Free Neet Coaching: ರಾಜ್ಯದಲ್ಲಿ 25,000 ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿ

NEET Exam:-Free Neet Coaching: ಬೆಂಗಳೂರು: ಕರ್ನಾಟಕದ ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿ ನೀಡಲು ನಿರ್ಧರಿಸಲಾಗಿದೆ. ಕರ್ನಾಟಕದ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.




ಹಲವು ವಿಷಯಗಳ ತಜ್ಞರು ರಾಜ್ಯದ 25000 ಬಡ ಪಿಯುಸಿ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಿದ್ದಾರೆ. ಸರ್ಕಾರ ಇದಕ್ಕಾಗಿ 12 ಕೋಟಿ ರೂಪಾಯಿ ಖರ್ಚು ಮಾಡಲಿದೆ. ಆನ್‌ಲೈನ್‌ನಲ್ಲೂ ತರಬೇತಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ 25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ತೇರ್ಗಡೆ ಆಗುವ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಅಲ್ಲದೆ, 8,9,10ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.

Previous Post Next Post