ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಕ್ಲರ್ಕ್ ಹುದ್ದೆ: 67 ಸಾವಿರ ರೂ. ಸಂಬಳ | ಯಾರೆಲ್ಲ ಅರ್ಜಿ ಸಲ್ಲಿಸಬಹುದು

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಕ್ಲರ್ಕ್ ಹುದ್ದೆ: 67 ಸಾವಿರ ರೂ. ಸಂಬಳ | ಯಾರೆಲ್ಲ ಅರ್ಜಿ ಸಲ್ಲಿಸಬಹುದು

karnataka lokayukta department recruitment:-ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ ಸಿ ಹುದ್ದೆಗಳಾದ ಕ್ಲರ್ಕ್ ಕಂ ಟೈಪಿಸ್ಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 30 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ನೇಮಕಾತಿಯ ಸಂಪೂರ್ಣ ವಿವರವನ್ನು ಕೆಳಗೆ ವಿವರಿಸಲಾಗಿದೆ.



Karnataka Lokayukta Department Recruitment 2024 ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳು :

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಕ್ಲರ್ಕ್ ಕಂ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಪಾಸಾಗಿರಬೇಕು. ಇದರ ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಪಾಸಾಗಿರಬೇಕು.

ವಯೋಮಿತಿ 

ಅರ್ಹತೆ ನೋಡುವುದಾದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷದಿಂದ ಗರಿಷ್ಟ 38 ವರ್ಷದ ಒಳಗಿರಬೇಕು.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ಸಂಬಳವೆಷ್ಟು?

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಕ್ಲರ್ಕ್ ಕಂ ಟೈಪಿಸ್ಟ್ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕ ರೂ. 34,100 ರೂ.ಯಿಂದ ರೂ. 67,100 ವರೆಗೆ ಇರಲಿದೆ.

ಅರ್ಜಿ ಶುಲ್ಕ: 

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇನ್ನುಳಿದ ವರ್ಗದವರು 250ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸುವ ಅವಧಿ: 

ಈ ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು 2024 ಅಕ್ಟೋಬರ್-30 ರಿಂದ ನವೆಂಬರ್-29 ರ ವರೆಗೆ ಆನ್ಲೈನ್ ಮೂಲಕ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ :

https://lokayukta.kar.nic.in/home.php

Post a Comment

Previous Post Next Post

Top Post Ad

CLOSE ADS
CLOSE ADS
×