ಇಂದು ಮೊಟೊ G85 5G ಫೋನಿನ ಫಸ್ಟ್‌ ಸೇಲ್‌; ಇದರ ಫೀಚರ್ಸ್‌ಗೆ ನೀವು ಫಿದಾ ಆಗ್ತೀರಾ

ಇಂದು ಮೊಟೊ G85 5G ಫೋನಿನ ಫಸ್ಟ್‌ ಸೇಲ್‌; ಇದರ ಫೀಚರ್ಸ್‌ಗೆ ನೀವು ಫಿದಾ ಆಗ್ತೀರಾ

ಪ್ರಮುಖ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಮೊಟೊರೊಲಾ (Motorola) ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ಮೊಟೊ G85 5G ( Moto G85 5G ) ಫೋನ್‌ ಬಜೆಟ್‌ ದರದಲ್ಲಿ ಅತ್ಯಾಕರ್ಷಕ ಫೀಚರ್ಸ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಫೋನ್ ಇಂದು (ಜುಲೈ 16 ರಂದು) ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಫಸ್ಟ್‌ ಸೇಲ್‌ ಪ್ರಾರಂಭ ಮಾಡಲಿದೆ. ಈ ಫೋನ್‌ 8GB RAM + 128GB ಹಾಗೂ 12GB RAM and 256GB ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ.



ಹೌದು, ಮೊಟೊರೊಲಾ ಕಂಪನಿಯ ಮೊಟೊ G85 5G ( Moto G85 5G ) ಸ್ಮಾರ್ಟ್‌ಫೋನ್‌ ಇದೇ ಜುಲೈ 16 ರಂದು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಮೊದಲ ಮಾರಾಟ ಶುರು ಮಾಡಲಿದೆ. ಈ ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಅಲ್ಲದೇ ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಇನ್ನು ಈ ಮೊಬೈಲ್‌ನ ಪ್ರಾರಂಭಿಕ ವೇರಿಯಂಟ್‌ ಬೆಲೆಯು 17,999ರೂ. ಗಳು ಪ್ರೈಸ್‌ಟ್ಯಾಗ್‌ ಪಡೆದಿದೆ.

ಇನ್ನು ಈ ಮೊಬೈಲ್‌ ಕೋಬಾಲ್ಟ್ ಬ್ಲೂ, ಅರ್ಬನ್ ಗ್ರೇ ಮತ್ತು ಆಲಿವ್ ಗ್ರೀನ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಅಲ್ಲದೇ ಇದು 33W ಟರ್ಬೋಪವರ್‌ ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಪಡೆದಿದ್ದು, ಹಾಗೆಯೇ ಈ ಫೋನಿನ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಮೊಟೊ G85 5G ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಮೊಟೊ G85 5G - ಫೀಚರ್ಸ್‌ ಮಾಹಿತಿ

ಮೊಟೊ G85 5G ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ pOLED ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2712 × 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಪಡೆದಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್‌ ಅನ್ನು ಪಡೆದಿದ್ದು, ಹಾಗೆಯೇ ಡಿಸ್‌ಪ್ಲೇ 1600 nits ಬ್ರೈಟ್‌ನೆಸ್‌ ಸಪೋರ್ಟ್‌ ಸಹ ಪಡೆದಿದ್ದು, ಕರ್ವ್‌ ಡಿಸ್‌ಪ್ಲೇ ರಚನೆ ಹೊಂದಿದ್ದು, ಗೊರಿಲ್ಲಾ ಗ್ಲಾಸ್‌ 5 ಅನ್ನು ಪಡೆದುಕೊಂಡಿದೆ.

ಮೊಟೊ G85 5G ಮೊಬೈಲ್‌ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯದದಲ್ಲಿ ಕೆಲಸ ನಿರ್ವಹಣೆ ಮಾಡಲಿದ್ದು, ಇದಕ್ಕೆ ಸಪೋರ್ಟ್‌ ಆಗಿ ಆಂಡ್ರಾಯ್ಡ್‌ 14 ಓಎಸ್‌ ಸೌಲಭ್ಯ ಸಹ ಇದೆ. ಹಾಗೆಯೇ ಈ ಫೋನ್‌ 8GB RAM + 128GB ಹಾಗೂ 12GB RAM + 256GB ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ.

ಮೊಟೊ G85 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದ್ದು, ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇನ್ನು ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಮೊಟೊ G85 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಸಪೋರ್ಟ್‌ ಆಗಿ 33W ಟರ್ಬೋಪವರ್‌ ಫಾಸ್ಟ್‌ ಚಾರ್ಜಿಂಗ್‌ ಆಯ್ಕೆ ಇದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳನ್ನು ಪಡೆದುಕೊಂಡಿದೆ. ಅಲ್ಲದೇ ಇನ್‌ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಡಾಲ್ಬಿ ಅಟ್ಮೋಸ್‌ ಆಯ್ಕೆಗಳನ್ನು ಕಾಣಬಹುದು.


Post a Comment

Previous Post Next Post
CLOSE ADS
CLOSE ADS
×