ಉಚಿತ ಹೊಲಿಗೆ ಯಂತ್ರ,ಬೋರವೆಲ್,ವಾಹನ ಖರೀದಿ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ-Subsidy schemes-2024

ಉಚಿತ ಹೊಲಿಗೆ ಯಂತ್ರ,ಬೋರವೆಲ್,ವಾಹನ ಖರೀದಿ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ-ರಾಜ್ಯ ಸರ್ಕಾರವು ಜನತೆಗೆ ಸಿಹಿಸುದ್ದಿ ನೀಡಿದ್ದು, ಆಗಸ್ಟ್ 31ಕ್ಕೆ ಕೊನೆಯ ದಿನಾಂಕವಾಗಿದ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸೆಪ್ಟೆಂಬರ್ 15ರವರೆಗೆ ಮುಂದೂಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು.



ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಎಲ್ಲಾ ಯೋಜನೆಗಳು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.

Previous Post Next Post