ಹೊಸ ರೇಷನ್ ಕಾರ್ಡ್ ಗೆ ಸಧ್ಯದಲ್ಲೇ ಅರ್ಜಿ ಆಹ್ವಾನ ; ಆಹಾರ ಇಲಾಖೆ ಗೈಡ್ ಲೈನ್ ಇಲ್ಲಿದೆ

ಹೊಸ ರೇಷನ್ ಕಾರ್ಡ್ ಗೆ ಸಧ್ಯದಲ್ಲೇ ಅರ್ಜಿ ಆಹ್ವಾನ ; ಆಹಾರ ಇಲಾಖೆ ಗೈಡ್ ಲೈನ್ ಇಲ್ಲಿದೆ

ಹೊಸ ರೇಷನ್ ಕಾರ್ಡ್ ಗೆ ಅರ್ಜಿಗೆ ಇಲ್ಲಿಯವರೆಗೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಕುಟುಂಬಗಳಿಗೆ ಈಗ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ. ಆಹಾರ ಇಲಾಖೆಯ ಅಡಿಯಲ್ಲಿ ಇಷ್ಟು ದಿನ ಹೊಸ ರೇಷನ್ ಕಾರ್ಡ್ ವಿತರಣೆಗೆ ತಡೆ ಇದ್ದ ಹಿನ್ನೆಲೆಯಲ್ಲಿ ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಇರಲಿಲ್ಲ. ಈಗ ಆಹಾರ ಇಲಾಖೆ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗುವ ಬಗ್ಗೆ ಸರ್ಕಾರ ಮಹತ್ವದ ಸುಳಿವು ನೀಡಿದೆ.



ಆಹಾರ ಇಲಾಖೆ ವೆಬ್ಸೈಟ್ ahara.kar.nic.in ರಲ್ಲಿ ಸರ್ಕಾರ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹಿಂದೆ ರೇಷನ್ ಕಾರ್ಡ್ ಗೆ ಸಲ್ಲಿಸಿದ್ದ ಅರ್ಜಿಗಳ ಪರಿಶೀಲನೆ ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಯುತ್ತಿದ್ದು, ಪರಿಶೀಲನೆ ಸಂಪೂರ್ಣವಾಗಿ ಮುಗಿದು, ರೇಷನ್ ಕಾರ್ಡ್ ವಿತರಣೆ ಆದ ತಕ್ಷಣವೆ ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 15 ರಿಂದ 30ನೇ ತಾರೀಕಿನೊಳಗೆ ಯಾವುದಾದರೂ ಒಂದು ದಿನದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅಗತ್ಯ ದಾಖಲೆಗಳಿದ್ದರೆ ಮೇಲೆ ಕಾಣಿಸಿದ ವೆಬ್ಸೈಟ್ ಮುಖಾಂತರವೇ ತಾವಿದ್ದಲ್ಲಿಂದಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಅರ್ಜಿ ಪರಿಶೀಲನೆ ನಡೆಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

  • ವೋಟರ್ ಐಡಿ
  • ಆಧಾರ್ ಕಾರ್ಡ್
  • ವಯಸ್ಸಿನ ಪ್ರಮಾಣ ಪತ್ರ
  • ಡ್ರೈವಿಂಗ್ ಲೈಸೆನ್ಸ್
  • ಪಾರ್ಸ್ ಪೋರ್ಟ್ ಭಾವಚಿತ್ರ
  • ಮೊಬೈಲ್ ಸಂಖ್ಯೆ
  • ಸ್ವಯಂ ಘೋಷಿತ ಪ್ರಮಾಣ ಪತ್ರ

ಹೊಸ ಅರ್ಜಿಗೆ ಅನುಸರಿಸಬೇಕಾದ ಕ್ರಮಗಳೇನು

* kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.

* ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ.

* ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಅರ್ಜಿ ಸಲ್ಲಿಸಬಹುದು.

* ಈ ಜಾಲತಾಣದಲ್ಲಿ ಕ್ಲಿಕ್ ಮಾಡಿದ ನಂತರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಬೇಕು

* ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ.

* ಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಾಡಿ, ಅಲ್ಲಿ ಕೇಳುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕು.

* ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಬೇಕು.

* ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದು.

Post a Comment

Previous Post Next Post
CLOSE ADS
CLOSE ADS
×