ಪಿಯುಸಿ ವಿದ್ಯಾರ್ಥಿಗಳಿಗೆ 35000 ರೂ. ಸ್ಕಾಲರ್‌ಶಿಪ್!‌ ಈ ದಾಖಲೆ ಇಟ್ಟುಕೊಂಡು ಅಪ್ಲೈ ಮಾಡಿ

ಪಿಯುಸಿ ವಿದ್ಯಾರ್ಥಿಗಳಿಗೆ 35000 ರೂ. ಸ್ಕಾಲರ್‌ಶಿಪ್!‌ ಈ ದಾಖಲೆ ಇಟ್ಟುಕೊಂಡು ಅಪ್ಲೈ ಮಾಡಿ

ಹಲೋ ಸ್ನೇಹಿತರೇ, ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಒದಗಿಸುವುದು ತಂದೆ ತಾಯಿಗಳ ಮೂಲಭೂತ ಕರ್ತವ್ಯ ಆದರೆ ಆರ್ಥಿಕವಾಗಿ ಹಿಂದುಳಿದ ಅದೆಷ್ಟೋ ಜನರಿಗೆ ಒಂದು ಹೊತ್ತು ಊಟ ಮಾಡಲು ಸಹ ಬಹಳ ಕಷ್ಟವಾಗಿದ್ದು, ಅಂತವರ ಮಕ್ಕಳು ತಮ್ಮ ವಿದ್ಯಾಭ್ಯಾಸ ಪೂರೈಸಲು ಸಾಧ್ಯವಾಗದೆ ಸಾಕಷ್ಟು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಅವರಿಗಾಗಿ ಸರ್ಕಾರ ಉಚಿತ ಪ್ರೋತ್ಸಾಹಧನ ನೀಡಲು ಹೊಸ ಯೋಜನೆಯನ್ನು ಜಾರಿಗೆ ತಂದಿದೆ.



ಇನ್ನು ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣ ಪೂರೈಸಬೇಕು ಎನ್ನುವ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಆದರೆ ಮನೆಯ ಪರಿಸ್ಥಿತಿಯ ಕಾರಣ ಅವರು ತಮ್ಮ ಶಿಕ್ಷಣವನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಇನ್ನು ಇಂತಹ ವಿದ್ಯಾರ್ಥಿಗಳ ಸಹಾಯಕ್ಕಾಗಿ ಸರ್ಕಾರವು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಸ್ಕಾಲರ್‌ಶಿಫ್ ನೀಡುವ ಮೂಲಕ ಅವರ ಮುಂದಿನ ಶಿಕ್ಷಣವನ್ನು ಪೂರೈಸಲು ಸಹಾಯ ಧನವನ್ನು ನೀಡುತ್ತಿದೆ.

ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣ ಪೂರೈಸಲು ಪ್ರತಿ ವರ್ಷ ಸರ್ಕಾರವು 35 ಸಾವಿರ ಪ್ರೋತ್ಸಾಹ ದನ ನೀಡುತ್ತಿದೆ. ಇನ್ನು ಈ ಲಾಭವನ್ನು ಪಡೆಯಲು ವಿದ್ಯಾರ್ಥಿಗಳು ಇದಕ್ಕೆ ಅರ್ಜಿಗಳನ್ನು ಹೇಗೆ ಸಲ್ಲಿಸಬೇಕು, ಇದಕ್ಕೆ ಬೇಕಾದ ದಾಖಲೆಗಳೇನು? ಇಂತಹ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರ ನೀಡುತ್ತೇವೆ, ಈ ಪುಟವನ್ನು ಪೂರ್ತಿಯಾಗಿ ಓದಿ..

ದ್ವಿತೀಯ ಪಿಯುಸಿಯಲ್ಲಿ ಪ್ರಥಮ ದರ್ಜೆ ಪಡೆದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಇದೀಗ ಸರ್ಕಾರದ ಕಡೆಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಇದೀಗ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು 35,000 ರೂ. ಸಹಾಯ ಧನವನ್ನು ಅರ್ಜಿ ಸಲ್ಲಿಸುವ ಮೂಲಕ ಪಡೆದುಕೊಳ್ಳಬಹುದಾಗಿದೆ.

ಇನ್ನು ಸಮಾಜ ಕಲ್ಯಾಣ ಇಲಾಖೆಯ, ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವ ವಿದ್ಯಾರ್ಥಿಗಳು ತಮ್ಮ ಪಿಯುಸಿಯಲ್ಲಿ ಶೇಕಡಾ 60% ಅಂಕಗಳನ್ನು ಪಡೆದುಕೊಂಡು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಈ ಅರ್ಹತೆಗಳನ್ನು ಪೂರೈಸುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ವಿಧ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳು ಈ ಕೆಳಗಿನಂತಿವೆ:

1. ವಿದ್ಯಾರ್ಥಿಯ ಆಧಾರ್ ಕಾರ್ಡ್

2. ಜಾತಿ ಮತ್ತು ಆದಾಯ ಪ್ರಮಾಣ ಪತ್ರ

3. ಪಡಿತರ ಚೀಟಿ

4. ವಿದ್ಯಾರ್ಥಿಯ ವಾರ್ಷಿಕ ಅಂಕಪಟ್ಟಿ

5. ಮೊಬೈಲ್ ನಂಬರ್

ಇನ್ನು ವಿದ್ಯಾರ್ಥಿಗಳು ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು. ಇನ್ನು ಈ ವಿಧ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇದೇ ಜುಲೈ 30 ಕೊನೆಯ ದಿನಾಂಕ ಆಗಿದ್ದು, ವಿದ್ಯಾರ್ಥಿಗಳು ಆದಷ್ಟು ಬೇಗ ಅರ್ಜಿಗಳನ್ನು ಸಲ್ಲಿಸಿ.

Post a Comment

Previous Post Next Post
CLOSE ADS
CLOSE ADS
×