SSLC ಪಾಸಾದವರಿಗೆ ಕೋರ್ಟ್ ಉದ್ಯೋಗ- ಬಂಪರ್ ಸ್ಯಾಲರಿ

SSLC ಪಾಸಾದವರಿಗೆ ಕೋರ್ಟ್ ಉದ್ಯೋಗ- ಬಂಪರ್ ಸ್ಯಾಲರಿ

ಆಗಸ್ಟ್ 1, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.




Haveri District Court Recruitment 2024: ನೀವು SSLC ಪಾಸಾಗಿದ್ದೀರಾ? ಕೆಲಸ ಹುಡುಕ್ತಿದ್ದೀರಾ? ಇಲ್ಲಿದೆ ನೋಡಿ ಸುವರ್ಣಾವಕಾಶ. ಬೇಗ-ಬೇಗ ಅರ್ಜಿ ಹಾಕಿ. ಹಾವೇರಿ ಜಿಲ್ಲಾ ಕೋರ್ಟ್(Haveri District Court) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 26 ಪಿಯೋನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 1, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:

ಹಾವೇರಿ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಹಾವೇರಿ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವಯೋಮಿತಿ ಸಡಿಲಿಕೆ:

SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-IIA/IIB/IIIA/IIIB ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:

SC/ST/ಪ್ರವರ್ಗ-I/PWD ಅಭ್ಯರ್ಥಿಗಳು: ಇಲ್ಲ
ಪ್ರವರ್ಗ-IIA/IIB/IIIA/IIIB ಅಭ್ಯರ್ಥಿಗಳು: ರೂ.100/-
ಸಾಮಾನ್ಯ ಅಭ್ಯರ್ಥಿಗಳು: ರೂ.200/-
ಪಾವತಿ ವಿಧಾನ: ಆನ್‌ಲೈನ್

ವೇತನ:

ಮಾಸಿಕ ₹ 17,000-28,950

ಉದ್ಯೋಗದ ಸ್ಥಳ:

ಹಾವೇರಿ

ಆಯ್ಕೆ ಪ್ರಕ್ರಿಯೆ:

ಮೆರಿಟ್ ಲಿಸ್ಟ್
ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.

Post a Comment

Previous Post Next Post
CLOSE ADS
CLOSE ADS
×