SSP scholarship 2024-ವಿದ್ಯಾರ್ಥಿ ವೇತನ ಪಡೆಯಲು ಹೊಸ ಆದೇಶ ಪ್ರಕಟ

SSP scholarship 2024-ವಿದ್ಯಾರ್ಥಿ ವೇತನ ಪಡೆಯಲು ಹೊಸ ಆದೇಶ ಪ್ರಕಟ

SSP scholarship:-ರಾಜ್ಯ ಸರಕಾರದಿಂದ ವಿವಿಧ ಇಲಾಖೆಯ ಮೂಲಕ ನೀಡುವ ವಿದ್ಯಾರ್ಥಿ ವೇತನಕ್ಕೆ(SSP scholarship) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು ಈ ಕುರಿತು ನೂತನವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಹೊರಡಿಸಿರುವ ನೂತನ ಪ್ರಕಟಣೆ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ.

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸಿಸುವ ಕುಟುಂಬದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗಲು ರಾಜ್ಯ ಸರಕಾರದಿಂದ ವಿವಿಧ ಇಲಾಖೆಯ ಮೂಲಕ ಪ್ರತಿ ವರ್ಷ ವಿದ್ಯಾರ್ಥಿ ವೇತನವನ್ನು(scholarship) ನೀಡಲಾಗುತ್ತದೆ ಇದರಂತೆ ಈ ವರ್ಷವು ಸಹ ವಿದ್ಯಾರ್ಥಿ ವೇತನ ಪಡೆಯಲು SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ SSP ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಅನ್ಲೈನ್ ಮೂಲಕ ಅರ್ಜಿಯನ್ನು ಹಾಕಬೇಕು ಇದರ ಜೊತೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ವಿದ್ಯಾರ್ಥಿ ವೇತನಗಳಿಗೆ ಇ-ಕೆವೈಸಿಯನ್ನು ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

Scholarship-ವಿದ್ಯಾರ್ಥಿ ವೇತನ ಪಡೆಯಲು ಹೊಸ ಆದೇಶ ಪ್ರಕಟ:

ರಾಜ್ಯ ಸರಕಾರದಡಿಯಲ್ಲಿ ಕಾರ್ಯನಿರ್ವಹಿಸುವ ಸಮಾಜ ಕಲ್ಯಾಣ ಇಲಾಖೆಯ ನೂತನ ಪ್ರಕಟಣೆಯನ್ವಯ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸುವವರು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅಗತ್ಯ ಮಾಹಿತಿಯನ್ನು ಒದಗಿಸಿ ಇ-ಕೆವೈಸಿಯನ್ನು ಮಾಡಿಕೊಳ್ಳುವುದು ಕಡ್ಡಾಯ ಎಂದು ಸೂಚನೆ ನೀಡಲಾಗಿದೆ.

SSP scholarship e-KYC: ಇ-ಕೆವೈಸಿಯನ್ನು ಎಲ್ಲಿ ಮಾಡಿಸಬೇಕು?

ವಿದ್ಯಾರ್ಥಿ ವೇತನವನ್ನು ಅರ್ಹರಿರುವ ವಿದ್ಯಾರ್ಥಿಗಳು ತಮ್ಮ ಹತ್ತಿರ ಗ್ರಾಮ ಒನ್/ಬೆಂಗಳೂರು ಒನ್ ಕೇಂದ್ರವನ್ನು ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಆನ್ಲೈನ್ ಮೂಲಕ ಇ-ಕೆವೈಸಿಯನ್ನು ಮಾಡಿಕೊಳ್ಳಬೇಕು.

Scholarship Documents-ಅಗತ್ಯ ದಾಖಲಾತಿಗಳು:

ಅರ್ಜಿದಾರರ ಆಧಾರ್ ಕಾರ್ಡ ಪ್ರತಿ

ಬ್ಯಾಂಕ್ ಪಾಸ್ ಬುಕ್

ಮೊಬೈಲ್ ನಂಬರ್

SSP scholarship Online application-ಆನ್ಲೈನ್ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ವಿವಿಧ ಇಲಾಖೆಯಿಂದ ನೀಡುವ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ರಾಜ್ಯ ಸರಕಾರದ ಅಧಿಕೃತ SSP ತಂತ್ರಾಂಶವನ್ನು ಪ್ರವೇಶ ಮಾಡಿ ಈ ಕೆಳಗೆ ವಿವರಿಸಿರುವ ಹಂತವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ತಮ್ಮ ಹತ್ತಿರದ ಗ್ರಾಮ ಒನ್/ ಕಂಪ್ಯೂಟರ್ ಸೆಂಟರ್ ಅನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

Step-1: ಇಲ್ಲಿ ಕ್ಲಿಕ್ SSP scholarship ಮಾಡಿ ಅಧಿಕೃತ SSP ವಿದ್ಯಾರ್ಥಿ ವೇತನದ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ಬಳಿಕ ಈ ವೆಬ್ಸೈಟ್ ಗೆ ಮೊದಲ ಬಾರಿಗೆ ಭೇಟಿ ಮಾಡುತ್ತಿರುವವರು ಮೊದಲು ಖಾತೆಯನ್ನು ರಚನೆ ಮಾಡಿಕೊಳ್ಳಬೇಕು. ಖಾತೆಯನ್ನು ರಚನೆ ಮಾಡಿಕೊಂಡು “ಲಾಗಿನ್” ಬಟನ್ ಮೇಲೆ ಕ್ಲಿಕ್ ಮಾಡಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ಹಾಕಿ ಲಾಗಿನ್ ಅಗಬೇಕು.

Step-3: ಮೇಲಿನ ವಿಧಾನವನ್ನು ಅನುಸರಿಸಿ ಲಾಗಿನ್ ಅದ ಬಳಿಕ ಇಲ್ಲಿ ಕೇಳುವ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Application dates-ಇಲಾಖಾವಾರು ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಗಳು:

1) ಹಿಂದುಳಿದ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/12/2024

2) ತಾಂತ್ರಿಕ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2024

3) ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2024

4) ಕಾರ್ಮಿಕ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2024

5) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2024

6) ಕೃಷಿ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2025

7) ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/02/2025

Post a Comment

Previous Post Next Post

Top Post Ad

CLOSE ADS
CLOSE ADS
×