Free Car Driving Training: ಉಚಿತ ವಾಹನ ತರಬೇತಿಗಾಗಿ ಅರ್ಜಿ ಆಹ್ವಾನ

Free Car Driving Training: ಉಚಿತ ವಾಹನ ತರಬೇತಿಗಾಗಿ ಅರ್ಜಿ ಆಹ್ವಾನ

ಎಲ್ಲರಿಗೂ ನಮಸ್ಕಾರ, ನೀವು ಕೂಡ ಉಚಿತ ವಾಹನ ತರಬೇತಿಗೆ ಅರ್ಜಿ ಸಲ್ಲಿಸಬೇಕೆ..? ಯಾರು ಈ ತರಬೇತಿಗೆ ಅರ್ಜಿ (Free Car Driving Training) ಸಲ್ಲಿಸಬಹುದು…? ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.



ಬೆಂ.ಮ.ಸಾ.ಸಂಸ್ಥೆಯು, ಕರ್ನಾಟಕದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್.ಟಿ)ಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ (Free Car Driving Training) ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ತರಬೇತಿಯನ್ನು ಪಡೆಯಲು ಇಚ್ಚಿಸುವ SC ಮತ್ತು ST ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ಅರ್ಹತೆಗಳು ಹಾಗೂ ಸಲ್ಲಿಸಬೇಕಾಗಿರುವ ದಾಖಲಾತಿಗಳ ವಿವರ ಈ ಕೆಳಗೆ ನೀಡಲಾಗಿದೆ.

ಲಘು ವಾಹನ ಚಾಲನಾ ತರಬೇತಿ (ಕಾರ್/ಜೀಪ್):

ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

ಭಾರಿ ವಾಹನ ಚಾಲನಾ ತರಬೇತಿ:

ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು. ಮತ್ತು ಲಘು ವಾಹನ ಚಾಲನಾ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರ್ಣಗೊಂಡಿರಬೇಕು. (ಅರ್ಜಿ ಸಲ್ಲಿಕೆ ದಿನಾಂಕಕ್ಕೆ)

Free Car Driving Training- ಬೇಕಾಗುವ ದಾಖಲೆಗಳು:

ಆಧಾರ್ ಕಾರ್ಡ್

ಜಾತಿ ಪ್ರಮಾಣ ಪತ್ರ

ಪಾಸ್‌ಪೋರ್ಟ್ ಅಳತೆಯ ಪೋಟೋ-5

ವಸತಿ ಸಹಿತ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ (ನಿಗದಿತ ಸಂಖ್ಯೆಯಂತೆ) ತರಬೇತಿ ಅವಧಿಯಲ್ಲಿ ವಸತಿ ಸೌಕರ್ಯ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್ (https://sevasindhuservices.karnataka.gov.in) ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಕೆ ಸಂಬಂಧಿತ ವಿಚಾರಣೆಗಾಗಿ ಸೇವಾಸಿಂಧು ಪೋರ್ಟಲ್ ಸಹಾಯ ಕೇಂದ್ರದ ಸಂಪರ್ಕ ಸಂಖ್ಯೆ: 08022279954, 8792662814/ 8792662816 ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು.

ತರಬೇತಿ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ವೆಬ್‌ಸೈಟ್ www.mybmtc.gov.in ನಿಂದ ಪಡೆದುಕೊಳ್ಳಬಹುದು ಮತ್ತು ದೂರವಾಣಿ ಸಂಖ್ಯೆ: 6364858520 / 7760991085.

ತರಬೇತಿಗೆ ಹಾಜರಾಗುವ ವೇಳೆಯಲ್ಲಿ ಅಭ್ಯರ್ಥಿಗಳು ಮೇಲಿನ ತಮ್ಮ ಮೂಲ ದಾಖಲೆ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಮುದ್ರಿತ ಅರ್ಜಿ ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗುವುದು.

Post a Comment

Previous Post Next Post

Top Post Ad

CLOSE ADS
CLOSE ADS
×