ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture-department-subsidy-schemes-2024

ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture-department-subsidy-schemes-2024

ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-ರಾಷ್ಟ್ರೀಯ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ; ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.



ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ; ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್‍ರವರೆಗೆ ಶೇಕಡಾ 90%) ಸಹಾಯಧನ.ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‌ಹೌಸ್, ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾ‌ರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ

https://horticulturedir.karnataka.gov.in/info-2/Facilities+available+to+farmers/kn

ವಿವಿಧ ಯೋಜನೆಗಳು:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:

ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೆÇೀಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:

ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್‍ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:

ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.

ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

Post a Comment

Previous Post Next Post
CLOSE ADS
CLOSE ADS
×