ಅನ್ನಭಾಗ್ಯ ಫಲಾನುಭವಿಗಳಿಗೆ ಶುಭ ಸುದ್ದಿ: ಸಿಗಲಿದೆ 10 ಕೆಜಿ ಉಚಿತ ಅಕ್ಕಿ

ಅನ್ನಭಾಗ್ಯ ಫಲಾನುಭವಿಗಳಿಗೆ ಶುಭ ಸುದ್ದಿ: ಸಿಗಲಿದೆ 10 ಕೆಜಿ ಉಚಿತ ಅಕ್ಕಿ

ಕೊನೆಗೂ ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಉಚಿತ ಅಕ್ಕಿ ನೀಡಲು ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಬಗ್ಗೆ ಎಫ್‌ಸಿಐನ ಬೆಂಗಳೂರಿನ ಪ್ರಾದೇಶಿಕ ಕಚೇರಿಯ ಪ್ರಧಾನ ವ್ಯವಸ್ಥಾಪಕರು ಮಾಹಿತಿ ನೀಡಿದ್ದು, ಗುರುವಾರ ಸಭೆ ನಡೆಯಲಿದೆ. ಕಳೆದ ವರ್ಷ ಕರ್ನಾಟಕದ ಮನವಿಯನ್ನು ಯಾಕೆ ತಿರಸ್ಕರಿಸಲಾಗಿತ್ತು ಎಂಬುದನ್ನೂ ಅವರು ತಿಳಿಸಿದ್ದಾರೆ.



ಅನ್ನಭಾಗ್ಯ ಫಲಾನುಭವಿಗಳಿಗೆ ಶುಭ ಸುದ್ದಿ: ಸಿಗಲಿದೆ 10 ಕೆಜಿ ಉಚಿತ ಅಕ್ಕಿ

ಅನ್ನಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಕ್ಕಿ ಪೂರೈಸುವ ಬಗ್ಗೆ ಭಾರತೀಯ ಆಹಾರ ನಿಗಮ (ಎಫ್‌ಸಿಐ) ಈಗಾಗಲೇ ಘೋಷಣೆ ಮಾಡಿದೆ. ಹೀಗಾಗಿ ಫಲಾನುಭವಿಗಳಿಗೆ ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ಹೆಚ್ಚು ಸಿಗುವ ಸಾಧ್ಯತೆಯಿದೆ.

  • ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ಕಳೆದ ವರ್ಷ ತಿರಸ್ಕರಿಸಿತ್ತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಆದರೆ, ಇದೀಗ ಕೇಂದ್ರ ಸರ್ಕಾರ ನಿರ್ಧಾರ ಬದಲಾಯಿಸಿದೆ.
  • ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗಾಗಿ 2.38 ಲಕ್ಷ ಟನ್ ಅಕ್ಕಿಯನ್ನು ಪೂರೈಸಲು ಮನವಿ ಮಾಡಿದೆ. ಅದನ್ನು ಪೂರೈಸಲು ನಾವು ಸಿದ್ಧರಿದ್ದೇವೆ ಎಂದು ಎಫ್‌ಸಿಐನ ಬೆಂಗಳೂರಿನ ಪ್ರಾದೇಶಿಕ ಕಚೇರಿಯ ಪ್ರಧಾನ ವ್ಯವಸ್ಥಾಪಕ ಮಹೇಶ್ವರಪ್ಪ ಬಿಒ ಬುಧವಾರ ತಿಳಿಸಿದ್ದಾರೆ.

ಕಳೆದ ವರ್ಷ ಕರ್ನಾಟಕಕ್ಕೆ ಅಕ್ಕಿ ಪೂರೈಸದ್ದೇಕೆ?

  • ಕಳೆದ ವರ್ಷ ಮುಂಗಾರು ಮಳೆಯ ಕೊರತೆಯು ಅಕ್ಕಿ ದಾಸ್ತಾನಿನ ಮೇಲೆ ಪರಿಣಾಮ ಬೀರಿತ್ತು. ಹೀಗಾಗಿ ದೇಶೀಐ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಸ್ಥಗಿತಗೊಳಿಸಲಾಗಿತ್ತು. ಆ ಕಾರಣದಿಂದ ರಾಜ್ಯ ಸರ್ಕಾರದ ಮನವಿಯನ್ನು ಪರಿಗಣಿಸಿರಲಿಲ್ಲ. ಈ ವರ್ಷ ಉತ್ತಮ ಮಳೆಯಾಗಿದ್ದು, ಎಫ್‌ಸಿಐ (ಕರ್ನಾಟಕ ವಿಭಾಗ) 7.42 ಲಕ್ಷ ಟನ್ ಅಕ್ಕಿ ದಾಸ್ತಾನು ಹೊಂದಿದ್ದು, 2025 ರ ಮಾರ್ಚ್‌ವರೆಗೆ ಕೆಜಿಗೆ 28 ರೂ.ನಂತೆ ರಾಜ್ಯಕ್ಕೆ ಪೂರೈಸಲು ಸಿದ್ಧವಾಗಿದೆ ಎಂದು ಮಹೇಶ್ವರಪ್ಪ ಮಾಹಿತಿ ನೀಡಿದ್ದಾರೆ.
  • ಅಕ್ಕಿ ಖರೀದಿ ಕುರಿತು ಭಾರತೀಯ ಆಹಾರ ನಿಗಮದ ಅಧಿಕಾರಿಗಳೊಂದಿಗೆ ರಾಜ್ಯ ಸರ್ಕಾರ ಗುರುವಾರ ಸಭೆ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.
  • ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಆಹಾರ ಇಲಾಖೆ ಸಚಿವ ಪ್ರಲ್ಹಾದ್ ಜೋಶಿ ಕೆಲವು ದಿನಗಳ ಹಿಂದಷ್ಟೇ ಹೇಳಿದ್ದರು.


Post a Comment

Previous Post Next Post
CLOSE ADS
CLOSE ADS
×