ಅಂಚೆ ಇಲಾಖೆಯಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ 2024 – Post Office Driver Recruitment 2024

ಅಂಚೆ ಇಲಾಖೆಯಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ 2024 – Post Office Driver Recruitment 2024

Post Office Driver Recruitment 2024 : ಅಂಚೆ ಇಲಾಖೆಯಿಂದ ಕರ್ನಾಟಕದೆಲ್ಲೆಡೆ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.



Post Office Driver Recruitment 2024 : Details of Vacancies

ಹುದ್ದೆ : ಸ್ಟಾಫ್ ಕಾರ್ ಡ್ರೈವರ್

ಕರ್ತವ್ಯ ಸ್ಥಳ : 

ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಚಿಕ್ಕೋಡಿ, ಕಲಬುರಗಿ, ಹಾವೇರಿ, ಕಾರವಾರ, ಎಂಎಂಎಸ್ ಬೆಂಗಳೂರು, ಮಂಡ್ಯ, ಎಂಎಂಎಸ್ ಮೈಸೂರು, ಪುತ್ತೂರು, ಶಿವಮೊಗ್ಗ, ಉಡುಪಿ ಹಾಗೂ ಕೋಲಾರ ಡಿವಿಷನ್ ಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : 

ಒಟ್ಟು 27 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಡಿವಿಷನ್ ಹುದ್ದೆಗಳ ಸಂಖ್ಯೆ

  1. ಚಿಕ್ಕೋಡಿ 1
  2. ಕಲಬುರಗಿ 1
  3. ಹಾವೇರಿ 1
  4. ಕಾರವಾರ 1
  5. ಎಂಎಂಎಸ್ ಬೆಂಗಳೂರು 15
  6. ಮಂಡ್ಯ 1
  7. ಎಂಎಂಎಸ್ ಮೈಸೂರು 3
  8. ಪುತ್ತೂರು 1
  9. ಶಿವಮೊಗ್ಗ 1
  10. ಉಡುಪಿ 1
  11. ಕೋಲಾರ 1

ಶೈಕ್ಷಣಿಕ ಅರ್ಹತೆ : 

10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಲಘು ಹಾಗೂ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಲಘು ಹಾಗೂ ಭಾರಿ ವಾಹನ ಚಾಲನೆಯಲ್ಲಿ ಮೂರು (03) ವರ್ಷಗಳ ಅನುಭವ ಹೊಂದಿರಬೇಕು. ಮೋಟಾರ್ ಮೆಕ್ಯಾನಿಸಮ್ ಜ್ಞಾನ ಹೊಂದಿರಬೇಕು.

ವಯೋಮಾನ : 

ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :

•ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ

• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ವೇತನ : 

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900 ರಿಂದ ರೂ. 63,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : 

ಚಾಲನಾ ಪರೀಕ್ಷೆ ಹಾಗೂ ಮೋಟಾರ್ ಮೆಕ್ಯಾನಿಸಮ್ ಜ್ಞಾನಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.

ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.

ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : 

ಮ್ಯಾನೇಜರ್, ಮೇಲ್ ಮೋಟಾರ್ ಸರ್ವಿಸ್, ಬೆಂಗಳೂರು – 560001

ನಿಗದಿತ ಅರ್ಜಿ ಶುಲ್ಕದ ವಿವರ : 

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 08, 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 14, 2024

Post Office Staff Car Driver Recruitment 2024 : Important Link

NOTIFICATION & APPLICATION FORM:- CLICK HERE

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Post a Comment

Previous Post Next Post
CLOSE ADS
CLOSE ADS
×