ಈ ಜಿಲ್ಲೆಗಳ 1,229 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, PUC ಪಾಸಾದ ಮಹಿಳೆಯರಿಗೆ ಭರ್ಜರಿ ಅವಕಾಶ

ಈ ಜಿಲ್ಲೆಗಳ 1,229 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, PUC ಪಾಸಾದ ಮಹಿಳೆಯರಿಗೆ ಭರ್ಜರಿ ಅವಕಾಶ

Anganwadi 1229 Vacancies District wise list : ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ (Karnataka Women and Child Development Department) ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.



ಸದ್ಯಕ್ಕೆ ಅರ್ಜಿ ಆಹ್ವಾನಿಸಿರುವ ಅಂಗನವಾಡಿಗಳ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ವಿವರ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ, ವಿದ್ಯಾರ್ಹತೆ, ಸಂಬಳ, ಇತರ ಅರ್ಹತಾ ಮಾನದಂಡಗಳ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ

ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಹುದ್ದೆಗಳು?

ಕರ್ನಾಟಕದಲ್ಲಿರುವ ಬಹುತೇಕ ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳು ಖಾಲಿ ಇದ್ದು; ಈಗಾಗಲೇ ಉತ್ತರ ಕನ್ನಡ, ಹಾವೇರಿ, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಗಿದಿದೆ. ಇದೀಗ ಮತ್ತೆ ನಾಲ್ಕು ಜಿಲ್ಲೆಗಳ ಅಂಗನವಾಡಿ ಹುದ್ದೆಗಳ ನೇಮಕ ಪ್ರಕ್ರಿಯೆ ನಡೆದಿದೆ. ಖಾಲಿ ಹುದ್ದೆಗಳ ವಿವರ ಈ ಕೆಳಕಂಡ೦ತಿದೆ:

  • ಧಾರವಾಡ : 207
  • ದಾವಣಗೆರೆ : 232
  • ಶಿವಮೊಗ್ಗ : 575
  • ಚಿತ್ರದುರ್ಗ : 215

ಧಾರವಾಡ ಜಿಲ್ಲೆ ಹುದ್ದೆಗಳ ವಿವರ

ಧಾರವಾಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಯಲ್ಲಿ ಬರುವ ಹುಬ್ಬಳ್ಳಿ ಗ್ರಾಮೀಣ ಹಾಗೂ ಹುಬ್ಬಳ್ಳಿ – ಧಾರವಾಡ ಶಹರ ವ್ಯಾಪ್ತಿಯ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಖಾಲಿ ಹುದ್ದೆಗಳ ವಿವರ ಈ ಕೆಳಗಿನಂತಿದೆ:

ಹುಬ್ಬಳ್ಳಿ ಗ್ರಾಮೀಣ

  • ಅಂಗನವಾಡಿ ಕಾರ್ಯಕರ್ತೆಯರು : 09
  • ಅಂಗನವಾಡಿ ಸಹಾಯಕಿಯರು : 08
  • ಹುಬ್ಬಳ್ಳಿ – ಧಾರವಾಡ ಶಹರ
  • ಅಂಗನವಾಡಿ ಕಾರ್ಯಕರ್ತೆಯರು : 182
  • ಅಂಗನವಾಡಿ ಸಹಾಯಕಿಯರು : 08
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02-09-2024

ಹೆಚ್ಚಿನ ಮಾಹಿತಿಗೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ಹಾಗೂ ಹುಬ್ಬಳ್ಳಿ-ಧಾರವಾಡ ಶಹರ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ದಾವಣಗೆರೆ ಜಿಲ್ಲೆ ಹುದ್ದೆಗಳ ವಿವರ

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಯಲ್ಲಿ ಬರುವ 5 ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಹುದ್ದೆಗಳ ಭರ್ತಿಗೆ ಗೌರವ ಸೇವೆಯ ಆಧಾರದ ಮೇಲೆ ನೇಮಕ ಮಾಡಲು ಅರ್ಜಿ ಕರೆಯಲಾಗಿದೆ. ಖಾಲಿ ಹುದ್ದೆಗಳ ವಿವರ ಈ ಕೆಳಗಿನಂತಿದೆ:

  • ಅಂಗನವಾಡಿ ಕಾರ್ಯಕರ್ತೆಯರು : 34
  • ಅಂಗನವಾಡಿ ಸಹಾಯಕಿಯರು : 198
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 09-09-2024

