ನಿರುದ್ಯೋಗಿ ಯುವಕರಿಗೆ ಟ್ಯಾಕ್ಸಿ ಮತ್ತು ಸರಕು ವಾಹನ ಖರೀದಿ ಮಾಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಅರ್ಥಿಕವಾಗಿ(Car loan Subsidy application) ನೆರವಾಗಲು ಸ್ವಾವಲಂಭಿ ಸಾರಥಿ ಯೋಜನೆಯಡಿ ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಪ್ಲಿಕೇಶನ್ ಅನ್ನು ಸಲ್ಲಿಸಲು ಅನುಸರಿಸಬೇಕಾದ ವಿಧಾನ ಯಾವುದು? ಅಗತ್ಯ ದಾಖಲೆಗಳೇನು? ಅರ್ಜಿ ಸಲ್ಲಿಕೆ ವಿಧಾನ? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ವಾಹನ ಪಡೆಯಲು ಎಷ್ಟು ಸಬ್ಸಿಡಿ ನೀಡಲಾಗುತ್ತದೆ? ಇತ್ಯಾದಿ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Car loan Subsidy amount-ವಾಹನ ಪಡೆಯಲು ಎಷ್ಟು ಸಬ್ಸಿಡಿ ನೀಡಲಾಗುತ್ತದೆ?
ಸರಕು ಅಥವಾ ಯೆಲ್ಲೋ ಬೋರ್ಡ್/ಟ್ಯಾಕ್ಸಿ ಕಾರ್ ಅನ್ನು ಖರೀದಿಸಲು ಬ್ಯಾಂಕ್ ಮೂಲಕ ಪಡೆಯುವ ಒಟ್ಟು ಸಾಲಕ್ಕೆ ಗರಿಷ್ಠ ಶೇ 75% ನಷ್ಟು ಅಥವಾ ಗರಿಷ್ಠ 4.0 ಲಕ್ಷ ಸಬ್ಸಿಡಿಯನ್ನು ಒದಗಿಸಲಾಗುತ್ತದೆ.
Documents-ಅಗತ್ಯವಿರುವ ಡಾಕ್ಯುಮೆಂಟ್ಸ್ ಮಾಹಿತಿ:
1) ಆಧಾರ್ ಕಾರ್ಡ
2) ರೇಶನ್ ಕಾರ್ಡ
3) ಡ್ರೈವಿಂಗ್ ಲೆಸೈನ್ಸ್
4) ಬ್ಯಾಂಕ್ ಪಾಸ್ ಬುಕ್
5) ಅಭ್ಯರ್ಥಿಯ ಪೋಟೋ
6) ಪಾನ್ ಕಾರ್ಡ
7) ಜಾತಿ ಮತ್ತು ಆದಾಯ ಪ್ರಮಾಣ ಪತ್ರ
Apply Method-ಅಪ್ಲಿಕೇಶನ್ ಹಾಕುವ ಮಾಹಿತಿ ಹೀಗಿದೆ:
ಮೇಲೆ ತಿಳಿಸಿರುವ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಸೇವಾ ಸಿಂಧು ವೆಬ್ಸೈಟ್ ಮೂಲಕ ಅಥವಾ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.
Last date for car loan subsidy yojana application–ಅಪ್ಲಿಕೇಶನ್ ಹಾಕಲು ಕೊನೆಯ ದಿನಾಂಕ:
ಸಬ್ಸಿಡಿಯಲ್ಲಿ ಸರಕು ವಾಹನ/ಯಲ್ಲೋ ಬೋರ್ಡ ಟ್ಯಾಕ್ಸಿ ಕಾರ್ ಅನ್ನು ಸಬ್ಸಿಡಿಯಲ್ಲಿ ಖರೀದಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 23-11-2024 ಕೊನೆಯ ದಿನಾಂಕವಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ: 23-10-2024
Who can apply for car loan subsidy scheme-ಅಪ್ಲಿಕೇಶನ್ ಅನ್ನು ಹಾಕಲು ಅರ್ಹರು ಯಾರು?
ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ನೀರುದ್ಯೋಗಿ ಯುವಕರು.
ಯೆಲ್ಲೋ ಬೋರ್ಡ ವಾಹನ ಚಾಲನಾ ಪರವಾನಗಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಈ ಯೋಜನೆಯ ಕುರಿತು ಇನ್ನು ಅಧಿಕ ಮಾಹಿತಿಯನ್ನು ಪಡೆಯಲು ಸಹಾಯವಾಣಿ ಸಂಖ್ಯೆ: 9482300400
Online application link for Car loan Subsidy scheme- ಅಪ್ಲಿಕೇಶನ್ ಹಾಕುಲು ವೆಬ್ಸೈಟ್ ಲಿಂಕ್:
ಆಸಕ್ತ ಅರ್ಹ ಅರ್ಜಿದಾರರು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ ಸ್ವಂತ ನೀವೆ ಖುದ್ದು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Step-1: ಪ್ರಥಮದಲ್ಲಿ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.
Step-2: ಇದಾದ ಬಳಿಕ ಲಾಗಿನ್ ಡೀಟೈಲ್ಸ್ ಅನ್ನು ಹಾಕಿ ಸೇವಾ ಸಿಂಧು ಪೋರ್ಟಲ್ ಗೆ ಲಾಗಿನ್ ಅಗಬೇಕು ಮೊದಲ ಬಾರಿಗೆ ಭೇಟಿ ಮಾಡುತ್ತಿರುವವರು ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಲಾಗಿನ್ ಅಗಬೇಕು.
Step-3: ಇಲ್ಲಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ದಿ ನಿಗಮ ಎಂದು ಸರ್ಚ್ ಮಾಡಿ “ಸ್ವಾವಲಂಭಿ ಸಾರಥಿ” ಯೋಜನೆಯನ್ನು ಆಯ್ಕೆ ಮಾಡಿಕೊಂಡು ಅಗತ್ಯ ವಿವರವನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.