ksou admission:-ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2024-25ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ(ksou admission) ಆರಂಭಿಸಿದ್ದು, ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಸ್ಸಿ., ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್.ಐ.ಎಸ್ಸಿ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಲ್ಲೇಶ್ವರಂನ ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಿದೆ.
KSOU Courses- ಯಾವೆಲ್ಲ ಕೋರ್ಸ್ ಗೆ ಅರ್ಜಿ ಆಹ್ವಾನಿಸಲಾಗಿದೆ?
1) ಬಿ.ಎ(B.A)
2)ಬಿ.ಕಾಂ(B.com)
3)ಬಿ.ಬಿ.ಎ(B.B.A)
4)ಬಿ.ಸಿ.ಎ(B.C.A)
5)ಬಿ.ಎಸ್ಸಿ(B.Sc)
6)ಎಂ.ಎ(M.A)
7)ಎಂ.ಸಿ.ಜೆ(MCJ)
8)ಎಂ.ಕಾಂ(M.com)
9)ಬಿ.ಎಲ್.ಐ.ಎಸ್ಸಿ
10)ಎಂ.ಎಲ್.ಐ.ಎಸ್ಸಿ
11)ಎಂ.ಎಸ್ಸಿ(M.Sc)
12)ಎಂ.ಬಿ.ಎ(MBA)
13)ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್(PG certificate course)
14)ಡಿಪ್ಲೋಮಾ ಪ್ರೋಗ್ರಾಮ್ಸ್(Diploma certificate course)
15)ಸರ್ಟಿಫಿಕೇಟ್ ಪ್ರೋಗ್ರಾಮ್ಸ್
Online application link- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ವಿವಿಯ ಅಧಿಕೃತ ಜಾಲತಾಣವನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದಾಗಿದೆ.
KSOU Courses online application link-ಅರ್ಜಿ ಸಲ್ಲಿಸಲು ಲಿಂಕ್:
ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ / ಕ್ಯಾಬ್ ಚಾಳಕರು ಮತ್ತು ಅವರ ಮಕ್ಕಳಿಗೆ, ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಕೆಡಬ್ಲ್ಯೂಕೆಆರ್‍ಟಿಸಿ, ಕೆಕೆಆರ್‍ಟಿಸಿ, ನೌಕರರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದೆ. ಕೋವಿಡ್-19ರ ಸಾಂಕ್ರಾಮಿಕ ರೋಗದಿಂದ ಮೃತರಾದ ಪೋಷಕರ ಮಕ್ಕಳಿಗೆ, ತೃತೀಯ ಲಿಂಗದ ವಿದ್ಯಾರ್ಥಿಗಳಿಗೆ, ದೃಷ್ಟಿಹೀನ ವಿದ್ಯಾಥಿಗಳಿಗೆ (ಬಿ.ಇಡಿ, ಎಂಬಿಎ ಹೊರತುಪಡಿಸಿ) ಎಸ್‍ಸಿ/ಎಸ್‍ಟಿ/ಒಬಿಸಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಎಸ್‍ಎಸ್‍ಪಿ ಮುಖಾಂತರ ವಿದ್ಯಾರ್ಥಿವೇತನವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಶಶಿಕಲಾ ಜೆ, ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯ ರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03 ಹಾಗೂ ಕಛೇರಿ ದೂರವಾಣಿ ಸಂಖ್ಯೆ - 080 23448811, 9741197921, 9620395584, 7760848564ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಶಶಿಕಲಾ. ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.