Pahani adhar link status ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಇಲ್ಲೇ ಚೆಕ್ ಮಾಡಿ 2024

Pahani adhar link status ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಇಲ್ಲೇ ಚೆಕ್ ಮಾಡಿ 2024

Pahani adhar link status : ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.



ಹೌದು, ಈಗ ಪ್ರತಿಯೊಬ್ಬ ರೈತರು ತಮ್ಮ ಎಲ್ಲಾ ಸರ್ವೆ ನಂಬರ್ ಗಳನ್ನು ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ. ಹಾಗಾಗಿ ರೈತರು ಇಲ್ಲಿ ಕೆಳಗೆ ನೀಡಲಾದ ಮಾಹಿತಿಗಳ ಪ್ರಕಾರ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

Pahani adhar link status ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ? ಇಲ್ಲೇ ಚೆಕ್ ಮಾಡಿ

  • ಮೊಬೈಲ್ ನಲ್ಲಿ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಈ https://landrecords.karnataka.gov.in/service4 ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. 
  • ನಂತರ ಮೊಬೈಲ್ ನಂಬರ್ ಹಾಕಿದ ನಂತರ ನಿಮ್ಮ ಮೊಬೈಲ್ ನಂಬಿಗೆ ಓಟಿಪಿ ಬರುತ್ತದೆ. ಆಗ ನೀವು ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ಅಲ್ಲಿ ಬರೆದು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. 
  • ನಂತರ ಆಧಾರ್ ಕಾರ್ಡ್ ನಮೂದಿಸಬೇಕು. ನಂತರ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ನಮೂದಿಸಬೇಕು. 
  • ನಂತರ ನಾನು ಇಲ್ಲಿ ಸ್ವಯಂ ಪ್ರೇರಣೆಯಿಂದ ಆಧಾರ್ ಗಾಗಿ ನನ್ನ ಒಪ್ಪಿಗೆಯನ್ನು ನೀಡುತ್ತೇದೆ ಬಾಕ್ಸ್ ಆಯ್ಕೆ ಮಾಡಿ ಅಲ್ಲಿ ಕಾಣುವ Verify ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಆಧಾರ್ ಅನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತದೆ.
  • ಅಲ್ಲಿ ಒಕೆ ಮೇಲೆ ಕ್ಲಿಕ್ ಮಾಡಿದ ನಂತರ ಆಧಾರ್ ಪರಿಶೀಲನೆಯನ್ನು ಬಳಸಿಕೊಂಡು ಅರ್ಜಿದಾರರ ವಿವರಗಳನ್ನು ಭರ್ತಿ ಮಾಡಿ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು.
  • ನನ್ನ ಆಧಾರ್ ಮಾಹಿತಿ ಹಾಗೂ ಇತರ ಮಾಹಿತಿಗಳನ್ನು ಯುಐಡಿಎಐನೊಂದಿಗೆ ಇಕೆವೈಸಿ ದೃಢೀಕರಣಕ್ಕೆ ಬಾಕ್ಸ್ ಆಯ್ಕೆಮಾಡಿಕೊಂಡು ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಟಿಪಿ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.
  • ಅಲ್ಲಿ ನಿಮ್ಮ ಹೆಸರು, ತಂದೆಯ ಹೆಸರು, ಊರು, ತಾಲೂಕು ಹಾಗೂ ಜಿಲ್ಲೆ ಕಾಣಿಸುತ್ತದೆ.ಇದರೊಂದಿಗೆ ನಿಮ್ಮ ಊರು ವಿಳಾಸ ಹಾಗೂ ಫೋಟೋ ಸಹ ಕಾಣಿಸುತ್ತದೆ.
  • ಅಲ್ಲಿ ಕಾಣುವ ಲಿಂಕ್ ಆಧಾರ್ ಮೇಲೆ ಕ್ಲಿಕ್ ಮಾಡಬೇಕು ಆಗ ನಿಮ್ಮ ಆಧಾರ್ ಕಾರ್ಡಿಗೆ ಯಾವ ಯಾವ ಪಹಣಿ ಲಿಂಕ್ ಆಗಿದೆ ಆ ಸರ್ವೆ ನಂಬರ್ ಗಳು ಕಾಣಿಸುತ್ತವೆ.

