ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ವಿವಿಧ ಬಗ್ಗೆಯ ಪ್ರೋತ್ಸಾಹ ಧನ ಮತ್ತು ವಿದ್ಯಾರ್ಥಿ ವೇತನ ಪಡೆಯಲು(Student stipend application) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹ ಧನವನ್ನು(Student stipend) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
ಪ್ರತಿ ವರ್ಷ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಹಣಕಾಸಿನ ನೆರವನ್ನು ನೀಡುವ ದೇಸೆಯಲ್ಲಿ ವಿವಿಧ ಯೋಜನೆಯಡಿ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹ ಧನ ನೀಡಲಾಗುತ್ತದೆ ಅರ್ಹ ಅಭ್ಯರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.
Who can apply for Student stipend- ಯಾರಿಗೆಲ್ಲ ಅರ್ಜಿ ಸಲ್ಲಿಸಲು ಅವಕಾಶವಿದೆ?
ಪ್ರೋತ್ಸಾಹ ಧನ ಮತ್ತು ವಿದ್ಯಾರ್ಥಿ ವೇತನ ಪಡೆಯಲು ಪರಿಶಿಷ್ಟ ಜಾತಿಯ ವರ್ಗಕ್ಕೆ ಸೇರಿದವರು ಮತ್ತು ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
1) SSLC ಪ್ರೋತ್ಸಾಹ ಧನ:
10 ನೇ ತರಗತಿ/ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಗಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಸಲ್ಲಿಸಬಹುದು.
2) ಮೆಟ್ರಿಕ್ ನಂತರದ ಪ್ರೋತ್ಸಾಹ ಧನ:
12ನೇ ತರಗತಿ/ಪಿ.ಯು.ಸಿ, ಪಾಲಿಟೆಕ್ನಿಕ್ ಡಿಪ್ಲೋಮಾ, ಐ.ಟಿ.ಐ, ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಸಹ ಪ್ರೋತ್ಸಾಹ ಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿಯಲ್ಲಿ ಎಲ್ಲಿ ಸಲ್ಲಿಸಬೇಕು?
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಕಂಪ್ಯೂಟರ್ ಸೆಂಟರ್ ಅನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
Documents- ಅಗತ್ಯ ದಾಖಲೆಗಳು:
1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ.
2) ಬ್ಯಾಂಕ್ ಪಾಸ್ ಬುಕ್ ಪ್ರತಿ.
3) ಪೋಟೊ.
4) ಶಾಲಾ ವ್ಯಾಸಂಗ ಪ್ರಮಾಣ ಪತ್ರ.
5) ಮೊಬೈಲ್ ಸಂಖ್ಯೆ.
ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳು:
1) ಒಮ್ಮೆ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸದ ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಇರುವುದನ್ನು ಖಚಿತಪಡಿಸಿಕೊಳ್ಳಬೇಕು.
2) ಬ್ಯಾಂಕ್ ಅಕೌಂಟ್ ಇರುವ ಶಾಖೆಯನ್ನು ಭೇಟಿ ಮಾಡಿ ನಿಮ್ಮ ಬ್ಯಾಂಕ್ ಅಕೌಂಟ್ “Active” ಇದಿಯಾ ಎಂದು ಚೆಕ್ ಮಾಡಿಕೊಳ್ಳಬೇಕು.
3) ವಿದ್ಯಾರ್ಥಿಗಳು DBT Karnataka moble App ಅನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿರುವುದನ್ನು ಖಚಿತಪಡಿಸಿಕೊಳ್ಳಬೇಕು.
ಈ ಯೋಜನೆಗಳ ಕುರಿತು ಮತ್ತೊಷ್ಟು ಮಾಹಿತಿಯನ್ನು ಪಡೆಯಲು ಸಹಾಯವಾಣಿ: 9482300400