ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ತನ್ನ ಅಧಿಕೃತ ಜಾಲತಾಣದಲ್ಲಿ 2nd ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಯನ್ನು(2nd PUC Exam) ಬಿಡುಗಡೆಗೊಳಿಸಲಾಗಿದ್ದು ವಿದ್ಯಾರ್ಥಿಗಳು ಈ ಅಂಕಣದಲ್ಲಿ ನೀಡಿರುವ ವೆಬ್ಸೈಟ್ ಲಿಂಕ್ ಅನ್ನು ಬಳಕೆ ಮಾಡಿಕೊಂಡು ಈ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಈ ಕುರಿತು ಪತ್ರಿಕಾ ಪ್ರಕಟಣೆ(PUC Board)ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದು್ 2024-25ನೇ ಸಾಲಿನ 2nd ಪಿಯುಸಿ ಎಲ್ಲಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪದವಿ ಪೂರ್ವ ಪಠ್ಯಕ್ರಮ ಬೋಧಿಸುವ ಉಪನ್ಯಾಸಕರಿಂದ ತಯಾರಿಸಿ ಮಂಡಳಿಯ ಅಧಿಕೃತ ವೆಬ್ಸೈಟ್ ನಲ್ಲಿಅಪ್ಲೋಡ್ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಹಿಂದಿನ ವರ್ಷಗಳ ಲಿಖಿತ ಪರೀಕ್ಷೆಗೆ 100 ಅಂಕಗಳ ಪ್ರಶ್ನೆ ಪತ್ರಿಕೆಗಳ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರಿಸಬೇಕಾಗಿತ್ತು. ಆದ್ದರಿಂದ 3 ಗಂಟೆ 15 ನಿಮಿಷ ಕಾಲಾವಕಾಶ ನೀಡಲಾಗುತ್ತಿತ್ತು. ಆದರೇ ಪ್ರಸ್ತುತ ವರ್ಷ 70 ರಿಂದ 80 ಅಂಕಗಳ ಪ್ರಶ್ನೆ ಪತ್ರಿಕೆಗೆ ಉತ್ತರಿಸಬೇಕಾಗಿದೆ. ಈ ಕಾರಣದಿಂದ ಪರೀಕ್ಷಾ ಅವಧಿಯನ್ನು 3 ಗಂಟೆಗೆ ಇಳಿಕೆ ಮಾಡಲಾಗಿದೆ.
2nd PUC SUBJECTWISE MODEL QUESTION PAPERS- ದ್ವೀತಿಯ ಪಿಯುಸಿ ಮಾದರಿ ಪ್ರಶ್ನೆಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ವಿಧಾನ:
ವಿದ್ಯಾರ್ಥಿಗಳು ಮೊಬೈಲ್ ನಲ್ಲೇ ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಒಂದೆರಡು ಕ್ಲಿಕ್ ನಲ್ಲೇ 2nd ಪಿಯುಸಿ ಮಾದರಿ ಪ್ರಶ್ನೆಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
Step-1: ಪ್ರಥಮದಲ್ಲಿ ಇಲ್ಲಿ ಕ್ಲಿಕ್ 2nd PUC MODEL QUESTION PAPERS DOWNLOAD ಮಾಡಿ ಅಧಿಕೃತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ತಂತ್ರಾಂಶವನ್ನು ಭೇಟಿ ಮಾಡಬೇಕು.
Step-2: ಇಲ್ಲಿ ಮುಖಪುಟದಲ್ಲಿ ಕಾಣುವ ವಿಷಯವಾರು ಪತ್ರಿಕೆಯ ಮೇಲೆ ಕ್ಲಿಕ್ ಮಾಡಿ ಬಲಬದಿಯಲ್ಲಿ ಮೇಲೆ ಕಾಣುವ Download ಐಕಾನ್ ಬಟನ್ ಮೇಲೆ ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬೇಕು.
PUC MODEL QUESTION PAPERS ORDERS-ಅಧಿಕೃತ ಆದೇಶದ ವಿವರ ಹೀಗಿದೆ:
2024-25 ನೇ ಸಾಲಿಗೆ ದ್ವಿತೀಯ ಪಿಯುಸಿ ತರಗತಿಗಳಿಗೆ ಬೋಧಿಸುವ ఎలా ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಪದವಿಪೂರ್ವ ಪಠ್ಯಕ್ರಮ ಬೋಧಿಸುವ ಉಪನ್ಯಾಸಕರುಗಳಿಂದ ತಯಾರಿಸಿ ಮಂಡಳಿಯ ಜಾಲತಾಣದಲ್ಲಿ ಲಭ್ಯಗೊಳಿಸಲಾಗಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ವಯ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆಗಳಿಗೆ ಸಜ್ಜುಗೊಳಿಸಿ ಫಲಿತಾಂಶ ಉತ್ತಮಪಡಿಸಲು ಪ್ರಾಂಶುಪಾಲರು/ ಉಪನ್ಯಾಸಕರುಗಳು ಕಾಲೇಜು ಹಂತದಲ್ಲಿ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.
