Anganwadi Recruitment: 1476 ಹುದ್ದೆಗಳಿಗೆ ನೇಮಕಾತಿ: SSLC ಆದವರು ಅರ್ಜಿ ಸಲ್ಲಿಸಿ

Anganwadi Jobs, Anganwadi Recruitment:-ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ವೇತನ, ಅಂಗನವಾಡಿ ಸಹಾಯಕಿಗೆ 5 ಸಾವಿರ ವೇತನ



Anganwadi Recruitment: ರಾಜ್ಯದ ವಿವಿಧ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1476 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ( Anganwadi Recruitment) ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ವೇತನ, ಅಂಗನವಾಡಿ ಸಹಾಯಕಿಗೆ 5 ಸಾವಿರ ವೇತನ ನಿಗದಿಯಾಗಿದೆ.

Anganwadi Recruitment 

  • ಇಲಾಖೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
  • ಹುದ್ದೆಗಳು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು
  • ಒಟ್ಟು ಹುದ್ದೆಗಳು:- 1476
  • ಅರ್ಜಿ ಸಲ್ಲಿಸುವ ವಿಧಾನ:- Online
  • ವಿದ್ಯಾರ್ಹತೆ:- SSLC

ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಉಡುಪಿ 193, ದಕ್ಷಿಣ ಕನ್ನಡ 335, ರಾಯಚೂರು 391 , ರಾಮನಗರ 216, ಮಂಡ್ಯದಲ್ಲಿ 341 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿ ನಿಗದಿಯಾಗಿದೆ. ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

Important links 

ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೆಲ ಜಿಲ್ಲೆಗಳಿಗೆ ಸೆಪ್ಟೆಂಬರ್ 20, 29 ಮತ್ತು 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.


Previous Post Next Post