ಟೆಕ್ ದೈತ್ಯ ಸ್ಯಾಮ್‌ಸಂಗ್ ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್ ಆವೃತ್ತಿಯನ್ನು (Samsung Galaxy M15 5G Prime) ಬಿಡುಗಡೆ ಮಾಡಿದೆ. ಅಂದಹಾಗೆ, ಪ್ರಸ್ತುತ ಈ ಫೋನ್ ಖರೀದಿಗೆ ಲಭ್ಯವಿದೆ. ಇದು ಬಜೆಟ್ ಸ್ನೇಹಿ 5G ಸ್ಮಾರ್ಟ್‌ಫೋನ್ ಆಗಿದೆ. ಈ ಫೋನ್ 6000mAh ದೊಡ್ಡ ಬ್ಯಾಟರಿಯೊಂದಿಗೆ ಬರುತ್ತದೆ. ಜೊತೆಗೆ, 6.5 ಇಂಚಿನ ಅಮೋಲೆಡ್ ಡಿಸ್ಪ್ಲೇ, ಹೆಚ್‌ಡಿ ಪ್ಲಸ್ ರೆಸಲ್ಯೂಶನ್, 90Hz ರಿಫ್ರೆಶ್ ದರ, ಆಂಡ್ರಾಯ್ಡ್ 14 ಓಎಸ್, 128GB ಸ್ಟೋರೇಜ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್ ಆವೃತ್ತಿಯನ್ನು ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟ ಮಾಡುತ್ತಿದೆ. 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 13,499 ರೂ. ಆಗಿದೆ. 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 14,999 ರೂ. ಮತ್ತು 8GB RAM + 128GB ಸ್ಟೋರೇಜ್ ಮಾದರಿಯ ಬೆಲೆ 16,499 ರೂ.ಗೆ ಲಭ್ಯವಿದೆ.
Samsung Galaxy M15 5G
ನೀವು ಅಮೆಜಾನ್, ಸ್ಯಾಮ್‌ಸಂಗ್ ಅಧಿಕೃತ ವೆಬ್‌ಸೈಟ್ (Samsung.com) ಮತ್ತು ಇತರೆ ಚಿಲ್ಲರೆ ಅಂಗಡಿಗಳ ಮೂಲಕ ಫೋನ್ ಖರೀದಿಗೆ ಲಭ್ಯವಿದೆ. ಬಿಡುಗಡೆಯ ಆಫರ್‌ಗಳ ಭಾಗವಾಗಿ, ಈ ಫೋನಿನ ಮೂರು ರೂಪಾಂತರಗಳನ್ನು 10,999 ರೂ., 11,999 ರೂ. ಮತ್ತು 13,499 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಈ ಆಫರ್ ಬೆಲೆಗಳು ಸೀಮಿತ ಅವಧಿಗೆ ಮಾತ್ರ ಲಭ್ಯವಿರುತ್ತವೆ. ನೀವು, ಬ್ಲೂ ಟೋಪಾಜ್, ಸೆಲೆಸ್ಟಿಯಲ್ ಬ್ಲೂ ಮತ್ತು ಸ್ಟೋನ್ ಗ್ರೇ ಬಣ್ಣದ ಆಯ್ಕೆಗಳಲ್ಲಿ ಈ ಫೋನ್ ಖರೀದಿಸಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್ ಆವೃತ್ತಿಯ ಟಾಪ್ 5 ವೈಶಿಷ್ಟ್ಯಗಳು
ಡಿಸ್ಪ್ಲೇ: ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್ ಆವೃತ್ತಿಯು 6.5 ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಪೂರ್ಣ ಹೆಚ್‌ಡಿ ಪ್ಲಸ್ ರೆಸಲ್ಯೂಶನ್, 90Hz ರಿಫ್ರೆಶ್ ದರವನ್ನು ಹೊಂದಿದೆ.
ಪ್ರೊಸೆಸರ್:
ಕಂಪನಿಯು ಈ ಫೋನನ್ನು ಮೀಡಿಯಾ ಟೆಕ್ ಡೈಮೆನ್ಷನ್ 6100 ಪ್ಲಸ್ ಪ್ರೊಸೆಸರ್‌ನೊಂದಿಗೆ ಪರಿಚಯಿಸಿದೆ. ಗ್ರಾಫಿಕ್ಸ್‌ಗಾಗಿ ಮಾಲಿ G57 MC2 ಜಿಪಿಯು ಅನ್ನು ಒದಗಿಸಲಾಗಿದೆ. ಈ ಪ್ರೈಮ್ ಫೋನ್ 4GB+128GB, 6GB+128GB, 8GB+128GB ಸ್ಟೋರೇಜ್ ರೂಪಾಂತರಗಳಲ್ಲಿ ಲಭ್ಯವಿದೆ. ಮೈಕ್ರೊ ಎಸ್‌ಡಿ ಕಾರ್ಡ್ ಬೆಂಬಲವೂ ಇದೆ.
ಕ್ಯಾಮೆರಾ:
ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಸೆಲ್ಫಿ ಪ್ರಿಯರಿಗಾಗಿ, ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ:
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಪ್ರೈಮ್ ಅನ್ನು 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಇದು 25W ವೇಗದ ಚಾರ್ಜಿಂಗ್ ಬೆಂಬಲ ಪಡೆದಿದೆ. ಈ ಫೋನ್ 160.1 ಎಂಎಂ ಉದ್ದ, 76.8 ಎಂಎಂ ಅಗಲ, 9.3 ಎಂಎಂ ದಪ್ಪ ಮತ್ತು 217 ಗ್ರಾಂ ತೂಕವನ್ನು ಹೊಂದಿದೆ.
ಇತರೆ ವೈಶಿಷ್ಟ್ಯಗಳು:
ನೂತನ ಸ್ಯಾಮ್‌ಸಂಗ್ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, 3.5 ಎಂಎಂ ಆಡಿಯೋ ಜ್ಯಾಕ್, ಸ್ಯಾಮ್‌ಸಂಗ್ Knox ಭದ್ರತೆಯನ್ನು ಹೊಂದಿದೆ. ಇದು ಡ್ಯುಯಲ್ ಸಿಮ್, 5G, 4G, ಬ್ಲೂಟೂತ್ 5.3, Wi-Fi 5, ಜಿಪಿಎಸ್ ಸೇರಿದಂತೆ ಹಲವು ಆಯ್ಕೆಗಳನ್ನು ಹೊಂದಿದೆ.