ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ Yuvanidhi application-2024

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ Yuvanidhi application-2024

2024 ನೇ ವರ್ಷದಲ್ಲಿ ವ್ಯಾಸಂಗ ಮುಗಿಸಿರುವ ಅರ್ಹ ವಿದ್ಯಾರ್ಥಿಗಳಿಂದ ಯುವನಿಧಿ(Yuva nidhi) ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅಗತ್ಯ ದಾಖಲಾತಿಗಳೇನು? ಇತರೆ ಸಂಪೂರ್ಣ ವಿವರ ಇಲ್ಲಿ ತಿಳಿಸಲಾಗಿದೆ.



ಯುವನಿಧಿ ಯೋಜನೆಯಡಿ ಅಭ್ಯರ್ಥಿಯು ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ 180 ದಿನಗಳು ಕಳೆದರೂ ಉದ್ಯೋಗ ದೊರೆಯದೇ ಇದ್ದ ಪಕ್ಷದಲ್ಲಿ ಇಂತಹ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಈ ಯೋಜನೆಯಡಿ ಅರ್ಥಿಕ ನೆರವು ನೀಡಲಾಗುತ್ತದೆ.

Yuva nidhi Subsidy amount- ಯುವನಿಧಿ ಯೋಜನೆಯಡಿ ಎಷ್ಟು ಅರ್ಥಿಕ ನೆರವು ನೀಡಲಾಗುತ್ತದೆ?

ಪದವಿ ಅಥವಾ ಡಿಪ್ಲೋಮಾ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್‌ಗಳು ಸೇರಿದಂತೆ) ಪ್ರತಿ ತಿಂಗಳು ರೂ.3000/- ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500/- ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ನೀಡಲಾಗುತ್ತದೆ.

Yuvanidhi eligibility criteria- ಅರ್ಜಿ ಸಲ್ಲಿಸಲು ಅರ್ಹರು:

1) ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.

2) ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುತ್ತದೆ.

3) ಭತ್ಯೆಯನ್ನು DBT ಮೂಲಕ ವರ್ಗಾವಣೆ ಮಾಡಲಾಗುತ್ತದೆ, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುಬಹುದು.

4) ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ.

Post a Comment

Previous Post Next Post

Top Post Ad

CLOSE ADS
CLOSE ADS
×