HAL Jobs: ತಿಂಗಳಿಗೆ 87,000 ಸಂಬಳ- ಬೆಂಗಳೂರಿನಲ್ಲಿ ಈ ಹುದ್ದೆಗಳಿಗೆ ಅರ್ಜಿ ಹಾಕಿ

HAL Jobs: ತಿಂಗಳಿಗೆ 87,000 ಸಂಬಳ- ಬೆಂಗಳೂರಿನಲ್ಲಿ ಈ ಹುದ್ದೆಗಳಿಗೆ ಅರ್ಜಿ ಹಾಕಿ

ಮೇ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು. HAL Recruitment 2024: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಮೆಡಿಕಲ್ ಆಫೀಸರ್(Medical Officer) ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ (Bengaluru) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.



ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಶೈಕ್ಷಣಿಕ ಅರ್ಹತೆ:

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಮಾಸಿಕ ₹ 87,880

ಉದ್ಯೋಗದ ಸ್ಥಳ:

ಬೆಂಗಳೂರು

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯ ವ್ಯವಸ್ಥಾಪಕ (HR)

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಂಡಸ್ಟ್ರಿಯಲ್ ಹೆಲ್ತ್ ಸೆಂಟರ್

ಸುರಂಜನದಾಸ್ ರಸ್ತೆ

ವಿಮಾನಪುರ ಅಂಚೆ

ಬೆಂಗಳೂರು-560017

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/04/2024

ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 13, 2024

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22323005/22328082 ಗೆ ಕರೆ ಮಾಡಿ ಅಥವಾ hr.medical@hal-india.co.in ಗೆ ಮೇಲ್ ಮಾಡಿ.

Post a Comment

Previous Post Next Post
CLOSE ADS
CLOSE ADS
×