IPL 2024: RCB ನೇರವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಬಹುದು.

IPL 2024: RCB ನೇರವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಬಹುದು.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಆರ್ಸಿಬಿ ಆಡಿದ 7 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಸಿಎಸ್ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್ಸಿಬಿ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಮಾತ್ರ ಜಯ ಸಾಧಿಸಿದೆ. ಇನ್ನುಳಿದ ಎಲ್ಲಾ ಪಂದ್ಯಗಳಲ್ಲೂ ಸೋಲನುಭವಿದೆ.



ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರ ಮೊದಲಾರ್ಧದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ದ್ವಿತೀಯಾರ್ಧದ ಪಂದ್ಯಗಳಿಗಾಗಿ ಸಜ್ಜಾಗುತ್ತಿದೆ. ಏಪ್ರಿಲ್ 21 ರಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಮೂಲಕ ಆರ್ಸಿಬಿ ದ್ವಿತೀಯಾರ್ಧವನ್ನು ಆರಂಭಿಸಲಿದೆ.

ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಪ್ಲೇಆಫ್ಗೇರಲು ಆರ್ಸಿಬಿ ಮೊದಲ ಹೆಜ್ಜೆಯನ್ನಿಡುವ ವಿಶ್ವಾಸದಲ್ಲಿದೆ. ಏಕೆಂದರೆ ಮೊದಲಾರ್ಧದಲ್ಲಿ ಆರ್ಸಿಬಿ ಒಂದು ಪಂದ್ಯವನ್ನು ಗೆದ್ದಿದ್ದರೂ, ದ್ವಿತೀಯಾರ್ಧದ ಮೂಲಕ ನೇರವಾಗಿ ಪ್ಲೇಆಫ್ಗೆ ಪ್ರವೇಶಿಸುವ ಅವಕಾಶ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿದೆ.

ಅಂದರೆ ಮುಂದಿನ 7 ಪಂದ್ಯಗಳಲ್ಲಿ ಆರ್ಸಿಬಿ ಜಯ ಸಾಧಿಸಿದರೆ, 8 ಗೆಲುವುಗಳೊಂದಿಗೆ ಒಟ್ಟು 16 ಅಂಕಗಳನ್ನು ಪಡೆದುಕೊಳ್ಳಲಿದೆ. ಸಾಮಾನ್ಯವಾಗಿ 16 ಅಂಕಗಳನ್ನು ಪಡೆಯುವ ತಂಡಗಳು ಅಂಕಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ವಾಡಿಕೆ. ಅದರಂತೆ ಆರ್ಸಿಬಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದು ನೇರವಾಗಿ ಪ್ಲೇಆಫ್ ಹಂತಕ್ಕೇರಬಹುದು.

ಇನ್ನು 7 ಪಂದ್ಯಗಳಲ್ಲಿ ಆರ್ಸಿಬಿ ಒಂದು ಪಂದ್ಯವನ್ನು ಸೋತರೂ 14 ಅಂಕಗಳನ್ನು ಕಲೆಹಾಕಲು ಅವಕಾಶವಿದೆ. ಇಲ್ಲಿ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರ 2 ತಂಡಗಳು 18 ಅಥವಾ 20 ಅಂಕಗಳನ್ನು ಪಡೆದುಕೊಂಡರೆ, ನಾಲ್ಕನೇ ಸ್ಥಾನ ಪಡೆಯುವ ತಂಡವೊಂದು 14 ಅಂಕಗಳನ್ನು ಗಳಿಸುವ ಸಾಧ್ಯತೆ ಹೆಚ್ಚು. ಅದರಂತೆ ಆರ್ಸಿಬಿ 14 ಅಂಕಳಗಳೊಂದಿಗೆ ಉತ್ತಮ ನೆಟ್ ರನ್ ರೇಟ್ ಸಹಾಯದಿಂದ ಪ್ಲೇಆಫ್ ಹಂತಕ್ಕೇರಬಹುದು.

ಹೀಗಾಗಿ ಮೊದಲಾರ್ಧದಲ್ಲಿ ಒಂದು ಗೆಲುವು ಸಾಧಿಸಿರುವ ಆರ್ಸಿಬಿ, ದ್ವಿತೀಯಾರ್ಧದಲ್ಲಿ ಸೋಲಿಲ್ಲದ ಸರದಾರನಾಗಿ ಮುಂದುವರೆದರೆ ನೇರವಾಗಿ ಪ್ಲೇಆಫ್ ಪ್ರವೇಶಿಸುವುದನ್ನು ಎದುರು ನೋಡಬಹುದು. ಅದರಂತೆ ಫಾಫ್ ಡುಪ್ಲೆಸಿಸ್ ಪಡೆ ದ್ವಿತೀಯಾರ್ಧದಲ್ಲಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದೆಯಾ ಕಾದು ನೋಡಬೇಕಿದೆ.

ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೊಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾನ್ಸ್ (2 ಪಂದ್ಯಗಳು), ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದೆ. ಈ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್ಸಿಬಿ ಪ್ಲೇಆಫ್ ಹಂತಕ್ಕೇರುವ ವಿಶ್ವಾಸದಲ್ಲಿದೆ.

Post a Comment

Previous Post Next Post
CLOSE ADS
CLOSE ADS
×