ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ: ಕೆಇಎ

ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ: ಕೆಇಎ

ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತವಾಗಿರದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಆ.26ರ ಒಳಗೆ ಪೂರಕ ದಾಖಲೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಸಲ್ಲಿಸಬೇಕು ಎಂದು ಕೆಇಎ ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಿದೆ.



ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ (H Prasanna) ಈ ಬಗ್ಗೆ ಸೂಚನೆ ನೀಡಿದ್ದು, ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ ಎಂದಿದ್ದಾರೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರಿಗೆ ನಿಂದನೆ; ಕಾಂಗ್ರೆಸ್ ನಾಯಕರ ವಿರುದ್ಧ ಡಿಜಿಪಿಗೆ ಬಿಜೆಪಿ ದೂರು

ಕಡ್ಡಾಯ ಕನ್ನಡ ಪರೀಕ್ಷೆ:

ಈ ಮೇಲಿನ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲೇಬೇಕು. ಸೆಪ್ಟೆಂಬರ್ 29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಈ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕೆಂದು ಸೂಚಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ನವರದ್ದು ಅಂಬೇಡ್ಕರ್‌ರನ್ನ ಅವಮಾನಿಸಿದ ಸಂಸ್ಕೃತಿ, ರಾಜ್ಯಪಾಲರ ಅಪಮಾನ ಸಹಿಸಲ್ಲ: ಗೋವಿಂದ ಕಾರಜೋಳ

ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021ರ ಅನ್ವಯ, ಕನ್ನಡ ಭಾಷಾ ಪರೀಕ್ಷೆಯಲ್ಲಿ 150 ಅಂಕಗಳಿಗೆ ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಅಕ್ಟೋಬರ್ 27ರಂದು ಪತ್ರಿಕೆ-1 ಮತ್ತು ಪತ್ರಿಕೆ-2 ಇವುಗಳನ್ನು ಒಳಗೊಂಡ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ವಿವರಿಸಿದ್ದಾರೆ. ಇದನ್ನೂ ಓದಿ: ಗಡ್ಡ ಬೆಳೆಸಲಿಲ್ಲ ಅಂತಾ 280 ಭದ್ರತಾ ಸಿಬ್ಬಂದಿ ವಜಾಗೊಳಿಸಿದ ತಾಲಿಬಾನ್‌



Post a Comment

Previous Post Next Post
CLOSE ADS
CLOSE ADS
×