ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು:- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ (PUC & Equivalent Courses), ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಈ ಕೋರ್ಸ್ ಗಳಿಗೆ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ(“ಊಟ ಮತ್ತು ವಸತಿ ಸಹಾಯ ಯೋಜನೆ”), ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.



ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆ ದಿನವಾಗಿದ್ದು, ಆನ್ಲೈನ್ ಮೂಲಕ https://ssp.postmatric.karnataka.gov.in/ ಈ ವೆಬ್ ಸೈಟ್ನಲ್ಲಿ ಅರ್ಜಿಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ- https://bcwd.karnataka.gov.in ಇಲಾಖಾ ಸಹಾಯವಾಣಿ ಸಂಖ್ಯೆ:8050770005 ಇಮೇಲ್: bcwdhelpline@gmail.com ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ಸಹಾಯವಾಣಿ ಸಂಖ್ಯೆ: 1902 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಇಲಾಖಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Post a Comment

Previous Post Next Post
CLOSE ADS
CLOSE ADS
×