ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತವಾಗಿ ವಾಹನ ಚಾಲನಾ ತರಬೇತಿಯನ್ನು ನೀಡುತ್ತಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ವಸತಿ ಸಹಿತ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ವಸತಿ ಸೌಕರ್ಯ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ನೀಡಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಸಿ, ವಿವರಗಳು ಹೀಗಿವೆ.
ಬಿಎಂಟಿಸಿಯು ಕರ್ನಾಟಕ ಸರ್ಕಾರದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿಎಸ್‌ಪಿ) ಯೋಜನೆಯಡಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯನ್ನು ನೀಡಲಿದೆ.
ವಸತಿ ಸಹಿತ/ ವಸತಿ ರಹಿತ ಚಲನಾ ತರಬೇತಿ ಕಾರ್ಯಕ್ರಮ ಇದಾಗಿದೆ. ಸದರಿ ತರಬೇತಿಯನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ಅರ್ಹತೆಗಳು/ ಸಲ್ಲಿಸಬೇಕಾಗಿರುವ ದಾಖಲಾತಿಗಳ ವಿವರಗಳು ಹೀಗಿವೆ.
ಅರ್ಜಿ ಸಲ್ಲಿಕೆಗೆ ವಿವರಗಳು:
ಲಘು ವಾಹನ ಚಾಲನಾ ತರಬೇತಿ. ಕಾರು/ ಜೀಪ್. ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು (ಅರ್ಜಿ ಸಲ್ಲಿಕೆ ದಿನಾಂಕಕ್ಕೆ). ಭಾರಿ ವಾಹನ ಚಾಲನಾ ತರಬೇತಿ (ಬಸ್). ಕನಿಷ್ಠ 20 ವರ್ಷ ಮತ್ತು ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಲಘು ವಾಹನ ಚಾಲನಾ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರ್ಣಗೊಂಡಿರಬೇಕು. (ಅರ್ಜಿ ಸಲ್ಲಿಕೆ ದಿನಾಂಕಕ್ಕೆ). ಅರ್ಜಿ ಸಲ್ಲಿಸುವವರು ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ. ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 5 ಸಲ್ಲಿಸಬೇಕು.
BMTC ಡಿಜಿಟಲ್ ಪಾಸ್ ಪಡೆಯುವುದು ಇದೀಗ ಇನ್ನೂ ಸುಲಭ-ಹೇಗೆ?-ಇಲ್ಲಿದೆ ಮಾಹಿತಿ
ಪ್ರಮುಖ ಅಂಶಗಳು
* ಮೊದಲು ಬಂದವರಿಗೆ, ಮೊದಲ ಆದ್ಯತೆಯ ಮೇರೆಗೆ, ಅರ್ಹ ಅಭ್ಯರ್ಥಿಗಳಿಗೆ ಲಘು/ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ.
* ವಸತಿ ಸಹಿತ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ (ನಿಗದಿತ ಸಂಖ್ಯೆಯಂತೆ) ತರಬೇತಿ ಅವಧಿಯಲ್ಲಿ ವಸತಿ ಸೌಕರ್ಯ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ನೀಡಲಾಗುತ್ತದೆ.
* ಮೇಲಿನ ಅರ್ಹತೆ ಹೊಂದಿದ್ದು, ಆಸಕ್ತಿ ಇರುವ ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
* ಅರ್ಜಿ ಸಲ್ಲಿಕೆ ಸಂಬಂಧಿತ ವಿಚಾರಣೆಗಾಗಿ ಸೇವಾಸಿಂಧು ಪೋರ್ಟಲ್ ಸಹಾಯ ಕೇಂದ್ರದ ಸಂಪರ್ಕ ಸಂಖ್ಯೆ 08022279954, 8792662814/ 8792662816 (ಸರ್ಕಾರಿ ರಜೆಯನ್ನು ಹೊರತುಪಡಿಸಿ ಎಲ್ಲಾ ಕೆಲಸದ ದಿನಗಳಲ್ಲಿ (ಸಮಯ: ಬೆಳಗ್ಗೆ 10 ರಿಂದ ಸಂಜೆ 6.30 ಗಂಟೆ) ಸಂಪರ್ಕಿಸುವುದು.
* ತರಬೇತಿ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ವೆಬ್‌ಸೈಟ್ www.mybmtc.gov.in ನಿಂದ ಮತ್ತು ದೂರವಾಣಿ ಸಂಖ್ಯೆ 6364858520/ 7760991085 (ಕಛೇರಿಯ ವೇಳೆಯಲ್ಲಿ ಸಮಯ ಬೆಳಗ್ಗೆ 10 ರಿಂದ ಸಂಜೆ 5.30 ಮಾತ್ರ ಸಂಪರ್ಕಿಸುವುದು) ಮುಖಾಂತರ ಪಡೆಯಬಹುದಾಗಿದೆ.
* ತರಬೇತಿಗೆ ಹಾಜರಾಗುವ ವೇಳೆಯಲ್ಲಿ ಅಭ್ಯರ್ಥಿಗಳು ಮೇಲಿನ ತಮ್ಮ ಮೂಲ ದಾಖಲೆ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಮುದ್ರಿತ ಅರ್ಜಿ ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗುವುದು.