ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ ರೂ 8,682 ರಂತೆ ಹೆಸರುಕಾಳು ಖರೀದಿಗೆ ಆದೇಶ

ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ ರೂ 8,682 ರಂತೆ ಹೆಸರುಕಾಳು ಖರೀದಿಗೆ ಆದೇಶ

Greengram msp price-2024: ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ ರೂ 8,682 ರಂತೆ ಹೆಸರುಕಾಳು ಖರೀದಿಗೆ ಆದೇಶ na



2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಕೂ ಗುಣಮಟ್ಟದ ಹೆಸರುಕಾಳು ಖರೀದಿಸಲು(Greengram msp price)ಅನುಮತಿ ನೀಡಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ 3.99 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಂದಾಜು 1.50 ಲಕ್ಷ ಮೆಟ್ರಿಕ್ ಟನ್ ಹೆಸರುಕಾಳು ಉತ್ಪಾದನೆಯನ್ನು ನಿರೀಕ್ಷಿಸಲಾಗಿದ್ದು, ಪ್ರಸ್ತುತ ಗದಗ, ಧಾರವಾಡ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್, ತುಮಕೂರು, ಹಾಸನ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರಮುಖವಾಗಿ ಬೆಳೆಯುತ್ತಿದ್ದು, ಕೇಂದ್ರ ಸರ್ಕಾರವು ಎಫ್.ಎ.ಕ್ಕೂ ಗುಣಮಟ್ಟದ ಹೆಸರುಕಾಳಿಗೆ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‌ಗೆ ರೂ. 8,682/- ರಂತೆ ಘೋಷಿಸಲಾಗಿರುತ್ತದೆ. 

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷರು, ಗದಗ ಜಿಲ್ಲೆ, ಗದಗ ಇವರು ಮುಂದಿನ ದಿನಗಳಲ್ಲಿ ಆವಕ ಹೆಚ್ಚಾಗಿ ಇದರಿಂದ ಧಾರಣೆಯು ಕುಸಿಯುವ ಸಂಭವವಿರುವ ಹಿನ್ನೆಲೆಯಲ್ಲಿ ರೈತರ ಉತ್ಪನ್ನಕ್ಕೆ ಕನಿಷ್ಠ ಬೆಂಬಲ ಬೆಲೆ ದೊರಕಿಸಿಕೊಡುವ ಹಿತದೃಷ್ಟಿಯಿಂದ ಗದಗ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಹೆಸರು ಹುಟ್ಟುವಳಿ ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆಯುವಂತೆ ಕೋರಿದ್ದರ ಹಿನ್ನೆಲೆಯಲ್ಲಿ,

ದಿನಾಂಕ: 01.08.2024ರಂದು ಜರುಗಿದ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಚಿವ ಸಂಪುಟ ಉಪ ಸಮಿತಿ ಸಭೆಯ ತೀರ್ಮಾನದನ್ವಯ ಬೆಂಬಲ ಬೆಲೆ ಯೋಜನೆಯಡಿ ಗದಗ ಜಿಲ್ಲೆಯಲ್ಲಿ ಹೆಸರುಕಾಳು ಖರೀದಿಸಲು ಹಾಗೂ ಇತರೆ ಮೇಲ್ಕಾಣಿಸಿದ ಜಿಲ್ಲೆಗಳಲ್ಲಿಯೂ 2024-25ನೇ ಸಾಲಿಗೆ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೋರಿರುತ್ತಾರೆ.

2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಪ್ರತಿ ಕ್ವಿಂಟಾಲ್‌ಗೆ ರೂ. 8,682/- ರಂತೆ ಗರಿಷ್ಠ 22,215 ಮೆಟ್ರಿಕ್ ಟನ್ ಎಫ್.ಎ.ಕ್ಕೂ ಗುಣಮಟ್ಟದ ಹೆಸರುಕಾಳನ್ನು,

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಗದಗ, ಧಾರವಾಡ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್, ತುಮಕೂರು, ಹಾಸನ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ರೈತರಿಂದ ಖರೀದಿಸಲು ಅನುಮತಿ ನೀಡಿ ಆದೇಶ ಹೊರಡಿಸಿದೆ.

