ 749ರೂ. ರೀಚಾರ್ಜ್‌ ಪ್ಲಾನ್

ಜಿಯೋ ಟೆಲಿಕಾಂನ ಈ ಪ್ಲಾನಿನಲ್ಲಿ 90 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ಪ್ರತಿ ದಿನ 2GB ಡೇಟಾ ಪ್ರಯೋಜನ ಗ್ರಾಹಕರಿಗೆ ಸಿಗಲಿದೆ. ಇದರೊಂದಿಗೆ ಡೈಲಿ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ.

ಜಿಯೋ 719ರೂ. ರೀಚಾರ್ಜ್‌ ಪ್ಲಾನ್

ಜಿಯೋ ಟೆಲಿಕಾಂನ 719ರೂ. ಪ್ಲಾನಿನಲ್ಲಿ ಗ್ರಾಹಕರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ಪ್ರತಿ ದಿನ 2GB ಡೇಟಾ ಪ್ರಯೋಜನ ಗ್ರಾಹಕರಿಗೆ ಸಿಗಲಿದೆ. ಇದರ ಜೊತೆಗೆ ಪ್ರತಿ ದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ.

ಜಿಯೋ 789ರೂ. ರೀಚಾರ್ಜ್‌ ಪ್ಲಾನ್

ಜಿಯೋದ 789ರೂ. ಯೋಜನೆಯಲ್ಲಿಯೂ ಗ್ರಾಹಕರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ದೊರೆಯುತ್ತದೆ. ಇದಲ್ಲದೇ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ಪ್ರತಿ ದಿನ 2GB ಡೇಟಾ ಪ್ರಯೋಜನ ಗ್ರಾಹಕರಿಗೆ ಸಿಗಲಿದೆ. ಇದರೊಂದಿಗೆ ಡೈಲಿ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ. ಹೆಚ್ಚುವರಿಯಾಗಿ ಜಿಯೋಸಾವನ್‌ ಪ್ರೊ ಚಂದಾದಾರಿಕೆ ಸಹ ಲಭ್ಯ.

ಜಿಯೋ 533ರೂ. ರೀಚಾರ್ಜ್‌ ಯೋಜನೆ

ಈ ಯೋಜನೆಯಲ್ಲಿ ಗ್ರಾಹಕರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದೆ. ಇದಲ್ಲದೇ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ವಾಯಿಸ್‌ ಕರೆಯ ಪ್ರಯೋಜನ ಅಲ್ಲದೇ ಪ್ರತಿದಿನ 2GB ಡೇಟಾ ಪ್ರಯೋಜನ ಗ್ರಾಹಕರಿಗೆ ಸಿಗಲಿದೆ. ಹಾಗೆಯೇ ನಿತ್ಯ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ.

ಜಿಯೋ 598ರೂ. ರೀಚಾರ್ಜ್‌ ಯೋಜನೆ

ಜಿಯೋ 598ರೂ. ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದೆ. ಇದಲ್ಲದೇ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ವಾಯಿಸ್‌ ಕರೆಯ ಪ್ರಯೋಜನ ಅಲ್ಲದೇ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ. ಹೆಚ್ಚುವರಿಯಾಗಿ ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆ ಲಭ್ಯ.

Previous Post Next Post