ಸ್ವಯಂ ಉದ್ಯೋಗ ಪ್ರಾರಂಭಿಸಲು 1 ಲಕ್ಷ ರೂ. ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 29

ಸ್ವಯಂ ಉದ್ಯೋಗ ಪ್ರಾರಂಭಿಸಲು 1 ಲಕ್ಷ ರೂ. ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 29

ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಅಹ್ವಾನ:ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಸ್ವಯಂ ಉದ್ಯೋಗಾಕಾಂಕ್ಷಿಗಳಿಗೆ ವಿಶೇಷ ಅವಕಾಶಗಳನ್ನು ಒದಗಿಸುತ್ತಿದ್ದು, ಇದೀಗ ನಿಗಮವು 2024-25ನೇ ಸಾಲಿನಲ್ಲಿ ನಿಗಮವು ‘ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ’ ಮತ್ತು ‘ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್’ ಯೋಜನೆಗಳಡಿ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಪರಿಶಿಷ್ಟ ಜಾತಿಯ(Scheduled caste) ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ದಾಖಲೆಗಳು ಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ:

ಈ ಯೋಜನೆಯಡಿ, ಅರ್ಹ ಅಭ್ಯರ್ಥಿಗಳಿಗೆ ಕುರಿ ಸಾಕಾಣಿಕೆಗೆ ಅಗತ್ಯವಾದ ಸಾಲ ಸೌಲಭ್ಯಗಳನ್ನು(Loan facilities) ಒದಗಿಸಲಾಗುತ್ತದೆ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ(Sheep farming) ಉದ್ದೇಶಕ್ಕಾಗಿ ಸಹಾಯಧನ ಮತ್ತು ಸಾಲವನ್ನು ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ ರೂ.1 ಲಕ್ಷವಾಗಿದ್ದು, ಇದರಲ್ಲಿ ರೂ.50,000 ಸಹಾಯಧನ ಮತ್ತು ರೂ.50,000 ಸಾಲವನ್ನು ಪಡೆಯಬಹುದು.

ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್(swawalambi saarathi food cart) ಯೋಜನೆ:

ಈ ಯೋಜನೆಯಡಿ, ಆಹಾರ ಮಾರಾಟಕ್ಕಾಗಿ ಫುಡ್ ಕಾರ್ಟ್‌ಗಳನ್ನು ಸ್ಥಾಪಿಸಲು ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ. ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕ್‌ಗಳ ಸಹಯೋಗದೊಂದಿಗೆ ಫುಡ್ ಕಾರ್ಟ್ ಉದ್ದೇಶಕ್ಕಾಗಿ ಯೋಜನೆ ಅನುಷ್ಠಾನಗೊಳ್ಳುತ್ತದೆ. ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಠ ರೂ.4 ಲಕ್ಷಗಳ ಸಹಾಯಧನವನ್ನು ನೀಡಲಾಗುತ್ತದೆ, ಉಳಿದ ಮೊತ್ತವನ್ನು ಬ್ಯಾಂಕ್ ನಲ್ಲಿ ಸಾಲ(bank loan)ವಾಗಿ ಪಡೆಯಬಹುದು.

ಅರ್ಜಿ ಸಲ್ಲಿಸಲು ಎಂದು ಕೊನೆಯ ದಿನಾಂಕ :

ಅರ್ಜಿ ಸಲ್ಲಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 29, 2024ರೊಳಗೆ(December 29, 2024) ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಪರಿಶಿಷ್ಟ ಜಾತಿ ಪ್ರಮಾಣಪತ್ರ
  • ಆದಾಯ ಪ್ರಮಾಣಪತ್ರ
  • ಜನನ ಪ್ರಮಾಣ ಪತ್ರ
  • ರಾಜ್ಯದ ಖಾಯಂ ನಿವಾಸಿ ಪ್ರಮಾಣಪತ್ರ
  • ಆಧಾರ್ ಕಾರ್ಡ್
  • ಪಾಸ್‌ಪೋರ್ಟ್ ಸೈಜ್ ಫೋಟೋ

ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳು ಇರಬೇಕು?:

  • ಮೊದಲಿಗೆ ಅಭ್ಯರ್ಥಿಗಳು ರಾಜ್ಯದ ಪರಿಶಿಷ್ಟ ಜಾತಿಗೆ ಸೇರಿರಬೇಕು(ಈ ಹಿಂದೆ ಯಾವುದೇ ನಿಗಮದಿಂದ ಸಾಲ ಸೌಲಭ್ಯ ಪಡೆದಿರಬಾರದು).
  • ರಾಜ್ಯದ ಖಾಯಂ ನಿವಾಸಿಯಾಗಿರಬೇಕು(permanent resident).
  • ವಯೋಮಿತಿ 18 ರಿಂದ 55 ವರ್ಷಗಳ ನಡುವೆ ಇರಬೇಕು.
  • ಎಲ್ಲಾ ಮೂಲಗಳಿಂದ ವಾರ್ಷಿಕ ಕೌಟುಂಬಿಕ ಆದಾಯ ರೂ. 3,00,000/- ಕ್ಕಿಂತ ಕಡಿಮೆ ಇರಬೇಕು

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್‌ಸೈಟ್ https://adcl.karnataka.gov.in ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ 9482300400 ಅನ್ನು ಸಂಪರ್ಕಿಸಬಹುದು. ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 0820-2574884ಗೆ ಸಂಪರ್ಕಿಸಬಹುದು.

ಗಮನಿಸಿ :

ಜಿಲ್ಲಾ ವ್ಯವಸ್ಥಾಪಕರ ಕಚೇರಿ: 0820-2574884

ಕಲ್ಯಾಣ ಮಿತ್ರ ಸಹಾಯವಾಣಿ: 9482300400

ಈ ಯೋಜನೆಗಳು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗದ ಅವಕಾಶಗಳನ್ನು ಒದಗಿಸಲು ಮತ್ತು ಆರ್ಥಿಕ ಸ್ವಾವಲಂಬನೆಗೆ ಉತ್ತೇಜನ ನೀಡಲು ಉದ್ದೇಶಿತವಾಗಿದೆ. ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಲು ಡಿಸೆಂಬರ್ 29, 2024ರೊಳಗೆ ಅರ್ಜಿ ಸಲ್ಲಿಸಬೇಕು.


Post a Comment

Previous Post Next Post

Top Post Ad

CLOSE ADS
CLOSE ADS
×