Hesarukalu kharidi kendra-ಯಾವೆಲ್ಲ ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗುತ್ತದೆ?

ಬೀದರ್, ಯಾದಗಿರಿ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಚಿತ್ರದುರ್ಗ, ತುಮಕೂರು, ಹಾಸನ, ಮೈಸೂರು.

Greengram msp price- ಬೆಂಬಲ ಬೆಲೆ ವಿವರ:

ರೈತರಿಂದ ಖರೀದಿ ಮಾಡುವ ಪ್ರತಿ ಕ್ವಿಂಟಾಲ್ ಹೆಸರುಕಾಳುಗೆ ರೂ 8,682/- ನಿಗದಿಪಡಿಸಲಾಗಿದೆ.

Guidelines for Green Gram msp- ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿಗೆ ಅಧಿಕೃತ ಆದೇಶದಲ್ಲಿರುವ ಮಾರ್ಗಸೂಚಿಗಳು:

01) ಹೆಸರುಕಾಳನ್ನು ಖರೀದಿಸಲು ನಾಫೆಡ್ ಸಂಸ್ಥೆಯನ್ನು ಹಾಗೂ ಎನ್.ಸಿ.ಸಿ.ಎಫ್. ಸಂಸ್ಥೆಯನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು ಮತ್ತು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ, ಕಲಬುರಗಿ ಈ ಸಂಸ್ಥೆಗಳನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿದೆ.

2) ಈ ಆದೇಶ ಹೊರಡಿಸಿದ ದಿನದಿಂದ ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸತಕ್ಕದ್ದು.

03) ಪ್ರತಿ ಎಕರೆಗೆ 02 (ಎರಡು) ಕ್ಕಿಂಟಾಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 10 (ಹತ್ತು) ಕ್ವಿಂಟಾಲ್ ಖರೀದಿ ಪ್ರಮಾಣ ನಿಗದಿಪಡಿಸಿ ಹೆಚ್ಚಿನ ರೈತರಿಗೆ ಅನುಕೂಲವಾಗುವಂತೆ ಖರೀದಿಸತಕ್ಕದ್ದು.

04) ಖರೀದಿ ಕೇಂದ್ರಗಳಲ್ಲಿ ಹೆಸರುಕಾಳನ್ನು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು NIC ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ, ಬಯೋಮೆಟ್ರಿಕ್ ಮೂಲಕ ಹೆಸರುಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಲು ಬಳಸತಕ್ಕದ್ದು.

ಹಾಗೂ NIC ಸಂಸ್ಥೆಯು ಅಭಿವೃದ್ಧಿಪಡಿಸಿರುವ ಸದರಿ ನೋಂದಣಿ ತಂತ್ರಾಂಶವು ಈಗಾಗಲೇ FRUITS ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ. FRUITS ದತ್ತಾಂಶದಲ್ಲಿ ರೈತರಿಗೆ ಸಂಬಂಧಿಸಿದ ವಿವರಗಳನ್ನು ಭೂಮಿ, UIDAI ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳ ಮಾಡಿ ವಿವರಗಳನ್ನು ಇಂದೀಕರಿಸಲಾಗಿದೆ. 

ಸದರಿ ವಿವರಗಳನ್ನು ಬೆಂಬಲ ಬೆಲೆ ಯೋಜನೆ ಯಡಿ ನೋಂದಣಿ ಮಾಡಲು ಸಿದ್ಧಪಡಿಸಿದ ತಂತ್ರಾಂಶಕ್ಕೆ ವಿದ್ಯುನ್ಮಾನ ರೀತಿಯಲ್ಲಿ ಒದಗಿಸಲಾಗುತ್ತದೆ. ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ನಂತರ NIC ತಂತ್ರಾಂಶದಿಂದ ನಾಫೆಡ್ ಹಾಗೂ ಎನ್.ಸಿ.ಸಿ.ಎಫ್ ಸಂಸ್ಥೆಯ ತಂತ್ರಾಂಶಕ್ಕೆ ರೈತರ ನೋಂದಣಿ ಮಾಹಿತಿಯನ್ನು ಒದಗಿಸಲಾಗುವುದು. 

