Krishi pandita prashasti-2024: ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Krishi pandita prashasti-ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಭಿನ್ನ ಸಾಧನೆ ಮಾಡಿದ ಸೃಜನಶೀಲ ರೈತ ಮತ್ತು ರೈತ ಮಹಿಳೆಯರಿಂದ 2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್‍ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿಗಳನ್ನು(Krishi pandita prashasti application) ಅಹ್ವಾನಿಸಲಾಗಿದೆ.



ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೃಷಿ ಇಲಾಖೆಯ K-KISAN Portal ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್‍ಐಡಿ -Fruits Identification ಸಂಖ್ಯೆಯನ್ನು ಬಳಸಿಕೊಂಡು Citizen Login ಅಥವಾ RSK Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ / ಸಾರ್ವಜನಿಕ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

Krishi pandita online application link-ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ರೈತರು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Step-1: ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ "Citizen login" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: "Citizen login" ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ಇಲ್ಲಿ Krishi "Prashasti Application Entry/ಕೃಷಿ ಪ್ರಶಸ್ತಿ ಅರ್ಜಿ ನೋಂದಣಿ" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿದಾರ ರೈತರ FID ನಂಬರ್/ಆಧಾರ್ ನಂಬರ( Aadhar No) ಅನ್ನು ಹಾಕಿ Get details ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-4: Get details ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ ಇಲ್ಲಿ ನಿಮ್ಮ ವೈಯಕ್ತಿಕ ವಿವರ ಮತ್ತು ಬ್ಯಾಂಕ್ ವಿವರ ಜಮೀನಿನ ವಿವರ ಗೋಚರಿಸುತ್ತದೆ ಇತರೆ ಮಾಹಿತಿಯನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ಸಲ್ಲಿಕೆಯಾಗುತ್ತದೆ.

Best farmer award amount-ಕೃಷಿ ಪಂಡಿತ ಪ್ರಶಸ್ತಿಗೆ ನಿಗದಿಪಡಿಸಿರುವ ಬಹುಮಾನದ ವಿವರ ಹೀಗಿದೆ:

1) ಕೃಷಿ ಪಂಡಿತ ಪ್ರಥಮ- 1,25,000/- ರೂ

2) ಕೃಷಿ ಪಂಡಿತ ದ್ವಿತೀಯ- 1,25,000/- ರೂ

3) ಕೃಷಿ ಪಂಡಿತ ತೃತೀಯ-75,000/- ರೂ

2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು 30 ಸೆಪ್ಟೆಂಬರ್ 2024 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ನಮೂನೆ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು, 

ಅರ್ಜಿ ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿಯ ಅಪರ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Required documents for krishi pandit award-ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ.

2) ಬ್ಯಾಂಕ್ ಪಾಸ್ ಬುಕ್.

3) ದಿನ ಪತ್ರಿಕೆಯಲ್ಲಿ ಪ್ರಕಟವಾಗಿರುವ ಕೃಷಿ ಯಶಸ್ಸಿನ ಯಶೋಗಾಥೆಗಳು.

4) ಪೋಟೋ.

5) ಜಮೀನಿನ ಪಹಣಿ.

6) ಮೊಬೈಲ್ ಸಂಖ್ಯೆ.

Online application link- ಅರ್ಜಿ ಸಲ್ಲಿಸಲು ಲಿಂಕ್: Apply Now

Previous Post Next Post