1) ಈ ಹಿಂದೆ ಲಿಖಿತ ಪರೀಕ್ಷೆಗೆ 100 ಅಂಕಗಳ ಪ್ರಶ್ನೆಪತ್ರಿಕೆಯನ್ನು ಉತ್ತರಿಸಲು ಪರೀಕ್ಷೆಯಲ್ಲಿ 3 ಗಂಟೆ 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತಿತ್ತು. ಈಗ ಗರಿಷ್ಠ 70/80 ಅಂಕಗಳ ಪ್ರಶ್ನೆಪತ್ರಿಕೆಗೆ ಉತ್ತರಿಸಬೇಕಾಗಿರುವುದರಿಂದ ಲಿಖಿತ ಪರೀಕ್ಷಾ ಅವಧಿಯನ್ನು 3 ಗಂಟೆಗೆ ನಿಗದಿಪಡಿಸಲಾಗಿದೆ. ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಓದಿಕೊಳ್ಳಲು 15 ನಿಮಿಷಗಳ ಕಾಲಾವಕಾಶವನ್ನು ಹಾಗೂ ಉತ್ತರಿಸಲು 2 ಗಂಟೆ 45 ನಿಮಿಷಗಳ ಕಾಲಾವಕಾಶವನ್ನು ನೀಡಲಾಗಿದೆ.
2) ಎನ್.ಎಸ್.ಕ್ಯು.ಎಫ್ ಹಾಗೂ ಹಿಂದೂಸ್ತಾನಿ ಸಂಗೀತ ವಿಷಯಗಳಲ್ಲಿ 60/40 ಅಂಕಗಳ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸಬೇಕಾದ ಅವಧಿಯನ್ನು ಈ ಹಿಂದಿನಂತೆ 2 ಗಂಟೆ 30 ನಿಮಿಷವನ್ನು ಮುಂದುವರಿಸಲಾಗಿದೆ.
3) ಪರೀಕ್ಷಾ ದಿನಗಳಂದು ಪರೀಕ್ಷೆಯನ್ನು ಬೆಳಗಿನ ಅವಧಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಮಧ್ಯಾಹ್ನದ ಅವಧಿಯಲ್ಲಿ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸುವುದು.
4) ಪ್ರತಿ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ ವಿದ್ಯಾರ್ಥಿಗಳು ಉತ್ತರಿಸಬೇಕಾದ ಗರಿಷ್ಠ ಅಂಕಗಳ ಶೇಕಡ 50 ರಷ್ಟು ಅಂಕಗಳಿಗೆ ಆಯ್ಕೆ ಪ್ರಶ್ನೆಗಳನ್ನು ನೀಡಲಾಗಿದೆ. ಪ್ರಾಯೋಗಿಕ ಪರೀಕ್ಷೆ ಇರುವ ವಿಷಯಗಳಲ್ಲಿ (ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಗೃಹ ವಿಜ್ಞಾನ) ಪ್ರಶ್ನೆ ಪತ್ರಿಕೆಗಳ ಗರಿಷ್ಠ ಅಂಕಗಳು 70 ಇದ್ದು, ಪ್ರಶ್ನೆ ಪತ್ರಿಕೆಯಲ್ಲಿ ಆಯ್ಕೆ ಪ್ರಶ್ನೆಗಳನ್ನೊಳಗೊಂಡಂತೆ 105 ಅಂಕಗಳಿಗೆ ಪ್ರಶ್ನೆಗಳಿರುತ್ತವೆ. ಹಾಗೆಯೇ ಪುಯೋಗ ರಹಿತ ವಿಷಯಗಳಲ್ಲಿ (NSQF ಮತ್ತು ಹಿಂದುಸ್ತಾನಿ ಸಂಗೀತ ಹೊರತುಪಡಿಸಿ ) ಪ್ರಶ್ನೆ ಪತ್ರಿಕೆಗಳಲ್ಲಿ ಗರಿಷ್ಠ ಅಂಕಗಳು 80 ಇದ್ದು, ಪ್ರಶ್ನೆ ಪತ್ರಿಕೆಯಲ್ಲಿ ಆಯ್ಕೆ ಪ್ರಶ್ನೆಗಳನ್ನೊಳಗೊಂಡಂತೆ 120 ಅಂಕಗಳಿಗೆ ಪ್ರಶ್ನೆಗಳಿರುತ್ತವೆ.
5) ಪ್ರತಿ ಮಾದರಿ ಪ್ರಶ್ನೆ ಪತ್ರಿಕೆಯು ಪ್ರತ್ಯೇಕ ನೀಲ ನಕ್ಷೆ (blue print) ಹೊಂದಿದ್ದು, ಈ ನೀಲನಕ್ಷೆಗಳು ಕೊಟ್ಟಿರುವ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಮಾತ್ರ ಸೀಮಿತವಾಗಿರುತ್ತವೆ. ನೀಲನಕ್ಷೆಯು ಒಂದೇ ವಿಷಯದ ಬೇರೆ ಬೇರೆ ಪ್ರಶ್ನೆಪತ್ರಿಕೆಗಳಿಗೆ ಬೇರೆ ಬೇರೆಯಾಗಿರುತ್ತದೆ.
6) ಪ್ರತಿ ವಿಷಯದಲ್ಲೂ ಪ್ರಶ್ನೆಪತ್ರಿಕೆಯನ್ನು ತಯಾರಿಸುವಾಗ ಬೋಧನಾ ಅವಧಿ ಹಾಗೂ ವಿದ್ಯಾರ್ಥಿಗಳ ಅರಿವಿನ ಮಟ್ಟಗಳಿಗೆ (Teaching hour wise and cognitive level wise weightage) ನಿರ್ದಿಷ್ಟ ಅಂಕಗಳನ್ನು ನಿಗದಿಪಡಿಸಿ ಏಕರೂಪತೆಯನ್ನು ತರಲಾಗಿದೆ.
ಈ ಕುರಿತು ಅಧಿಕೃತ ಆದೇಶದ ಪ್ರತಿಯನ್ನು ಡೌನ್ಲೋಡ್ ಮಾಡಲು ಲಿಂಕ್- Download Now