ಹೆಚ್ಚಿನ ಮಾಹಿತಿಗೆ ಈ ಕೆಳಕಂಡ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ ಸಂಪರ್ಕಿಸಿ: ದಾವಣಗೆರೆ 08192-263219, ಹರಿಹರ 08192-241431, ಜಗಳೂರು 08196-227132, ಹೊನ್ನಾಳಿ 08188-251283, ಚನ್ನಗಿರಿ 08189-228010

ಚಿತ್ರದುರ್ಗ ಜಿಲ್ಲೆ ಹುದ್ದೆಗಳ ವಿವರ

ಚಿತ್ರದುರ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ವಿವಿಧ ಅಂಗನವಾಡಿಗಳ ಒಟ್ಟು 215 ಖಾಲಿ ಸ್ಥಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಗಳ ವಿವರ ಈ ಕೆಳಗಿನಂತಿದೆ:

  • ಅಂಗನವಾಡಿ ಸಹಾಯಕಿ : 149 ಹುದ್ದೆಗಳು
  • ಅಂಗನವಾಡಿ ಕಾರ್ಯಕರ್ತೆ : 63 ಹುದ್ದೆಗಳು
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 31-08-2024

ಹೆಚ್ಚಿನ ಮಾಹಿತಿಗೆ ಚಿತ್ರದುರ್ಗ ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಶಿವಮೊಗ್ಗ ಜಿಲ್ಲೆ ಹುದ್ದೆಗಳ ವಿವರ

ಶಿವಮೊಗ್ಗ ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಕರೆದಿದೆ. ಒಟ್ಟು 575 ಹುದ್ದೆಗಳು ಖಾಲಿ ಇದ್ದು ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿವೆ:

  • ಅಂಗನವಾಡಿ ಸಹಾಯಕಿ : 448 ಹುದ್ದೆಗಳು
  • ಅಂಗನವಾಡಿ ಕಾರ್ಯಕರ್ತೆ : 127 ಹುದ್ದೆಗಳು
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 29-08-2024

ಹೆಚ್ಚಿನ ಮಾಹಿತಿಗೆ ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ಹೊಸನಗರ, ಸಾಗರ, ಶಿಕಾರಿಪುರ, ಸೊರಬ, ತೀರ್ಥಹಳ್ಳಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ವಿದ್ಯಾರ್ಹತೆ ಏನಿರಬೇಕು?

  • ಮೇಲ್ಕಾಣಿಸಿದ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ 19 ರಿಂದ 35 ವರ್ಷದೊಳಗಿನ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಸೂಚನೆಯ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಪಿಯುಸಿ ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರು ಅರ್ಜಿ ಸಲ್ಲಿಸಬಹುದು.
  • ನೇಮಕವಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 12,000 ರೂಪಾಯಿ ಹಾಗೂ ಸಹಾಯಕಿಯರಿಗೆ ಮಾಸಿಕ 8,000 ರೂಪಾಯಿ ಗೌರವ ಸಂಭಾವನೆ ಇದೆ.

ಅರ್ಜಿ ಸಲ್ಲಿಕೆ ಬೇಕಾಗುವ ದಾಖಲಾತಿಗಳು

  • ವಿದ್ಯಾರ್ಹತೆ ಪ್ರಮಾಣ ಪತ್ರ
  • ವಾಸಸ್ಥಳ ದೃಢೀಕರಣ ಪತ್ರ
  • ವಯಸ್ಸಿನ ದೃಢೀಕರಣಕ್ಕಾಗಿ ಜನನ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆತ್ಮಹತ್ಯೆಗೆ ಒಳಗಾದ ರೈತರ ಪತ್ನಿಯಾಗಿದ್ದಲ್ಲಿ ಸ್ಥಳೀಯ ಎಸಿ ಕಡೆಯಿಂದ ಪಡೆದ ಪ್ರಮಾಣ ಪತ್ರ
  • ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ
  • ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ

ಅರ್ಜಿ ಸಲ್ಲಿಕೆ ಹೇಗೆ?

ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ವ್ಯವಸ್ಥೆ ರೂಪಿಸಲಾಗಿದ್ದು; https://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ ಅಗತ್ಯ ಮಾಹಿತಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

ಆಸಕ್ತ ಅಭ್ಯರ್ಥಿಗಳು ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ : ಇಲ್ಲಿ ಒತ್ತಿ

Post a Comment

Previous Post Next Post
CLOSE ADS
CLOSE ADS
×