ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಅರ್ಜಿ ಆಹ್ವಾನ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಅರ್ಜಿ ಆಹ್ವಾನ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆಗಳ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.



ಆಸಕ್ತರು ಆ.31 ರೊಳಗಾಗಿ https://ambigaradevelopment.karnataka.gov.in

ಸೇವಾಸಿಂಧು ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ ಸೈಟ್ ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಅಥವಾ ಕಚೇರಿಯ ದೂರವಾಣಿ:0831-2402163 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು- ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ ಈ ಯೋಜನೆಯಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳ ಸಹಾಯಧನ ಸಾಲ ಸೌಲಭ್ಯಗಳನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆಗಳು

ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಸರ್ಕಾರದ ಆದೇಶ ಸಂಖ್ಯೆ ಸಕಇ 225/ಬಿಸಿಎ/2000 ದಿನಾಂಕ 30-03-2002 ರನ್ವಯ ವಿಶ್ವಕರ್ಮ ಸಮುದಾಯ ಹಾಗು ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು, ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗರ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಆಸಕ್ತರು ಆ.31 ರೊಳಗಾಗಿ ಅರ್ಜಿಗಳನ್ನು ಸೇವಾ ಸಿಂಧು ಮೂಲಕ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ನಿಗಮದ https://kvcdcl.karnataka.gov.in ಅಥವಾ ಕಛೇರಿಯ ದೂರವಾಣಿ:080-22374848/2402163, 7899899039 ಸಂಖ್ಯೆಗೆ ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ) ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

Previous Post Next Post
CLOSE ADS
CLOSE ADS
×