ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೆಟ್ರಿಕ್‌ ನಂತರದ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಹಾಕಿ.



2024-25ನೇ ಸಾಲಿನ ಇಲಾಖೆಯ ಮೆಟ್ರಿಕ್ ನಂತರದ (ಪಿಯುಸಿ ಮತ್ತು ಪಿಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ - 1, 2a, 2b, 3a, 3b, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಕೆಳಗಿನಂತಿರಬೇಕು.

  • ಪ್ರವರ್ಗ-1, ಎಸ್‌ಸಿ, ಎಸ್‌ಟಿ : ರೂ.2.50 ಲಕ್ಷ.
  • 2a, 2b, 3a, 3b, ಇತರೆ ಹಿಂದುಳಿದ ವರ್ಗ ಹಾಗೂ ಇತರೆ : ರೂ.1,00 ಲಕ್ಷ.

ಪ್ರಮುಖ ದಿನಾಂಕಗಳು

  • ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-07-2024
  • ಹೊಸ ಅರ್ಜಿಗಳನ್ನು ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ನಿಗದಿತ ಅಂತಿಮ ದಿನಾಂಕ: 23-07-2024
  • ತಾಲ್ಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆಪಟ್ಟಿ ಪ್ರಕಟಣೆಯ ದಿನಾಂಕ: 29-07-2024
  • ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ನಿಗದಿತ ಅಂತಿಮ ದಿನಾಂಕ : 31-07-2024

ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ಅಧಿಕೃತ ವೆಬ್‌ಸೈಟ್‌ ವಿಳಾಸ -

  https://shp.karnataka.gov.in/bcwd

ತಾಲ್ಲೂಕುವಾರು ಹಾಸ್ಟೆಲ್‌ಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್‌  https://bcwd.karnataka.gov.in ಅನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ / ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಅರ್ಜಿಯನ್ನು ಆನ್‌ಲೈನ್‌ ಮೂಲಕ ಹೊರತು, ಇತರೆ ಯಾವುದೇ ಮಾದರಿಯಲ್ಲಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005.

Post a Comment

Previous Post Next Post
CLOSE ADS
CLOSE ADS
×