Pahani adhar link status ಭೂ ಅಕ್ರಮಗಳಿಗೆ ಕಡಿವಾಣಿ ಹಾಕಲು ಭೂ ಆಧಾರ್ ಕಾರ್ಡ್

  • ಭೂ ಅಕ್ರಮಗಳಿಗೆ ಕಡಿವಾಣ ಹಾಕಲು ಜಮೀನುಗಳಿಗೆ ಭೂ ಆಧಾರ್ ಕಾರ್ಡ್ ನೀಡಲು ಕೇಂದ್ರ ಸರ್ಕಾರವು ಬಜೆಟ್ ನಲ್ಲಿ ಘೋಷಣೆ ಮಾಡಿದೆ.
  • ಹೌದು, ಕೇಂದ್ರ ಸರ್ಕಾರವು ಮಂಗಳವಾರ ಬಜೆಟ್ ನಲ್ಲಿ ಹಲವಾರು ಭೂ ಸುಧಾರಣಾ ಘೋಷಣೆ ಮಾಡಿದ್ದು, ಆ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ ಭೂಮಿಗೆ ವಿಶಿಷ್ಟ ಗುರುತಿನ ಸಂಖ್ಯೆ ಅಥವಾ ಭೂ-ಆಧಾರ್ ನೀಡುವುದು ಪ್ರಮುಖವಾಗಿದೆ. ಇದಲ್ಲದೆ, ಎಲ್ಲಾ ನಗರ ಭೂ ದಾಖಲೆಗಳ ಡಿಜೀಟಲೀಕರಣವನ್ನು ಪ್ರಸ್ತಾಪಿಸಿದೆ. ಈ ಮೂಲಕ ಭೂ ಅಕ್ರಮಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.
  • ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಭೂ ಸುಧಾರಣೆಗಳನ್ನು ಕೈಗೊಳ್ಳಲು ಕೇಂದ್ರವು ರಾಜ್ಯಗಳೊಂದಿಗೆ ಕೆಲಸ ಮಾಡುತ್ತದೆ. ಮುಂದಿನ 3 ವರ್ಷಗಳಲ್ಲಿ ಈ ಸುಧಾರಣೆಗಳನ್ನು ಪೂರ್ಣಗೊಳಿಸಲು ರಾಜ್ಯಗಳನ್ನು ಕೇಂದ್ರ ಉತ್ತೇಜಿಸಲಿದೆ.
  • ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಭೂ ಸಂಬಂಧಿತ ಸುಧಾರಣೆಗಳು ಮತ್ತು ಕ್ರಮಗಳನ್ನು 2 ರೀತಿಯಲ್ಲಿ ಕೈಗೊಳ್ಳಲಾಗುತ್ತಿದೆ. (1) ಭೂ ಆಡಳಿತ,ಯೋಜನೆ ಮತ್ತು ನಿರ್ವಹಣೆ ಮತ್ತು (2) ನಗರ ಯೋಜನೆ, ಬಳಕೆ ಮತ್ತು ಕಟ್ಟಡ ಬೈಲಾಗಳನ್ನು ಈ ಸುಧಾರಣಾ ಕ್ರಮಗಳು ಒಳಗೊಳ್ಳುತ್ತವೆ. ಸೂಕ್ತ ಹಣಕಾಸಿನ ಬೆಂಬಲದ ಮೂಲಕ ಇವುಗಳನ್ನುಮುಂದಿನ 3 ವರ್ಷಗಳಲ್ಲಿ ಪೂರ್ಣಗೊಳಿಸಲು ಪ್ರೋತ್ಸಾಹಿಸಲಾಗುತ್ತದೆ.

Pahani adhar link status ಭೂ ಆಧಾರ್

ಗ್ರಾಮೀಣ ಭೂಮಿ ಸಂಬಂಧಿತ ಕ್ರಮಗಳು ಎಲ್ಲಾ ಜಮೀನಿಗೆ ಭೂ ಪಾರ್ಸೆಲ್ ಗುರುತಿನ ಸಂಖ್ಯೆ (ಯುಎಲ್.ಪಿ.ಐ.ಎನ್) ಅಥವಾ ಭೂ ಆಧಾರ್ ಅನ್ನು ಒಳಗೊಂಡಿರುತ್ತದೆ. ಕ್ಯಾಡಾಸ್ಟಾಲ್ ನಕ್ಷೆಗಳ ಡಿಜಿಟೈಸೇಶನ್ ಪ್ರಸ್ತುತ ಮಾಲೀಕತ್ವದ ಪ್ರಕಾರ ನಕ್ಷೆ ಉಪ-ವಿಭಾಗಗಳ ಸಮೀಕ್ಷೆ, ಭೂ ನೋಂದಣಿ ರಚನೆ ಮತ್ತು ರೈತರ ನೋಂದಣಿಗೆ ಲಿಂಕ್ ಮಾಡುವುದುಕೂಡ ಪ್ರಮುಖ ಕ್ರಮಗಳಾಗಿವೆ.


Post a Comment

Previous Post Next Post
CLOSE ADS
CLOSE ADS
×