ನಾಫೆಡ್ ಹಾಗೂ ಎನ್.ಸಿ.ಸಿ.ಎಫ್. ಸಂಸ್ಥೆಯ ತನ್ನ ತಂತ್ರಾಂಶದಲ್ಲಿ ಈ ಮಾಹಿತಿಯನ್ನು ಬಳಸಿ ರೈತರಿಂದ ಹೆಸರುಕಾಳನ್ನು ಖರೀದಿ ಕೇಂದ್ರಗಳಿಂದ ಖರೀದಿಸತಕ್ಕದ್ದು.

05) ಖರೀದಿ ಸಂಸ್ಥೆಗಳು ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ನಾಫೆಡ್ ಹಾಗೂ ಎನ್.ಸಿ.ಸಿ.ಎಫ್. ಮಾರ್ಗಸೂಚಿಯನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸದೃಡ PACS/VSSN/FPO/TAPCMS ಸಂಸ್ಥೆಗಳ ಮುಖಾಂತರ ಒಡಂಬಡಿಕೆ ಮಾಡಿಕೊಂಡು ಕ್ರಮವಹಿಸತಕ್ಕದ್ದು. ಕೇಂದ್ರಗಳನ್ನು ತೆರೆಯಲು

06) ಹೆಸರುಕಾಳು ಖರೀದಿ ಪ್ರಕ್ರಿಯೆಯಲ್ಲಿ ಎಫ್‌ಎಕ್ಕೂ ಗುಣಮಟ್ಟದ ಪರಿಶೀಲನೆಗಾಗಿ ಜಿಲ್ಲಾಡಳಿತ ಮಟ್ಟದಲ್ಲಿ ಕೃಷಿ / ತೋಟಗಾರಿಕೆ ಇಲಾಖೆಗಳಲ್ಲಿ ಲಭ್ಯವಿರುವ ಅಧಿಕಾರಿ / ಸಿಬ್ಬಂದಿಗಳನ್ನು ಬಳಸಿಕೊಳ್ಳುವುದು, ತರಬೇತಿ ಅವಶ್ಯವಿದ್ದಲ್ಲಿ ಅಂತಹ ಸಿಬ್ಬಂದಿಗಳಿಗೆ ಸೂಕ್ತ ಎಫ್.ಎ.ಕ್ಯೂ. ಗ್ರೇಡಿಂಗ್ ತರಬೇತಿ ನೀಡಲು ಸಂಬಂಧಪಟ್ಟ ಖರೀದಿ ಸಂಸ್ಥೆಗಳು ಕ್ರಮವಹಿಸತಕ್ಕದ್ದು.

07) ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯು ಸಂಬಂಧಪಟ್ಟ ಜಿಲ್ಲೆಯಲ್ಲಿ ಅವಶ್ಯಕತೆಗನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ನಾಫೆಡ್ ಸಂಸ್ಥೆ, ಎನ್.ಸಿ.ಸಿ.ಎಫ್. ಸಂಸ್ಥೆ ಹಾಗೂ ಖರೀದಿ ಏಜೆನ್ಸಿಯೊಂದಿಗೆ ಸಮಾಲೋಚಿಸಿ ನಿರ್ಧರಿಸಿಕೊಂಡು, ಈ ಆದೇಶ ಹೊರಡಿಸಿದ ದಿನಾಂಕದಿಂದ 03 ದಿನಗಳೊಳಗಾಗಿ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಕಾರ್ಯ ಪ್ರಾರಂಭಿಸತಕ್ಕದ್ದು.

08) ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳಂತೆ, ರೈತರಿಗೆ ನಿಗದಿತ ಅವಧಿಯೊಳಗೆ ಖರೀದಿ ಪ್ರಮಾಣದ ಮೌಲ್ಯವನ್ನು DBT ಮೂಲಕ ಜಮೆ ಆಗುವಂತೆ ಪಾವತಿ ಮಾಡತಕ್ಕದ್ದು ಹಾಗೂ ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

09) ಹೆಸರುಕಾಳು ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಹೆಸರುಕಾಳು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಧಿಕೃತ ಆದೇಶದ ಪ್ರತಿ: Download Now

Post a Comment

Previous Post Next Post
CLOSE ADS
CLOSE ADS
×