ಹಾವೇರಿ ಜಿಲ್ಲೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ: 12th ಪಾಸಾದವರಿಂದ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ: 12th ಪಾಸಾದವರಿಂದ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹುದ್ದೆ ಕುರಿತು ಹೆಚ್ಚಿನ ಮಾಹಿತಿಗಳನ್ನು ಇಲ್ಲಿ ತಿಳಿಯಿರಿ.




ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್‌ ನಿಯಮಗಳು, 2022ರ ನಿಯಮಗಳನ್ವಯ ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 06 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಈ ಕೆಳಗಿನ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Haveri Gram Panchayat Recruitment 2024 Eligibility Details 

  • ಹುದ್ದೆ ಹೆಸರು:- ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು
  • ಖಾಲಿ ಇರುವ ಹುದ್ದೆಗಳ ಸಂಖ್ಯೆ:- 18

ಒಟ್ಟು ಹುದ್ದೆಗಳ ಪೈಕಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ 03 ಹುದ್ದೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 08 ಹುದ್ದೆ, ಪರಿಶಿಷ್ಟ ಪಂಗಡ - 02, ಪ್ರವರ್ಗ-1 - 01, 2ಎ - 2, 2ಬಿ- 1, 3ಎ- 1 ಹುದ್ದೆ ಮೀಸಲಾತಿ ಪ್ರಕಾರ ಖಾಲಿ ಇವೆ. ಹಾವೇರಿ ಜಿಲ್ಲೆಯ ಒಟ್ಟು 18 ಗ್ರಾಮ ಪಂಚಾಯಿತಿಗಳಲ್ಲಿ ಈ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ. ಈ ಹುದ್ದೆಗೆ ಆಯ್ಕೆ ಆದವರಿಗೆ ಸರ್ಕಾರದ ನಿಯಮದ ಪ್ರಕಾರ ಗೌರವ ಸಂಭಾವನೆ ನೀಡಲಾಗುತ್ತದೆ.

ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಪಾಸಾಗಿರಬೇಕು.
  • ಲೈಬ್ರರಿ ಸೈನ್ಸ್ ಸರ್ಟಿಫಿಕೇಶನ್‌ ಕೋರ್ಸ್‌ ಪಾಸ್ ಮಾಡಿದ್ದು, ಹಾಗೂ ಕನಿಷ್ಟ 3 ತಿಂಗಳ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.
  • ಈ ವಿದ್ಯಾರ್ಹತೆ ಹೊರತು ಹೆಚ್ಚಿನ ವಿದ್ಯಾರ್ಹತೆ ಇದ್ದರೂ ಪರಿಗಣಿಸಲಾಗುವುದಿಲ್ಲ.

ವಯಸ್ಸಿನ ಅರ್ಹತೆಗಳು

  • ಕನಿಷ್ಠ ವಯೋಮಿತಿ - 18 ವರ್ಷ.
  • ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ - 35 ವರ್ಷ.
  • ಪ್ರವರ್ಗ 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ - 38 ವರ್ಷ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ - 40 ವರ್ಷ.
ಮೀಸಲಾತಿ ಕೋರುವವರು, ಅಗತ್ಯ ದಾಖಲೆ ಮಾಹಿತಿಗಳನ್ನು ಆನ್‌ಲೈನ್‌ ಅರ್ಜಿ ಸಲ್ಲಿಕೆ ವೇಳೆ ಕಡ್ಡಾಯವಾಗಿ ತಪ್ಪದೇ ನೀಡಬೇಕು.

ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಆಯ್ಕೆ ವಿಧಾನ

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು / ಮೆರಿಟ್‌ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಿ ಅಂತಿಮವಾಗಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ದಿನಾಂಕಗಳು

  • ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:- 15-07-2024
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ:- 31-07-2024

ಅರ್ಜಿ ಶುಲ್ಕ ವಿವರ

  • ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.500.
  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.200.
  • ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.100.
  • ಅರ್ಜಿ ಶುಲ್ಕವನ್ನು ಕೆವಿಜಿಬಿ ಬ್ಯಾಂಕ್‌ ಹಾವೇರಿ ಶಾಖೆ ಖಾತೆ ನಂಬರ್ - 89160078109 ಗೆ ( ಹೆಸರು- ಸಿಎಒ, ಜಿಲ್ಲಾ ಪಂಚಾಯತ್, ಹಾವೇರಿ, IFSC CODE NO-KVGB0007210) ಪಾವತಿಸಿ, ಚಲನ್‌ ಪ್ರತಿಯನ್ನು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್‌ಲೋಡ್‌ ಮಾಡುವುದು.

ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್ ವಿಳಾಸ  


ಆನ್‌ಲೈನ್‌ ಹೊರತುಪಡಿಸಿ, ಇತರೆ ಯಾವುದೇ ಮಾದರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಶಾರ್ಟ್‌ ಲಿಸ್ಟ್‌ ಆದವರನ್ನು ಮೆರಿಟ್‌ ಆಧಾರದಲ್ಲಿ ಸಂದರ್ಶನ ನಡೆಸಿ ಸ್ಥಳ ನಿಯೋಜನೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವಾಗ ಸರಿಯಾದ ಮೊಬೈಲ್ ನಂಬರ್, ಇ-ಮೇಲ್‌ ವಿಳಾಸ, ಪೂರ್ಣ ವಿಳಾಸ ನೀಡುವುದು.

Post a Comment

Previous Post Next Post
CLOSE ADS
CLOSE ADS
×