Free cylinder scheme-ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ

SVR Creations
0

ujjwal yojana:-ಅರ್ಹ ಮಹಿಳೆಯರಿಗೆ ಕೇಂದ್ರ ಸರಕಾರದ ಉಜ್ವಲ 2.0 ಯೋಜನೆಯಡಿ(Ujjwala yojana) ಉಚಿತ ಗ್ಯಾಸ್ ಸ್ಟಾವ್ ಮತ್ತು ಸಿಲಿಂಡರ್ ಅನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇತ್ತಿಚೀನ ದಿನಗಳಲ್ಲಿ ಬಹುತೇಕ ಗ್ರಾಮೀಣ ಮತ್ತು ನಗರ ಪ್ರದೇಶದ ಮನೆಗಳಲ್ಲಿ ಅಡುಗೆ ತಯಾರಿಕೆಗೆ ಗ್ಯಾಸ್ ಸಿಲಿಂಡರ್ ಗಳಲ್ಲೇ(Free Gas) ಬಳಕೆ ಮಾಡಲಾಗುತ್ತದ್ದು, ಅರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಗ್ಯಾಸ್ ಸಿಲಿಂಡರ್ ಅನ್ನು ಹೊಂದಲು ನೆರವಾಗಲು ಕೇಂದ್ರ ಸರಕಾರದಿಂದ ಉಜ್ವಲ 2.0 ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯಡಿ ಉಚಿತವಾಗಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟಾವ್ ಅನ್ನು ನೀಡಲಾಅಗುತ್ತದೆ.

ಉಜ್ವಲ 2.0 ಯೋಜನೆಯ ಪ್ರಯೋಜನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

PMUY-ಉಜ್ವಲ 2.0 ಯೋಜನೆ:

ಕೇಂದ್ರ ಸರಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದಿಂದ (MOPNG) 2016 ರಲ್ಲಿ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಕುಟುಂಬಗಳಿಗೆ ಎಲ್‌ಪಿಜಿಯಂತಹ ಶುದ್ಧ ಅಡುಗೆ ಇಂಧನವನ್ನು ಒದಗಿಸಲು ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ (PMUY) ಯನ್ನು ಜಾರಿಗೆ ತರಲಾಗಿದೆ.

ಮಹಿಳೆಯರು ಅಡುಗೆಯನ್ನು ತಯಾರಿಸಲು ಸಾಂಪ್ರದಾಯಿಕ ವಿಧಾನವನ್ನು ಅನುಸರಿಸಿ ಅಡುಗೆ ಇಂಧನಗಳಾದ ಉರುವಲು, ಕಲ್ಲಿದ್ದಲು, ಹಸುವಿನ ಸಗಣಿ/ಬೆರಣಿ ಇತ್ಯಾದಿಗಳನ್ನು ಬಳಸುತ್ತಿದ್ದರು. ಸಾಂಪ್ರದಾಯಿಕ ಅಡುಗೆ ಇಂಧನಗಳ ಬಳಕೆಯು ಗ್ರಾಮೀಣ ಮಹಿಳೆಯರ ಆರೋಗ್ಯದ ಮೇಲೆ ಮತ್ತು ಪರಿಸರದ ಮೇಲೆ ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ ಇದನ್ನು ನಿಯಂತ್ರಣಕ್ಕೆ ತರಲು ಈ ಯೋಜನೆಯನ್ನು ಅನುಷ್ಥಾನಗೊಳಿಸಲಾಗುತ್ತಿದೆ.

Who can apply For Ujjwala yojana -ಅರ್ಜಿ ಸಲ್ಲಿಸಲು ಅರ್ಹರು:

ಅರ್ಜಿದಾರರ ವಯಸ್ಸು 18 ತುಂಬಿರಬೇಕು.

ಅರ್ಜಿದಾರರು ಹಿಂದುಳಿದ ವರ್ಗಕ್ಕೆ ಸೇರಿದ ಕುಟುಂಬದವರಾಗಿರಬೇಕು ಹಾಗೂ ಬಿಪಿಎಲ್ ಕಾರ್ಡ, ಎಸ್.ಸಿ/ಎಸ್.ಟಿ, ಬುಡಕಟ್ಟು ವರ್ಗಕ್ಕೆ ಸೇರಿದವರಾಗಿರಬೇಕು.

ತಮ್ಮ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಹೊಂದಿರಬಾರದು.

ಹೊಸದಾಗಿ ಮದುವೆಯಾಗಿ(ನವ ದಂಪತಿಗಳು) ರೇಶನ್ ಕಾರ್ಡ ಹೊಂದಿರುವವರು

Documents-ಅರ್ಜಿ ಸಲ್ಲಿಸಲು ದಾಖಲೆಗಳು:

1) ಅರ್ಜಿದಾರರ ರೇಷನ್ ಕಾರ್ಡ

2) ಆಧಾರ್ ಕಾರ್ಡ

3) ಬ್ಯಾಂಕ್ ಪಾಸ್ ಬುಕ್

4) ಪೋಟೋ

How to apply for Ujjwala yojana- ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅರ್ಜಿದಾರರು ಎರಡು ವಿಧಾನವನ್ನು ಅನುಸರಿಸಿ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ (PMUY) ಅಡಿಯಲ್ಲಿ ಉಚಿತ ಗ್ಯಾಸ್ ಮತ್ತು ಸಿಲಿಂಡರ್ ಅನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.

ವಿಧಾನ-1: ಗ್ಯಾಸ್ ಸಿಲಿಂಡರ್ ಸರಬರಾಜು ಏಜೆನ್ಸಿಯ ಕಚೇರಿಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು:

ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ಯಾಸ್ ಸಿಲಿಂಡರ್ ಸರಬರಾಜು ಏಜೆನ್ಸಿಯ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ವಿಧಾನ-2:

ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಅಧಿಕೃತ ಈ ಯೋಜನೆಯ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: Apply Now ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿದ ಬಳಿಕ ಈ ಪೇಜ್ ನಲ್ಲಿ “ಆನ್‌ಲೈನ್ ಪೋರ್ಟಲ್” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮಗೆ ಯಾವ ಕಂಪನಿಯ ಗ್ಯಾಸ್ ಸಿಲಿಂಡರ್ ಅವಶ್ಯಕತೆ ಇರುತ್ತದೆಯೋ ಅದರ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.

Step-3: ಈ ಪೇಜ್ ನಲ್ಲಿ “ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ” ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ದಾಖಲಾತಿಗಳನ್ನು ಮತ್ತು ವಿವರವನ್ನು ಭರ್ತಿ ಮಾಡಿ ಆರ್ಜಿ ಸಲ್ಲಿಸಬಹುದು.

Post a Comment

0 Comments
* Please Don't Spam Here. All the Comments are Reviewed by Admin.
Post a Comment (0)

#buttons=(Accept !) #days=(20)

Our website uses cookies to enhance your experience. Learn More
Accept !
To Top