Karnataka Examinations Authority: ಕಲಬುರ್ಗಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಜೇವರ್ಗಿ, ಬೀದರ್, ಯಾದಗಿರಿಯಲ್ಲಿ ಪರೀಕ್ಷಾ ಕೇಂದ್ರ ಹಂಚಿಕೆಯಾಗಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಮನವಿ ಸಲ್ಲಿಸುವಂತಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಸಿಇಟಿ ಅರ್ಜಿ (CET Application) ಭರ್ತಿ ಮಾಡುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡಿರುವ ಕಲಬುರಗಿ (Kalaurgi) ಜಿಲ್ಲೆಯ ಕೆಲ ಅಭ್ಯರ್ಥಿಗಳು (Candidates) ತಾವು ವ್ಯಾಸಂಗ ಮಾಡಿರುವ ಪಿಯು ಕಾಲೇಜಿನ ಪ್ರಾಂಶುಪಾಲರ ಮೂಲಕ ಇದೇ 12ರೊಳಗೆ ಮನವಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority) ಸೂಚಿಸಿದೆ. ಕಲಬುರಗಿಯ ಕೆಲವು ಅಭ್ಯರ್ಥಿಗಳು ತಮಗೆ ಪರೀಕ್ಷಾ ಕೇಂದ್ರ ಕೋಲಾರ (Kolar) ಜಿಲ್ಲೆಯಲ್ಲಿ ಹಂಚಿಕೆಯಾಗಿದೆ ಎಂದು ಕೆಇಎಗೆ ಇ-ಮೇಲ್ ಮತ್ತು ದೂರವಾಣಿ ಮೂಲಕ ತಿಳಿಸಿರುವ ಕಾರಣ ಅವರ ಅರ್ಜಿಗಳನ್ನು (Applications) ಪರಿಶೀಲಿಸಿದಾಗ ಅವರೇ ಎಡಿಟ್ ಸಂದರ್ಭದಲ್ಲಿ ಕೋಲಾರ (Kolar District) ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿರುವುದು ದೃಢಪಟ್ಟಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಪ್ಪಾಗಿ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರ ಬದಲಾವಣೆಗೆ ಅವರುಗಳು ವ್ಯಾಸಂಗ ಮಾಡಿರುವ ಪಿಯು ಕಾಲೇಜಿನ ಪ್ರಾಂಶುಪಾಲರ ಮುಖಾಂತರ ಸಕಾರಣವನ್ನು ನೀಡಿ ಮನವಿ ಸಲ್ಲಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಮನವಿಯಲ್ಲಿ ಅಭ್ಯರ್ಥಿಯ ಹೆಸರು, ಅರ್ಜಿ ಸಂಖ್ಯೆ, ಸಿಇಟಿ ಪತ್ರ ಸಂಖ್ಯೆ, ಪ್ರವೇಶ ಪತ್ರದ ಪ್ರತಿ ಸಲ್ಲಿಸಬೇಕು. ಬಳಿಕ ಕಾಲೇಜಿನ ಪ್ರಾಂಶುಪಾಲರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರಕ್ಕೆ ಇ-ಮೇಲ್ (keauthority-ka@nic.in) ಮೂಲಕ ಏ.12ರಂದು ಸಂಜೆ 5ಗಂಟೆ ಒಳಗೆ ಸಲ್ಲಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಮನವಿ ಸಲ್ಲಿಕೆಗೆ ಏ.12 ಗಡುವು
ಕಲಬುರ್ಗಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಜೇವರ್ಗಿ, ಬೀದರ್, ಯಾದಗಿರಿಯಲ್ಲಿ ಪರೀಕ್ಷಾ ಕೇಂದ್ರ ಹಂಚಿಕೆಯಾಗಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಮನವಿ ಸಲ್ಲಿಸುವಂತಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಯುಜಿ ನೀಟ್ ಅಭ್ಯರ್ಥಿಗಳಿಗೆ ಅನ್ವಯ ಆಗಲ್ಲ
ಯುಜಿ ನೀಟ್ ಪರೀಕ್ಷೆ ಮಾತ್ರ ತೆಗೆದುಕೊಂಡಿರುವ ಅಭ್ಯರ್ಥಿಗಳಿಗೆ ಸಿಇಟಿ ಪ್ರವೇಶ ಪತ್ರ ಡೌನ್‌ಲೋಡ್ ಆಗುವುದಿಲ್ಲ. ಆದರೆ, ಅಂತಹ ಅಭ್ಯರ್ಥಿಗಳಿಗೆ ವೈದ್ಯಕೀಯ/ದಂತ ವೈದ್ಯಕೀಯ ಮತ್ತು ಆಯುಷ್ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ ಎಂದು ರಮ್ಯಾ ಅವರು ತಿಳಿಸಿದ್ದಾರೆ.
5,8,9 ನೇ ಕ್ಲಾಸ್ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಮಧ್ಯಂತರ ತಡೆ
ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಇಂದು 5,8.,9 ನೇ ಕ್ಲಾಸ್ ಬೋರ್ಡ್ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದು ಬೆಳಿಗ್ಗೆ ತಿಳಿಸಲಾಗಿತ್ತು ಆದರೆ ಇದೀಗ ಬಂದ ಮಾಹಿತಿ ಪ್ರಕಾರ 5,8,9 ಹಾಗೂ 11 ನೇ ತರಗತಿ ಫಲಿತಾಂಶ ಬಿಡುಗಡೆಗೆ ಸುಪ್ರೀಂ ತಡೆನೀಡಿದೆ.
ಇಂದು ಫಲಿತಾಂಶ ಬಿಡುಗಡೆ ಮಾಡಲು ಮುಂದಾಗಿದ್ದ ಶಾಲಾ ಶಿಕ್ಷಣ ಇಲಾಖೆ ಇದೀಗ ಫಲಿತಾಂಶವನ್ನು ತಡೆಹಿಡಿದಿದೆ. 5,8,9 ಹಾಗೂ 11ನೆ ತರಗತಿ ವಿದ್ಯಾರ್ಥಿಗಳಿಗೆ ನಡೆದಿದ್ದ ಬೋರ್ಡ್ ಪರಿಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಇನ್ನಷ್ಟು ಗೊಂದಲ ಉಂಟಾಗಿದೆ.
ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ದ್ವಿಸದಸ್ಯ ಪೀಠದ ಆದೇಶಕ್ಕೂ ತಡೆ ನೀಡಿದೆ. ಈ ತಿಂಗಳ 23 ರ ಒಳಗಾಗಿ ಸ್ಪಷ್ಟನೆ ನೀಡುವಂತೆಯೂ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ. 5,8.,9 ನೇ ಕ್ಲಾಸ್ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ- ಆದೇಶ ನೀಡಿದೆ. ಸುಪ್ರೀಂ ನಿಂದ ,ಇಂದಿನ ಫಲಿತಾಂಶಕ್ಕೂ ತಡೆ ಬಿದ್ದಿದೆ. ಇಂದು ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡಲು ಮೌಲ್ಯ ನಿರ್ಣಯ ಮಂಡಲಿ ತಯಾರಿ ನಡೆಸಿತ್ತು ಆದರೆ ಈಗ ತಡೆಹಿಡಿಯಲಾಗಿದೆ.