ಐಎಎಸ್‌, ಕೆಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಉಚಿತ ತರಬೇತಿ: ಆಸಕ್ತರು ಅರ್ಜಿ ಹಾಕಿ

ಐಎಎಸ್‌, ಕೆಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಉಚಿತ ತರಬೇತಿ: ಆಸಕ್ತರು ಅರ್ಜಿ ಹಾಕಿ

ನೀವು ಯಾವುದೇ ಡಿಗ್ರಿ ಮುಗಿಸಿದ್ದು, ದೇಶದ ಹಾಗೂ ರಾಜ್ಯದ ನಾಗರೀಕ ಸೇವೆಗಳಾದ ಐಎಎಸ್‌, ಕೆಎಎಸ್‌ ಪರೀಕ್ಷೆಗಳನ್ನು ಬರೆಯಲು ಆಸಕ್ತರಾಗಿದ್ದೀರಾ.. ಹಾಗಿದ್ರೆ ನಿಮಗಿದೋ ಉಚಿತ ಕೋಚಿಂಗ್ ವಸತಿಯೊಂದಿಗೆ ಸಿಗಲಿದೆ. ಅರ್ಜಿ ಹಾಕಿ.




  • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಕರ್ನಾಟಕ ಹಜ್‌ ಭವನ, ಬೆಂಗಳೂರು ಇಲ್ಲಿ ಐಎಎಸ್‌ / ಕೆಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಉಚಿತ ತರಬೇತಿ ನೀಡಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪರೀಕ್ಷಾ ಪೂರ್ವ ಉಚಿತ ತರಬೇತಿಗಾಗಿ ಮುನ್ನೋಡುತ್ತಿರುವ ಆಸಕ್ತ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯದವರಾಗಿದ್ದಲ್ಲಿ ಈಗಲೇ ಅರ್ಜಿ ಸಲ್ಲಿಸಲು ಆರಂಭಿಸಿ.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ

24-07-2024

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ

31-08-2024

ಅರ್ಹತೆಗಳು

  • ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು.
  • ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ( ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ).
  • ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.
  • ಅಭ್ಯರ್ಥಿಯ ವಯೋಮಿತಿ ಕನಿಷ್ಠ 21 ರಿಂದ ಗರಿಷ್ಠ 35 ವರ್ಷಗಳು ಮೀರಿರಬಾರದು. (ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ).
  • ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.

ಆದಿ ಸೂಚನೆಯನ್ನು ಇಲ್ಲಿ ಪರಿಶೀಲಿಸಿ 



ಅರ್ಜಿದಾರರಿಗೆ ಸೂಚನೆಗಳು

  • ಆನ್‌ಲೈನ್‌ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು / ವಿಧಾನಗಳು ಮತ್ತು ಪದೇ ಪದೇ ಕೇಳಲಾಗುವ ಪ್ರಶ್ನೆಗಳಿಗೆ ಉತ್ತರವನ್ನು ವೆಬ್‌ಸೈಟ್‌ ವಿಳಾಸ https://dom.karnataka.gov.in ದಲ್ಲಿ ಲಭ್ಯ.
  • ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್‌, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ತಮ್ಮ ಗುರುತಿನ ಚೀಟಿ, ತರಬೇತಿಗೆ ನಿಗದಿತ ವಿದ್ಯಾರ್ಹತೆ ದಾಖಲೆಗಳು, ಜನ್ಮ ದಿನಾಂಕ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಅಲ್ಪಸಂಖ್ಯಾತರ ಸಮುದಾಯದ ಪ್ರಮಾಣ ಪತ್ರಗಳು, ಇತರೆ ವೈಯಕ್ತಿಕ ಮಾಹಿತಿಗಳನ್ನು ಅರ್ಜಿ ಸಲ್ಲಿಸುವ ವೇಳೆ ಸಲ್ಲಿಸಬೇಕಾಗುತ್ತದೆ.
  • ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ 8277799990 ಇವರನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಿದವರ ಆಯ್ಕೆ ಹೇಗಿರುತ್ತದೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಭ್ಯ ಸೀಟುಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯ ಅಂಕಗಳ ಆಧಾರದಲ್ಲಿ ಮೆರಿಟ್‌ ಲಿಸ್ಟ್‌ ಸಿದ್ಧಪಡಿಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳು ತರಬೇತಿಗೆ ಹಾಜರಾಗಬೇಕು. ಜತೆಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿಯಮಗಳ ಪ್ರಕಾರ ಕನಿಷ್ಠ ಹಾಜರಾತಿಯನ್ನು ನಿರಂತರ ಪಡೆಯಬೇಕು.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ಐಎಎಸ್‌, ಕೆಎಎಸ್‌ ಅಭ್ಯರ್ಥಿಗಳು ಒಂದು ವೇಳೆ ಈಗಾಗಲೇ ಖಾಸಗಿ ತರಬೇತಿ ಸಂಸ್ಥೆಗಳಲ್ಲಿ ಪರೀಕ್ಷಾ ಪೂರ್ವ ತರಬೇತಿ ಪಡೆಯುತ್ತಿದ್ದಲ್ಲಿ, ಅವರಿಗೆ ವಸತಿ ಸೌಲಭ್ಯ ಬೇಕಾದಲ್ಲಿ ಕಲ್ಪಿಸಿಕೊಡುವ ಅವಕಾಶವು ಇದ್ದು, ಈ ಸೌಲಭ್ಯ ಬೇಕಾದವರು ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಥವಾ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ 8277799990 ಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆಯಬಹುದು.

Post a Comment

Previous Post Next Post
CLOSE ADS
CLOSE ADS
×