ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದಿಂದ ಅನುಷ್ಠಾನಗೊಳಿಸಲಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯ ಸೌಲಭ್ಯ ಪಡೆಯಲು ವೀರಶೈವ ಲಿಂಗಾಯತ ಜಾತಿ



ಹಾಗೂ ಉಪಜಾತಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯ ಪಡೆಯಲು

https://www.kaushalkar.com ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvldcl.karnataka.gov.in ಅಥವಾ ನಿಗಮದ ದೂ.ಸಂಖ್ಯೆ: 080-22865522, ಮೊ.ನಂ: 9900012351 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ

ಅಭಿವೃದ್ಧಿ ನಿಗಮ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

Previous Post Next Post
CLOSE ADS
CLOSE ADS
×